ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಮ್ಮ ಸಿಂಗಾಪುರ ಪ್ರವಾಸಕ್ಕೆ ಕೇಂದ್ರ ಸರ್ಕಾರ ಅಡ್ಡಿಪಡಿಸುತ್ತಿದೆ ಎಂದು ನಿರಂತರವಾಗಿ ಆರೋಪ ಮಾಡುತ್ತಿದ್ದಾರೆ. ಸೋಮವಾರ ಮತ್ತೊಮ್ಮೆ ಈ ಆರೋಪವನ್ನು ಪುನರುಚ್ಚರಿಸಿರುವ ಅವರು, ‘ರಾಜಕೀಯ ಕಾರಣಗಳಿಂದ ನನ್ನ ಸಿಂಗಾಪುರ ಪ್ರವಾಸವನ್ನು ನಿಲ್ಲಿಸಲಾಗುತ್ತಿದೆ ಎಂದು ತೋರುತ್ತಿದೆ. ನಾನು ಚುನಾಯಿತ ಮುಖ್ಯಮಂತ್ರಿಯೇ ಹೊರತು ಕ್ರಿಮಿನಲ್ ಅಲ್ಲ’ ಎಂದು ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿ ಮುಖ್ಯಮಂತ್ರಿ ಸಿಂಗಾಪುರಕ್ಕೆ ತೆರಳಬೇಕಿತ್ತು. ಆದರೆ ಕೇಂದ್ರ ಸರ್ಕಾರ ಇದಕ್ಕೆ ಅನುಮತಿ ನೀಡುತ್ತಿಲ್ಲವೆಂದು ಕೇಜ್ರಿವಾಲ್ ಆರೋಪಿಸಿದ್ದಾರೆ. ಈ ವಿಚಾರವಾಗಿ ಎಎಪಿ ಸಂಸದರು ಸಂಸತ್ ಆವರಣದಲ್ಲಿ ಪ್ರತಿಭಟನೆ ಸಹ ನಡೆಸಿದ್ದು, ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.


ಇದನ್ನೂ ಓದಿ: ಜಮ್ಮುವಿನಲ್ಲಿ ಆಕಸ್ಮಿಕ ಗ್ರೆನೇಡ್ ಸ್ಫೋಟ: ಇಬ್ಬರು ಸೇನಾ ಸಿಬ್ಬಂದಿ ಹುತಾತ್ಮ


ಕೇಂದ್ರದ ವಿರುದ್ಧ ಕೇಜ್ರಿವಾಲ್ ಅಸಮಾಧಾನ


ಸಿಂಗಾಪುರದಲ್ಲಿ ನಡೆಯಲಿರುವ ವಿಶ್ವ ನಗರಗಳ ಶೃಂಗಸಭೆಯಲ್ಲಿ ಭಾಗವಹಿಸಲು ಆ ದೇಶದ ಸರ್ಕಾರದಿಂದ ಆಹ್ವಾನ ಬಂದಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಅಲ್ಲಿ ಅವರು ಜಾಗತಿಕ ನಾಯಕರ ಮುಂದೆ ‘ದೆಹಲಿ ಮಾದರಿ’ಯನ್ನು ಪ್ರಸ್ತುತಪಡಿಸಿ ಭಾರತಕ್ಕೆ ಕೀರ್ತಿ ತರುವ ಪ್ರಯತ್ನದಲ್ಲಿದ್ದಾರೆ. ತಮ್ಮ ಭೇಟಿಗೆ ಅನುಮತಿ ನೀಡಲು ಕೇಂದ್ರದ ವಿಳಂಬದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕೇಜ್ರಿವಾಲ್, ಪ್ರಧಾನಿ ಮೋದಿಗೆ ಭಾನುವಾರ ಪತ್ರ ಬರೆದಿದ್ದು, ಕಳೆದ 1 ತಿಂಗಳಿಂದ ಅನುಮತಿಗಾಗಿ ಕಾಯುತ್ತಿದ್ದೇನೆ’ ಎಂದು ಹೇಳಿದ್ದಾರೆ.


‘ನಾನು ಕ್ರಿಮಿನಲ್ ಅಲ್ಲ, ನಾನು ಮುಖ್ಯಮಂತ್ರಿ ಮತ್ತು ದೇಶದ ಮುಕ್ತ ನಾಗರಿಕ. ನಾನು ಸಿಂಗಾಪುರಕ್ಕೆ ಹೋಗುವುದನ್ನು ತಡೆಯಲು ಯಾವುದೇ ಕಾನೂನು ತೊಡಕಿಲ್ಲ, ಆದ್ದರಿಂದ ಇದರ ಹಿಂದೆ ಯಾವುದೋ ರಾಜಕೀಯ ಕಾರಣವಿದೆ ಎಂದು ತೋರುತ್ತದೆ’ ಎಂದು ಹೇಳಿದ್ದಾರೆ. ಜೂನ್‌ನಲ್ಲಿ ಸಿಂಗಾಪುರದ ಹೈಕಮಿಷನರ್ ಸೈಮನ್ ವಾಂಗ್ ಅವರು ಕೇಜ್ರಿವಾಲ್ ಅವರನ್ನು ಶೃಂಗಸಭೆಗೆ ಆಹ್ವಾನಿಸಿದ್ದರು. ಸಮ್ಮೇಳನವನ್ನು ಆಗಸ್ಟ್ ಮೊದಲ ವಾರದಲ್ಲಿ ನಡೆಸಲು ನಿರ್ಧರಿಸಲಾಗಿದೆ. ಮೊದಲ ದಿನ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ದೆಹಲಿ ಮುಖ್ಯಮಂತ್ರಿಗೆ ಕರೆ ನೀಡಲಾಗಿದೆ.


ಇದನ್ನೂ ಓದಿ: ಭಾರತ-ಪಾಕ್ ಗಡಿಯಲ್ಲಿ ಅಲೆದಾಡುತ್ತಿದ್ದ ಎನ್‌ಆರ್‌ಐ ದಂಪತಿ ಬಂಧನ


ಪ್ರಧಾನಿ ಮೋದಿಗೆ ಪತ್ರ


‘ತಾವು ಸಾಮಾನ್ಯವಾಗಿ ವಿದೇಶ ಪ್ರವಾಸಕ್ಕೆ ಹೋಗುವುದಿಲ್ಲ, ದೇಶದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಸಿಂಗಾಪುರ ಸಮ್ಮೇಳನದಲ್ಲಿ ಭಾಗವಹಿಸಲು ಬಯಸುವುದಾಗಿ ಕೇಜ್ರಿವಾಲ್ ಹೇಳಿದ್ದಾರೆ. ಈ ಬಗ್ಗೆ ಈ ಹಿಂದೆ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದ ಅವರು, ‘ವಿಶ್ವ ನಗರಗಳ ಶೃಂಗಸಭೆ’(WCS)ನಲ್ಲಿ ಭಾರತವನ್ನು ಪ್ರತಿನಿಧಿಸಲು ಸಿಂಗಾಪುರಕ್ಕೆ ಪ್ರಯಾಣಿಸಲು ಅನುಮತಿ ನಿರಾಕರಿಸುವುದು ತಪ್ಪು ಎಂದು ಹೇಳಿದ್ದಾರೆ.


ಮೂಲಗಳ ಪ್ರಕಾರ, ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು ಕೇಜ್ರಿವಾಲ್ ಸಿಂಗಪುರ ಭೇಟಿಗೆ ಸಂಬಂಧಿಸಿದ ಕಡತಕ್ಕೆ ಅನುಮೋದನೆ ನೀಡಿಲ್ಲ. ಸಂಸತ್ತಿನ ಅಧಿವೇಶನ ಪ್ರಾರಂಭವಾಗುತ್ತಿದ್ದಂತೆ, ಎಎಪಿಯ ರಾಜ್ಯಸಭಾ ಸಂಸದರಾದ ಸಂಜಯ್ ಸಿಂಗ್ ಮತ್ತು ರಾಘವ್ ಚಡ್ಡಾ ಅವರು ಈ ವಿಷಯದ ಕುರಿತು ಸಂಸತ್ತಿನ ಆವರಣದಲ್ಲಿ ಪೋಸ್ಟರ್‌ಗಳನ್ನು ಪ್ರದರ್ಶಿಸಿದರು. ದೆಹಲಿ ಮಾದರಿಗೆ ಜಾಗತಿಕ ಮಟ್ಟದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿರುವುದಕ್ಕೆ ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿದ್ದು, ಅದಕ್ಕಾಗಿಯೇ ಕೇಂದ್ರ ಸರ್ಕಾರವು ಕೇಜ್ರಿವಾಲ್‌ಗೆ ಸಿಂಗಾಪುರಕ್ಕೆ ಹೋಗಲು ಇನ್ನೂ ಅವಕಾಶ ನೀಡಿಲ್ಲವೆಂದು ಅವರು ಆರೋಪಿಸಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.