ನವದೆಹಲಿ: ಭಯೋತ್ಪಾದನೆ ಬೆದರಿಕೆಯ ಹಿನ್ನಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಲು ಗೃಹ ಸಚಿವ ಅಮಿತ್ ಶಾ ಭಾನುವಾರ ಸಂಸತ್ತಿನಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು.


COMMERCIAL BREAK
SCROLL TO CONTINUE READING

ಈ ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಮತ್ತು ಗೃಹ ಕಾರ್ಯದರ್ಶಿ ರಾಜೀವ್ ಗೌಬಾ ಉಪಸ್ಥಿತರಿದ್ದರು. ಗುಪ್ತಚರ ಬ್ಯೂರೋ (ಐಬಿ) ಅರವಿಂದ್ ಕುಮಾರ್ ಮತ್ತು ರಾ ಮುಖ್ಯಸ್ಥ ಸಮಂತ್ ಕುಮಾರ್ ಗೋಯೆಲ್ ಕೂಡ ಸಭೆಯಲ್ಲಿ ಉಪಸ್ಥಿತರಿದ್ದರು ಎನ್ನಲಾಗಿದೆ.



ಅಮರನಾಥ ಯಾತ್ರಾ ಯಾತ್ರಿಕರನ್ನು ರಾಜ್ಯದಿಂದ ಸುರಕ್ಷಿತವಾಗಿ ಸ್ಥಳಾಂತರಿಸುವ ವಿಷಯದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ ಜೀ ನ್ಯೂಸ್  ಗೆ ಲಭಿಸಿರುವ ಮಾಹಿತಿ ಪ್ರಕಾರ ಸಂಸತ್ ಅಧಿವೇಶನ ಮುಗಿದ ನಂತರ ಗೃಹ ಸಚಿವರು ಮೂರು ದಿನಗಳ ಕಾಲ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಬಹುದು ಎನ್ನಲಾಗಿದೆ.


ಜಮ್ಮು ಮತ್ತು ಕಾಶ್ಮೀರ ಆಡಳಿತವು ರಾಜ್ಯದ ಎಲ್ಲಾ ಯಾತ್ರಾರ್ಥಿಗಳು ಮತ್ತು ಪ್ರವಾಸಿಗರಿಗೆ ರಾಜ್ಯದಲ್ಲಿ ಭಯೋತ್ಪಾದಕ ದಾಳಿಯ ಸಂಭಾವ್ಯತೆಯ ಗುಪ್ತಚರ ಮಾಹಿತಿ ಪಡೆದ ಕೂಡಲೇ ಕಾಶ್ಮೀರದಿಂದ ಹೊರಡುವಂತೆ ಸಲಹೆ ನೀಡಿದೆ.