ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯನ್ನು ಹೇಗೆ ಆಚರಿಸಲಾಗುತ್ತೆ? ಗೃಹ ಸಚಿವಾಲಯದ ಸಲಹೆ ಏನು?
ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ವೈದ್ಯರು, ಆರೋಗ್ಯ ಕಾರ್ಯಕರ್ತರು ಮತ್ತು ನೈರ್ಮಲ್ಯ ಕಾರ್ಮಿಕರನ್ನು ಆಹ್ವಾನಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಲಾಗಿದೆ.
ನವದೆಹಲಿ: ಈ ವರ್ಷ ಸ್ವಾತಂತ್ರ್ಯ ದಿನಾಚರಣೆ ಯಾವ ರೀತಿ ಆಚರಿಸಬೇಕು ಎಂಬುದಕ್ಕೆ ಕೇಂದ್ರ ಗೃಹ ಸಚಿವಾಲಯ ಶುಕ್ರವಾರ ಸಲಹೆ ನೀಡಿದ್ದು ಇವುಗಳನ್ನು ರಾಜ್ಯ ಸರ್ಕಾರಗಳು, ಕೇಂದ್ರಾಡಳಿತ ಪ್ರದೇಶಗಳು, ಸರ್ಕಾರಿ ಕಚೇರಿಗಳು ಮತ್ತು ರಾಜ್ಯಪಾಲರಿಗೆ ಕಳುಹಿಸಲಾಗಿದೆ. ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಸಾಮೂಹಿಕ ಕಾರ್ಯಕ್ರಮವನ್ನು ಆಯೋಜಿಸದಂತೆ ಗೃಹ ಸಚಿವಾಲಯದ ಸಲಹೆಗಾರರು ಸಲಹೆ ನೀಡಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆಯನ್ನು (Independenceday) ಆಚರಿಸಲು ತಂತ್ರಜ್ಞಾನವನ್ನು ಬಳಸಲು ಸಲಹೆಗಾರರನ್ನು ಕೇಳಿದೆ. ವಾಸ್ತವವಾಗಿ ದೇಶದಲ್ಲಿ ಹೆಚ್ಚುತ್ತಿರುವ ಕರೋನಾವೈರಸ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಗೃಹ ಸಚಿವಾಲಯ ಈ ಮಾರ್ಗಸೂಚಿಗಳನ್ನು ಹೊರಡಿಸಿದೆ.
ಕರೋನಾ ಸೋಂಕಿನ ಅಪಾಯವನ್ನು ಗಮನದಲ್ಲಿಟ್ಟುಕೊಂಡು ಮಾಸ್ಕ್ ಧರಿಸುವುದು, ನೈರ್ಮಲ್ಯೀಕರಣ (ಸ್ಯಾನಿಟೈಸೇಶನ್) ಮತ್ತು ಸಾಮಾಜಿಕ ದೂರವನ್ನು ಅನುಸರಿಸುವುದು ಅಗತ್ಯವಾಗಿರುತ್ತದೆ ಎಂದು ಗೃಹ ಸಚಿವಾಲಯ ಹೊರಡಿಸಿದ ಮಾರ್ಗಸೂಚಿಗಳು ತಿಳಿಸಿವೆ. ಸ್ವಾತಂತ್ರ್ಯ ದಿನದಂದು ಜನಸಂದಣಿಯನ್ನು ಒಟ್ಟುಗೂಡಿಸದಂತೆ ನಿಗಾ ವಹಿಸಬೇಕು. ಇದಲ್ಲದೆ ಕೇಂದ್ರ ಆರೋಗ್ಯ ಸಚಿವಾಲಯ ಈಗಾಗಲೇ ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸುವುದು ಸಹ ಅಗತ್ಯವಾಗಿರುತ್ತದೆ ಎಂದು ಹೇಳಲಾಗಿದೆ.
ಗಮನಿಸಬೇಕಾದ ಸಂಗತಿಯೆಂದರೆ ವೈದ್ಯರು, ಆರೋಗ್ಯ ಕಾರ್ಯಕರ್ತರು ಮತ್ತು ನೈರ್ಮಲ್ಯ ಕಾರ್ಮಿಕರಿಗೆ ಅವರ ಸೇವೆಗೆ ಗೌರವಾರ್ತವಾಗಿಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಆಹ್ವಾನಿಸಲು ರಾಜ್ಯ ಸರ್ಕಾರಗಳಿಗೆ ಸೂಚಿಸಲಾಗಿದೆ. ಕರೋನಾ ಸೋಂಕಿಗೆ ಒಳಗಾದ ನಂತರ ಆರೋಗ್ಯವಾಗಿರುವವರನ್ನು ಸಹ ಕಾರ್ಯಕ್ರಮದಲ್ಲಿ ಕರೆಯುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ.