ನವ ದೆಹಲಿ: ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯ ಚುನಾವಣಾ ಆಯುಕ್ತ ಎ.ಕೆ.ಜ್ಯೋತಿ, ಹಿಮಾಚಲ ಪ್ರದೇಶದಲ್ಲಿ ನವೆಂಬರ್ 9ಕ್ಕೆ ಮತದಾನ ನಡೆಯಲಿದ್ದು, ಡಿಸೆಂಬರ್ 18ಕ್ಕೆ ಮತಎಣಿಕೆ ನಡೆಯಲಿದೆ ಎಂದು ತಿಳಿಸಿದ್ದಾರೆ. 


COMMERCIAL BREAK
SCROLL TO CONTINUE READING

ಹಿಮಾಚಲ ಪ್ರದೇಶದ ಈ ಬಾರಿಯ ಚುನಾವಣೆಯಲ್ಲಿ VVPAT ಬಳಸಲಾಗುವುದು. ಈ ಮೊದಲು ಇದನ್ನು ಗೋವಾ ಚುನಾವಣೆಯಲ್ಲಿ ಬಳಸಲಾಗಿತ್ತು ಎಂದು ಚುನಾವಣ ಆಯುಕ್ತರು ತಿಳಿಸಿದರು.


ಹಿಮಾಚಲ ಪ್ರದೇಶದಲ್ಲಿ ನವೆಂಬರ್ 9ಕ್ಕೆ ಚುನಾವಣೆ ಇರುವುದರಿಂದ ಇಂದಿನಿಂದಲೇ ನೀತಿ ಸಂಹಿತೆ ಜಾರಿಗೊಳ್ಳಲಿದೆ. ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯು ಅಕ್ಟೋಬರ್ 16 ರಿಂದ ಪ್ರಾರಂಭವಾಗಲಿದ್ದು ಅಕ್ಟೋಬರ್ 23ಕ್ಕೆ ಕೊನೆಗೊಳ್ಳಲಿದೆ. ಇಲ್ಲಿ ಒಟ್ಟು  7521 ಮತಗಟ್ಟೆಗಳನ್ನು ನಿರ್ಮಾಣ ಮಾಡಲಾಗುವುದು. ಮತದಾನಕ್ಕೆ ಭಾವಚಿತ್ರವುಳ್ಳ ಗುರುತಿನ ಚೀಟಿ ಕಡ್ಡಾಯ ಎಂದು ಚುನಾವಣಾ ಆಯೋಗ ತಿಳಿಸಿದೆ.


ಹಿಮಾಚಲ ಪ್ರದೇಶದಲ್ಲಿ ಒಟ್ಟು 68 ವಿಧಾನ ಸಭಾ ಕ್ಷೇತ್ರಗಳಿದ್ದು,  ಕಳೆದ ಚುನಾವಣೆಯಲ್ಲಿ ಕಾಂಗ್ರೇಸ್ 36 ಸ್ಥಾನಗಳನ್ನು ಮತ್ತು ಬಿಜೆಪಿ 26 ಸ್ಥಾನಗಳನ್ನು ಹೊಂದಿದ್ದವು.