ನವದೆಹಲಿ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಅಜಿತ್ ಪವಾರ್ ಅವರು ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಗೆ ತೆರಳಲು ಸಿದ್ದತೆ ನಡೆಸಿದ್ದಾರೆ  ಎನ್ನುವ ವಂದತಿಯನ್ನು ಅವರು ನಿರಾಕರಿಸಿದ್ದಾರೆ. ಮಾಧ್ಯಮಗಳು ಯಾವುದೇ ಕಾರಣವಿಲ್ಲದೆ ವದಂತಿಗಳನ್ನು ಹರಡುತ್ತಿವೆ ಎಂದು ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಆ ಯಾವುದೇ ವದಂತಿಯಲ್ಲಿ ಯಾವುದೇ ಸತ್ಯವಿಲ್ಲ. ನಾನು ಎನ್‌ಸಿಪಿಯಲ್ಲಿದ್ದೇನೆ ಮತ್ತು ಎನ್‌ಸಿಪಿಯಲ್ಲೇ ಇರುತ್ತೇನೆ, ನಾನು 40 ಶಾಸಕರ ಸಹಿ ತೆಗೆದುಕೊಂಡಿಲ್ಲ, ಇಂದು ನನ್ನನ್ನು ಶಾಸಕರು ಭೇಟಿ ಮಾಡಲು ಬಂದಿರುವುದು ಸಹಜ ಪ್ರಕ್ರಿಯೆ, ಇದಕ್ಕೆ ಬೇರೆ ಯಾವುದೇ ಅರ್ಥವನ್ನು ಕಲ್ಪಿಸಬೇಡಿ" ಎಂದು ಅಜಿತ್ ಪವಾರ್ ಹೇಳಿದರು.


ಇದನ್ನೂ ಓದಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗಾಗಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಸೀಟು ಮೀಸಲಿಟ್ಟ ಕಾಂಗ್ರೆಸ್...!


ಉದ್ದೇಶಪೂರ್ವಕವಾಗಿ ಇಂತಹ ವದಂತಿಗಳನ್ನು ಹಬ್ಬಿಸಲಾಗುತ್ತಿದ್ದು, ನಿರುದ್ಯೋಗ, ರೈತರ ಸಮಸ್ಯೆಗಳಂತಹ ಪ್ರಮುಖ ಸಮಸ್ಯೆಗಳಿಂದ ಗಮನ ಬೇರೆಡೆ ಸೆಳೆಯಲಾಗುತ್ತಿದೆ ಎಂದರು.


ಇದನ್ನೂ ಓದಿ: ಪಕ್ಷದಲ್ಲಿ ಕಡೆಗಣಿಸುತ್ತಿರುವುದಕ್ಕೆ ಮಾರ್ಮಿಕ ಒಗಟಿನ ಪೋಸ್ಟ್ ಮಾಡಿದ ತೇಜಸ್ವಿನಿ ಅನಂತ್ ಕುಮಾರ್! 


ಇದಕ್ಕೂ ಮೊದಲು, ಅಜಿತ್ ಪವಾರ್ ಅವರ ಚಿಕ್ಕಪ್ಪ ಮತ್ತು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಆಡಳಿತಾರೂಢ ಏಕನಾಥ್ ಶಿಂಧೆ-ಬಿಜೆಪಿ ಮೈತ್ರಿಗೆ ಬದಲಾಯಿಸಲು ಸಿದ್ಧರಿರುವ ಶಾಸಕರ ವಿಭಜನೆ ಮತ್ತು ಸಭೆಯ ಊಹಾಪೋಹಗಳಿಗೆ ತೆರೆ ಎಳೆದಿದ್ದರು.ವರದಿಗಳಲ್ಲಿ ಯಾವುದೇ ಸತ್ಯವಿಲ್ಲ. ಅಜಿತ್ ಪವಾರ್ ಯಾವುದೇ ಸಭೆಯನ್ನು ಕರೆದಿಲ್ಲ. ಅವರು ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಪವಾರ್ ಸುದ್ದಿಗಾರರಿಗೆ ತಿಳಿಸಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.