ನವದೆಹಲಿ: ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಭೇಟಿಯಾದ ಒಂದು ದಿನದ ನಂತರ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಗುರುವಾರ ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದರು.


COMMERCIAL BREAK
SCROLL TO CONTINUE READING

ಸೋನಿಯಾ ಗಾಂಧಿಯವರೊಂದಿಗಿನ ಸಭೆಯು ಒಂದು ಗಂಟೆ ಕಾಲ ನಡೆಯಿತು, ಅಲ್ಲಿ ಇಬ್ಬರೂ ರಾಜಕೀಯ ಪರಿಸ್ಥಿತಿ ಮತ್ತು ರಾಜಸ್ಥಾನದ ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ವರದಿಯಾಗಿದೆ.


ಇದನ್ನೂ ಓದಿ : ಆತ್ಮವಂಚಕ ದಲಿತ ವಿರೋಧಿ ಸಿದ್ದರಾಮಯ್ಯರ ಮಾತು ನಂಬಿಕೆಗೆ ಯೋಗ್ಯವೇ?: ಬಿಜೆಪಿ


ಕಾಂಗ್ರೆಸ್ ಮುಖ್ಯಸ್ಥರನ್ನು ಭೇಟಿ ಮಾಡಿದ ನಂತರ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಗೆಹ್ಲೋಟ್ (Ashok Gehlot ),"ನಾನು ಪಕ್ಷದ ಹೈಕಮಾಂಡ್‌ಗೆ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ವಿವರಿಸಿದ್ದೇನೆ.ಪಕ್ಷದ ಹೈಕಮಾಂಡ್ ರಾಜಸ್ಥಾನದಲ್ಲಿ ಸಚಿವ ಸಂಪುಟ ಪುನಾರಚನೆಯ ಬಗ್ಗೆ ನಿರ್ಧರಿಸುತ್ತದೆ.ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ನಿರ್ಧಾರವನ್ನು ನಾವು ಒಪ್ಪಿಕೊಳ್ಳುತ್ತೇವೆ.ರಾಜಸ್ಥಾನ ರಾಜ್ಯದಲ್ಲಿ ಉತ್ತಮ ಆಡಳಿತ ಮುಂದುವರಿಯಬೇಕೆಂದು ನಾನು ಬಯಸುತ್ತೇನೆ"ಎಂದು ಅವರು ಹೇಳಿದ್ದಾರೆ.


ಬುಧವಾರ, ರಾಜಸ್ಥಾನ ಸಿಎಂ ಮತ್ತು ಹಿರಿಯ ಕಾಂಗ್ರೆಸ್ ನಾಯಕರು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯನ್ನು ರಾಹುಲ್ ಗಾಂಧಿ ಅವರ ನಿವಾಸದಲ್ಲಿ ಭೇಟಿ ಮಾಡಿದ್ದರು, ಅಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಅಜಯ್ ಮಾಕನ್ ಮತ್ತು ಕೆಸಿ ವೇಣುಗೋಪಾಲ್ ಕೂಡ ಉಪಸ್ಥಿತರಿದ್ದರು. ಆದರೆ, ರಾಹುಲ್ ಗಾಂಧಿ ಸಭೆಗೆ ಹಾಜರಾಗಿರಲಿಲ್ಲ.


ಇದನ್ನೂ ಓದಿ : ಟಿಪ್ಪು ಮತಾಂಧ ಎನ್ನುವ ಬಿಜೆಪಿಯವರೇ ಟಿಪ್ಪು ಜಯಂತಿ ಮಾಡಿದ್ರು: ಸಿದ್ದರಾಮಯ್ಯ


ಸಭೆಯ ನಂತರ ಮಾಕೆನ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ,"ನಾವು ರಾಜಸ್ಥಾನದ ರಾಜಕೀಯ ಪರಿಸ್ಥಿತಿಯನ್ನು ಚರ್ಚಿಸಿದ್ದೇವೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಮರಳುವುದನ್ನು ಖಚಿತಪಡಿಸಿಕೊಳ್ಳಲು ನಾವು ಮಾರ್ಗಸೂಚಿಯನ್ನು ಚರ್ಚಿಸಿದ್ದೇವೆ.ಇತ್ತೀಚಿನ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನ ಉತ್ತಮ ಪ್ರದರ್ಶನದ ಬಗ್ಗೆಯೂ ನಾಯಕರು ಚರ್ಚಿಸಿದ್ದಾರೆ" ಎಂದು ಮಾಕನ್ ಹೇಳಿದರು.


ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಅವರ ನಿಷ್ಠಾವಂತರಿಗೆ ಅವಕಾಶ ಕಲ್ಪಿಸಲು ರಾಜಸ್ಥಾನ ಸಂಪುಟದಲ್ಲಿ ಪ್ರಮುಖ ಪುನರ್ರಚನೆ ನಿರೀಕ್ಷಿಸಲಾಗಿದೆ.ಇತ್ತೀಚೆಗೆ, ಪೈಲಟ್ ಅವರು ತಮ್ಮ ಭವಿಷ್ಯದ ಬಗ್ಗೆ ಚರ್ಚಿಸಲು ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ