Holi Weather Update: ಹೋಳಿಯಲ್ಲಿ ಬಣ್ಣಗಳೊಂದಿಗೆ ಮಳೆಯ ಆನಂದ, ದೇಶದ ಈ ಭಾಗಗಳಲ್ಲಿ ಮಳೆ ಸಾಧ್ಯತೆ
Holi Weather Udpate: ಇಂದು ದೇಶಾದ್ಯಂತ ಬಣ್ಣದ ಹಬ್ಬ ಹೋಳಿ ಆಚರಿಸಲಾಗುತ್ತಿದೆ. ಈ ದಿನ ದೇಶದ ಕೆಲವು ಭಾಗಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Holi Weather Udpate: ಹಿಂದೂ ಕ್ಯಾಲೆಂಡರ್ ಪ್ರಕಾರ, ನಿನ್ನೆ (ಭಾನುವಾರ ಮಾರ್ಚ್ 24) ಹೋಲಿಕಾ ದಹನ್ ಆಚರಿಸಲಾಗಿದ್ದು, ಇದನ್ನು ಚೋಟಿ ಹೋಳಿ ಎಂತಲೂ ಕರೆಯುತ್ತಾರೆ. ಇಂದು (ಮಾರ್ಚ್ 25) ಸೋಮವಾರದ ದಿನ ಭಾರತದಾದ್ಯಂತ ವಿಜೃಂಭಣೆಯಿಂದ ಬಣ್ಣಗಳ ಹಬ್ಬ ಹೋಳಿಯನ್ನು ಆಚರಿಸಲಾಗುತ್ತಿದೆ. ಈ ಬಣ್ಣಗಳ ಹಬ್ಬದ ಸಂಭ್ರಮದ ನಡುವೆ ದೇಶದ ಕೆಲವು ಭಾಗಗಳಲ್ಲಿ ಮಳೆಯ ಸಿಂಚನವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.
ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಈಶಾನ್ಯ ಭಾರತ ಮತ್ತು ಸಿಕ್ಕಿಮ್ನ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇದೇ ವೇಳೆ, ಉತ್ತರ ಪಂಜಾಬ್, ವಾಯವ್ಯ ರಾಜಸ್ಥಾನ, ದಕ್ಷಿಣ ಭಾರತದ ಕೇರಳ ಮತ್ತು ಲಕ್ಷದ್ವೀಪದಲ್ಲಿ ಲಘು ಮಲೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಮಾರ್ಚ್ 25 ಮತ್ತು 26 ರಂದು ಅಸ್ಸಾಂನ ವಿವಿಧ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ನೀಡಿದೆ. ಇಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಅರುಣಾಚಲ ಪ್ರದೇಶದಲ್ಲೂ ಮಾರ್ಚ್ 25 ಮತ್ತು 26 ರಂದು ಹಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎನ್ನಲಾಗಿದೆ.
ಇದನ್ನೂ ಓದಿ- Lok Sabha election 2024: ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್‌ಗೆ ಆಘಾತ..! ಮಾಜಿ ಸಂಸದ ನವೀನ್ ಜಿಂದಾಲ್ ಬಿಜೆಪಿ ಸೇರ್ಪಡೆ
ಸ್ಕೈಮೆಟ್ ಹವಾಮಾನ ವರದಿಯ ಪ್ರಕಾರ, ಇಂದು ಮತ್ತು ನಾಳೆ ಎಂದರೆ ಮಾರ್ಚ್ 25 ಮತ್ತು 26 ರಂದು, ಅರುಣಾಚಲ ಪ್ರದೇಶದ ಮೇಲೆ ಪ್ರತ್ಯೇಕವಾದ ಭಾರೀ ಮಳೆಯಾಗಬಹುದು ಇಲ್ಲವೇ, ಹಿಮಪಾತವಾಗುವ ಸಾಧ್ಯತೆ ಇದೆ ಎಂದು ಎಂದು ಹೇಳಲಾಗುತ್ತಿದೆ. ಇದರ ಪ್ರಭಾವ ಉಪ-ಹಿಮಾಲಯ ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ ಮತ್ತು ಮೇಘಾಲಯದ ಮೇಲೂ ಕಂಡು ಬರಲಿದೆ ಎನ್ನಲಾಗುತ್ತದೆ.
ಇದನ್ನೂ ಓದಿ- Viral Video: ಮೆಟ್ರೋದಲ್ಲೇ ಬಣ್ಣ ಹಚ್ಚಿಕೊಂಡು ಹೋಳಿ ಹಬ್ಬದ ರೀಲ್ಸ್ ಮಾಡಿದ ಯುವತಿಯರು!
ಇದಲ್ಲದೆ, ಈ ವರ್ಷ ಹೋಳಿಯ ಸಂದರ್ಭದಲ್ಲಿ ದೆಹಲಿ ಎನ್‌ಸಿಆರ್‌ನಲ್ಲಿ "ಶುಷ್ಕ ಮತ್ತು ಬಿಸಿ" ವಾತಾವರಣ ಮುಂದುವರೆಯಲಿದೆ. ಮುಂದಿನ 24 ಗಂಟೆಗಳಲ್ಲಿ ಪಂಜಾಬ್, ಉತ್ತರ ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ವಿವಿಧ ಪ್ರದೇಶಗಳಲ್ಲಿ ಲಘು ಮಳೆ ಸಾಧ್ಯತೆ ಇದ್ದು, ಈಶಾನ್ಯ ಭಾರತ ಮತ್ತು ಸಿಕ್ಕಿಂನಲ್ಲಿ ಸಾಧಾರಣದಿಂದ ಒಂದೆರಡು ಪ್ರದೇಶಗಳಲ್ಲಿ ಗುಡುಗು ಸಹಿತ ಮಲೆಯಾಗುವ ಸಾಧ್ಯತೆ ಇದೆ. ಕೇರಳದ ಕೆಲವೆಡೆ ಲಘು ಮಳೆಯಾಗುವ ನಿರೀಕ್ಷೆಯಿದೆ ಎಂದು ಸ್ಕೈಮೆಟ್ ಭವಿಷ್ಯ ನುಡಿದಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.