Eid 2023: ಇಂದು ದೇಶಾದ್ಯಂತ ಮುಸ್ಲಿಂ ಬಾಂಧವರ ಪವಿತ್ರ ಹಬ್ಬ ಈದ್ ಅನ್ನು ವಿಜ್ರಂಭಣೆಯಿಂದ ಆಚರಿಸಲಾಗುತ್ತಿದೆ.  ಈ ಸಂದರ್ಭದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೇಶದಲ್ಲಿ ವಿಭಜನೆಯ ರಾಜಕೀಯ ಮಾಡುವವರನ್ನು ಗುರಿಯಾಗಿಸಿದ್ದಾರೆ. ಕೆಲವರು ದ್ವೇಷದ ರಾಜಕಾರಣ ಮಾಡುವ ಮೂಲಕ ದೇಶವನ್ನು ಒಡೆಯಲು ಯತ್ನಿಸುತ್ತಿದ್ದಾರೆ ಎಂದು ಸಿಎಂ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ. ಇದಾದ ಬಳಿಕ 'ಪ್ರಾಣ ಬೇಕಾದರೂ ಕೊಡುವೆ, ಆದರೆ ದೇಶ ವಿಭಜನೆಗೆ ಅವಕಾಶ ಕೊಡುವುದಿಲ್ಲ' ಎಂದು ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ. ಈದ್ ಪ್ರಾರ್ಥನೆಗಾಗಿ ನೆರೆದಿದ್ದ ಜನಸಮೂಹ ಉದ್ದೇಶಿಸಿ ಮಾತನಾಡಿರುವ ಮಮತಾ ಬ್ಯಾನರ್ಜಿ ಅವರು,  ಒಗ್ಗೂಡಿ 2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೋಗೆಯಬೇಕಿದೆ ಎಂದು ಮನವಿ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

ಪಶ್ಚಿಮ ಬಂಗಾಳದಲ್ಲಿ ಎನ್‌ಆರ್‌ಸಿ ಜಾರಿ ಇಲ್ಲ
ಕೆಲವರು ದೇಶವನ್ನು ಒಡೆಯಲು ಯತ್ನಿಸುತ್ತಿದ್ದು, ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ನಾನು ಪ್ರಾಣ ಕೊಡಲು ಸಿದ್ಧನಿದ್ದೇನೆ ಆದರೆ ದೇಶವನ್ನು ಒಡೆಯಲು ಬಿಡುವುದಿಲ್ಲ. ಬಿಜೆಪಿ ಸಂವಿಧಾನವನ್ನು ಬದಲಾಯಿಸುತ್ತಿದೆ ಎಂದು ಆರೋಪಿಸಿದ ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳದಲ್ಲಿ ಎನ್‌ಆರ್‌ಸಿ ಎಂದಿಗೂ ಜಾರಿಗೆ ತರಲು ತಾವು ಬಿಡುವುದಿಲ್ಲ ಎಂದು ಹೇಳಿದ್ದಾರೆ.


ಇದನ್ನೂ ಓದಿ-Mirusvirus Alert: ಜಗತ್ತಿನಲ್ಲಿ ವಿನಾಶ ಉಂಟುಮಾಡಲು ಬಂದಿದೆ ಹೊಸ ವೈರಸ್!


ನಾನು ತಲೆ ತಗ್ಗಿಸಲು ಬಿಡುವುದಿಲ್ಲ
ಹಣಬಲ ಮತ್ತು ಕೇಂದ್ರೀಯ ಸಂಸ್ಥೆಗಳ ವಿರುದ್ಧ ಹೋರಾಡಲು ತಾವು ಹೋರಾಡಲು ಸಿದ್ಧ ಮತ್ತು ಎಂದಿಗೂ ಕೂಡ ತಲೆ ತಗ್ಗಿಸುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಕೇಂದ್ರೀಯ ಸಂಸ್ಥೆಗಳು ತಮ್ಮ ಪಕ್ಷ ಟಿಎಂಸಿ ವಿರುದ್ಧ ರಾಜಕೀಯ ಉದ್ದೇಶಗಳೊಂದಿಗೆ ಕ್ರಮ ತೆಗೆದುಕೊಳ್ಳುತ್ತಿದೆ ಅವರು ಆರೋಪಿಸಿದ್ದಾರೆ.


ಇದನ್ನೂ ಓದಿ-ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಗೆ ಸಿಬಿಐನಿಂದ ಸಮನ್ಸ್ ಜಾರಿ 


2024 ರ ಚುನಾವಣೆಗೆ ಈ ಪಣ
ದೇಶದಲ್ಲಿ ಯಾರು ಸರ್ಕಾರಕ್ಕೆ ಬರುತ್ತಾರೆ ಎಂಬುದನ್ನು ಖಾತ್ರಿಪಡಿಸಲು 1 ವರ್ಷದಲ್ಲಿ ಚುನಾವಣೆ ನಡೆಯಲಿದೆ ಎಂದು ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಒಗ್ಗಟ್ಟಾಗಿ ನಿಂತು ವಿಭಜಕ ಶಕ್ತಿಗಳ ವಿರುದ್ಧ ಹೋರಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ನಾವೆಲ್ಲರೂ ಅವರನ್ನು ಸರ್ಕಾರದಿಂದ ಕಿತ್ತೊಗೆಯಬೇಕೆಂದು ನಿರ್ಧರಿಸಬೇಕು. ನಾವು ಪ್ರಜಾಪ್ರಭುತ್ವವನ್ನು ಉಳಿಸಲು ವಿಫಲವಾದರೆ ಎಲ್ಲವೂ ಹಾಳಾಗಲಿದೆ ಎಂದು ಬ್ಯಾನರ್ಜಿ ಹೇಳಿದ್ದಾರೆ. 


ಇದನ್ನೂ ನೋಡಿ-


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.