ರಾಹುಲ್ ಗಾಂಧಿ ಇಪ್ತಾರ್ ಕೂಟಕ್ಕೆ ದೇವೇಗೌಡ್ರು ಹೋಗುತ್ತಿಲ್ಲ; ಯಾಕೆ ಗೊತ್ತಾ?

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಯೋಜಿಸಿರುವ ಇಫ್ತಾರ್ ಕೂಟದಲ್ಲಿ ನಾನು ಭಾಗವಹಿಸುವುದಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.

Updated: Jun 12, 2018 , 07:02 PM IST
ರಾಹುಲ್ ಗಾಂಧಿ ಇಪ್ತಾರ್ ಕೂಟಕ್ಕೆ ದೇವೇಗೌಡ್ರು ಹೋಗುತ್ತಿಲ್ಲ; ಯಾಕೆ ಗೊತ್ತಾ?

ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಯೋಜಿಸಿರುವ ಇಫ್ತಾರ್ ಕೂಟದಲ್ಲಿ ನಾನು ಭಾಗವಹಿಸುವುದಿಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.

ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಯೋಗಕ್ಷೇಮ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು, "ರಾಹುಲ್ ಗಾಂಧಿ ಅವರು ನನ್ನನ್ನು ಮತ್ತು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಸ್ವತಃ ಫೋನ್ ಮಾಡಿ ಇಫ್ತಾರ್ ಕೂಟಕ್ಕೆ ಆಹ್ವಾನಿಸಿದ್ದರು. ಆದರೆ, ಕರ್ನಾಟಕದಲ್ಲಿ ನಾವೂ ಕೂಡ ಇಫ್ತಾರ್ ಕೂಟ ಆಯೋಜಿಸಿದ್ದೇವೆ. ಸುಮಾರು 5000ಕ್ಕೂ ಹೆಚ್ಚು ಜನ ಕೂಟದಲ್ಲಿ ಭಾಗವಹಿಸಲಿದ್ದಾರೆ. ಹಾಗಾಗಿ ರಾಹುಲ್ ಗಾಂಧಿ ಆಯೋಜಿಸಿರುವ ಇಫ್ತಾರ್ ಕೂಟದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.

ರಾಹುಲ್ ಗಾಂಧಿ ಇಫ್ತಾರ್ ಕೂಟಕ್ಕೆ ಅರವಿಂದ್ ಕೇಜ್ರಿವಾಲ್, ಪ್ರಣಬ್ ಮುಖರ್ಜಿಗಿಲ್ಲ ಆಹ್ವಾನ

ಇನ್ನು, ಮಾಜಿ ಪ್ರಧಾನಿ ವಾಜಪೇಯಿ ಅವರ ಆರೋಗ್ಯದ ಬಗ್ಗೆ ಮಾತನಾಡಿದ ದೇವೇಗೌಡರು, ವಾಜಪೇಯಿ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ಬಳಿ ಮಾತನಾಡಿದ್ದೇನೆ. ಆರೋಗ್ಯ ಸುಧಾರಿಸುತ್ತಿರುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಾಜಪೇಯಿ ಅವರನ್ನು ನೇರವಾಗಿ ನೋಡುವ ಅವಕಾಶ ಇಲ್ಲ. ಆದರೆ ವಾಜಪೇಯಿ ಆರಾಮವಾಗಿದ್ದಾರೆ, ಅದರಲ್ಲಿ ಯಾವುದೇ ಸಂಶಯವಿಲ್ಲ ಎಂದು ತಿಳಿಸಿದರು.

ಮಾಜಿ ಪ್ರಧಾನಿ ವಾಜಪೇಯಿ ಆರೋಗ್ಯ ಸ್ಥಿರವಾಗಿದೆ: ಏಮ್ಸ್

ರಂಜಾನ್ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಜೂನ್ 13 ರಂದು ತಾಜ್ ಪ್ಯಾಲೇಸ್ ಹೋಟೆಲ್ನಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದು, ಕಾಂಗ್ರೆಸ್ ಮತ್ತು ಇತರ ಪಕ್ಷಗಳ ಬಹುತೇಕ ಮುಖಂಡರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ.