ನವದೆಹಲಿ : ದೀಪಾವಳಿ ತನಕ ದೇಶದ 80 ಕೋಟಿ ಜನರಿಗೆ ಉಚಿತ ಆಹಾರ ಧಾನ್ಯಗಳನ್ನ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಇದಕ್ಕಾಗಿ ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಯೋಜನೆ (ಪಿಎಂಜಿಕೆವೈ) ಅಡಿಯಲ್ಲಿ ಉಚಿತ ಪಡಿತರವನ್ನ ವಿತರಿಸುವ ಯೋಜನೆಯನ್ನ ದೀಪಾವಳಿಯವರೆಗೆ ವಿಸ್ತರಿಸಲಾಗಿದೆ. ಬೇರೆ ರೀತಿಯಲ್ಲಿ ಹೇಳುವುದಾದರೆ, ಈಗ ಕೇಂದ್ರವು ನವೆಂಬರ್ 2020ರವರೆಗೆ ಬಡವರಿಗೆ ಉಚಿತ ಆಹಾರ ಧಾನ್ಯಗಳನ್ನು ಒದಗಿಸುತ್ತದೆ.


COMMERCIAL BREAK
SCROLL TO CONTINUE READING

ಕಳೆದ ವರ್ಷ ಕೊರೋನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಗರಿಬ್ ಕಲ್ಯಾಣ್ ಅನ್ನ ಯೋಜನೆ(PM Garib Kalyan Yojana)ಯಡಿ ದೇಶದ 80 ಕೋಟಿ ಜನರಿಗೆ 8 ತಿಂಗಳವರೆಗೆ ಉಚಿತ ಪಡಿತರವನ್ನ ನೀಡಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ನಂತ್ರ ಈ ಯೋಜನೆಯನ್ನು ಮೇ-ಜೂನ್ 2021 ರವರೆಗೆ ವಿಸ್ತರಿಸಲಾಯಿತು. ಈಗ ಪಿಎಂ ಗರಿಬ್ ಕಲ್ಯಾಣ್ ಯೋಜನೆ ದೀಪಾವಳಿಯವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ.


ಇದನ್ನೂ ಓದಿ : ನಿಮ್ಮಲ್ಲಿ 5 ರೂಪಾಯಿಯ ಈ ನೋಟು ಇದ್ದರೆ ಸುಲಭದಲ್ಲಿ ಹಣ ಸಂಪಾದಿಸಬಹುದು


PMGKY ಗೆ ಅರ್ಜಿ ಸಲ್ಲಿಸುವುದು ಹೇಗೆ?


ನೀವು ಸರ್ಕಾರದ ಈ ಯೋಜನೆಯ ಲಾಭವನ್ನು ಪಡೆಯಲು ಬಯಸಿದರೆ, ಮೊದಲು ನೀವು ಯಾವುದೇ ಬ್ಯಾಂಕಿನಲ್ಲಿ ನಿಮ್ಮ ಖಾತೆಯನ್ನು ತೆರೆಯಬೇಕು. ಪಿಎಂ ಗರಿಬ್ ಕಲ್ಯಾಣ್ ಯೋಜನೆ(PMGKY)ಯ ಲಾಭ ಪಡೆಯಲು, ಒಂದು ಫಾರ್ಮ್ ಅನ್ನು ಭರ್ತಿ ಮಾಡುವುದು ಅವಶ್ಯಕ. ಈ ಫಾರ್ಮ್ ಮೂಲಕ, ಸರ್ಕಾರವು ನಿಮ್ಮ ಬಳಿ ಎಷ್ಟು ಆಸ್ತಿ ಇದೆ ಎಂದು ತಿಳಿಯುತ್ತದೆ. ಇದರ ನಂತರ, ನೀವು ಹಳ್ಳಿಯಲ್ಲಿ ವಾಸಿಸುತ್ತಿದ್ದರೆ, ನೀವು ಗ್ರಾಮ ಪಂಚಾಯಿತಿಗೆ ಹೋಗಿ ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕಾಗುತ್ತದೆ. ನೀವು ನಗರದಲ್ಲಿ ವಾಸಿಸುತ್ತಿದ್ದರೆ, ನೀವು ಪುರಸಭೆಗೆ ಹೋಗಿ ಸಂಪರ್ಕಿಸಬೇಕಾಗುತ್ತದೆ. ಈ ಯೋಜನೆಯಲ್ಲಿ, ಬಡ ವರ್ಗದ ಜನರು ಪಡಿತರ ಚೀಟಿ ಇಲ್ಲದೆ ಉಚಿತ ಆಹಾರ ಧಾನ್ಯಗಳನ್ನು ತೆಗೆದುಕೊಳ್ಳಬಹುದು.


ಇದನ್ನೂ ಓದಿ : RBI: ಈ ಎರಡು ಬ್ಯಾಂಕುಗಳ ವಿರುದ್ಧ ಆರ್‌ಬಿಐ ಕ್ರಮ, 6 ಕೋಟಿ ರೂ.ಗಳ ದಂಡ


ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಯೋಜನೆಯಲ್ಲಿ, ಒಂದು ಕುಟುಂಬಕ್ಕೆ 5 ಕೆಜಿ ಗೋಧಿ ಅಥವಾ ಅಕ್ಕಿ ಮತ್ತು 1ಕೆಜಿ ನೀಡುವ ಅವಕಾಶವಿದೆ. ಈ ಉಚಿತ 5 ಕೆಜಿ ಧಾನ್ಯವು ಪಡಿತರ ಕಾರ್ಡ್‌(Ration Card)ನಲ್ಲಿ ಲಭ್ಯವಿರುವ ಆಹಾರ ಧಾನ್ಯಗಳ ಕೋಟಾಕ್ಕೆ ಹೆಚ್ಚುವರಿಯಾಗಿರುತ್ತದೆ. ಯೋಜನೆಯಡಿ ಆಹಾರ ಧಾನ್ಯಗಳನ್ನು ತೆಗೆದುಕೊಳ್ಳಲು ನಿಮಗೆ ಪಡಿತರ ಚೀಟಿ ಅಗತ್ಯವಿಲ್ಲ. ಇದರ ಅಡಿಯಲ್ಲಿ ನಿರ್ಗತಿಕರಿಗೆ ಆಧಾರ್ ಕಾರ್ಡ್‌ನಿಂದ ಮಾತ್ರ ಪಡಿತರ ಸಿಗುತ್ತದೆ. ಆದಾಗ್ಯೂ, ಲಾಭ ಪಡೆಯಲು, ನಿಮ್ಮ ಆಧಾರ್ ಕಾರ್ಡ್ ಮೂಲಕ ಈ ಯೋಜನೆಯಡಿ ನೋಂದಾಯಿಸಿಕೊಳ್ಳಬೇಕು. ನೋಂದಣಿಯಾದ ನಂತರ ನಿಮಗೆ ಸ್ಲಿಪ್ ನೀಡಲಾಗುತ್ತದೆ. ಈ ಸ್ಲಿಪ್ ತೋರಿಸುವ ಮೂಲಕ ನೀವು ಉಚಿತ ಆಹಾರ ಧಾನ್ಯಗಳನ್ನು ಪಡೆಯಬಹುದು.


ಇದನ್ನೂ ಓದಿ : Pune Fire Accident: SVS Aqua Technologies ಕಂಪನಿಯಲ್ಲಿ ಭೀಕರ ಅಗ್ನಿ ಅವಘಡ, 12 ಸಾವು ಮತ್ತು ಹಲವರು ನಾಪತ್ತೆ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ