ನವದೆಹಲಿ: ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ ನೂರ್ ಪುರ ನಲ್ಲಿ ಶಾಲಾ ಬಸ್ ಆಳಕ್ಕೆ ಬಿದ್ದು ಕನಿಷ್ಠ 26 ಮಕ್ಕಳು  ಮೃತಪಟ್ಟು 25 ಮಂದಿಕ್ಕೂ ಅಧಿಕ ಜನರು ಗಾಯಗೊಂಡಿರುವ ಭೀಕರ ಘಟನೆ ನಡೆದಿದೆ.


COMMERCIAL BREAK
SCROLL TO CONTINUE READING

ಸುಮಾರು 200 ಅಡಿ ಆಳದಲ್ಲಿ ಬಸ್ ಉರುಳಿ ಬಿದ್ದಿದ್ದು. ಸ್ಥಳೀಯ ಜನರ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ ಸಹಿತ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದೆ.


ಗಾಯಗೊಂಡಿರುವ ಮಕ್ಕಳನ್ನು ನೂರ್ಪುರದ ಸಿವಿಲ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಅಪಘಾತದ ಕಾರಣವನ್ನು ತನಿಖೆ ಮಾಡುತ್ತಿದ್ದಾರೆ.ಅಲ್ಲದೆ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಕೂಡಾ  ಅಪಘಾತಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ.


ಈ ಕುರಿತಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು "ಈ ಘಟನೆಯಲ್ಲಿ ಒಂಬತ್ತು ಮಂದಿ ಮೃತಪಟ್ಟಿದ್ದಾರೆ ಮತ್ತು ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ಕೇಳಲ್ಪಟ್ಟಿದ್ದೇನೆ ಈಗಾಗಲೇ ನಾನು ಮುಖ್ಯ ಕಾರ್ಯದರ್ಶಿ, ಡಿ.ಜಿ ಮತ್ತು ಉಪ ಕಮೀಷನರ್ನೊಂದಿಗೆ ಮಾತನಾಡಿದ್ದೇನೆ. ಸ್ಥಳೀಯರ  ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮತ್ತು  ನಾನು ನ್ಯಾಯಾಂಗ ತನಿಖೆಗೆ ಆದೇಶ ನೀಡಿದ್ದೇನೆ" ಎಂದು ಜೈ ರಾಮ್ ಠಾಕೂರ್ ತಿಳಿಸಿದ್ದಾರೆ.


ಪ್ರಾಥಮಿಕ ಮೂಲಗಳ ಮಾಹಿತಿ ಪ್ರಕಾರ, ಬಸ್ ಒಂದು ಖಾಸಗಿ ಶಾಲೆಗೆ ಸೇರಿದ್ದು. ಮಕ್ಕಳನ್ನು ಅವರ ನಿವಾಸಕ್ಕೆ ಬಿಡಲು ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ