ಮಂಡಿ: ಹಿಮಾಚಲ ಪ್ರದೇಶದ ಮಂಡಿ ಪಟ್ಟಣದಲ್ಲಿರುವ ವಸತಿ ಕಟ್ಟಡದಲ್ಲಿ ಸೋಮವಾರ ಬೆಳಿಗ್ಗೆ ಬೆಂಕಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ಅನೇಕ ಜನರು ಕಟ್ಟಡದಲ್ಲಿ ಸಿಲುಕಿದ್ದಾರೆ. 


COMMERCIAL BREAK
SCROLL TO CONTINUE READING

ಮಂಡಿ ನಗರದ ನೆರ್ ಚೌಕ್ ಪ್ರದೇಶದಲ್ಲಿ ಘಟನೆ ಸಂಭವಿಸಿದೆ. ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳದಲ್ಲಿ ಬೆಂಕಿ ನಂದಿಸಲು ಪ್ರಯತ್ನಿಸುತ್ತಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಎಲ್ಪಿಜಿ ಸಿಲಿಂಡರ್ ಸ್ಪೋಟದಿಂದ ಈ ಘಟನೆ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.