ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿ ತಿಂಗಳಿಗೊಮ್ಮೆ ನಡೆಸುವ ರಾಷ್ಟ್ರೀಯ ರೇಡಿಯೋ ಕಾರ್ಯಕ್ರಮವಾದ ಮನ್ ಕಿ ಬಾತ್‌ನ 83 ನೇ ಆವೃತ್ತಿಯಲ್ಲಿ ಭಾನುವಾರ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು.


COMMERCIAL BREAK
SCROLL TO CONTINUE READING

ತಮ್ಮ ಭಾಷಣದ ಸಮಯದಲ್ಲಿ, ಪಿಎಂ ಮೋದಿ (PM Narendra Modi) ಅವರು ಸಶಸ್ತ್ರ ಪಡೆಗಳಿಂದ ಹಿಡಿದು ದೇಶದ ನೈಸರ್ಗಿಕ ಸಂಪನ್ಮೂಲಗಳವರೆಗೆ ಹಲವಾರು ವಿಚಾರಗಳನ್ನು ಹಂಚಿಕೊಂಡಿದ್ದಾರೆ.ಪ್ರಧಾನ ಮಂತ್ರಿ ಮೋದಿಯವರು ಬಡವರಿಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ಪಡೆಯಲು ಸಹಾಯ ಮಾಡುವ ಭಾರತ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯ ಫಲಾನುಭವಿಯೊಂದಿಗೆ ಸಂವಾದ ನಡೆಸಿದರು. ಇದೇ ವೇಳೆ ಅವರು  ಅಧಿಕಾರವನ್ನು ಬಯಸುವುದಿಲ್ಲ, ಜನರ ಸೇವೆ ಮಾಡಲು ಬಯಸುತ್ತೇನೆ ಎಂದು ಹೇಳಿದರು.


ಇದನ್ನೂ ಓದಿ :7th Pay Commission: Good News - ಶೀಘ್ರದಲ್ಲಿಯೇ ಈ ಸರ್ಕಾರಿ ನೌಕರರ ಖಾತೆ ಸೇರಲಿದೆ 4 ತಿಂಗಳ DA ಬಾಕಿ


ಪ್ರಧಾನಿ ಮೋದಿ ಅವರು ಮನ್ ಕಿ ಬಾತ್ ಸಮಯದಲ್ಲಿ ಪ್ರಕೃತಿಯನ್ನು ರಕ್ಷಿಸುವ ತಕ್ಷಣದ ಅಗತ್ಯತೆಯ ಬಗ್ಗೆ ಮಾತನಾಡಿದರು ಮತ್ತು ಸಶಸ್ತ್ರ ಪಡೆಗಳಿಗೆ ಗೌರವ ಸಲ್ಲಿಸಿದರು. ಇದೆ ವೇಳೆ ಅವರು ಭಾರತೀಯ ನವ್ಯೋದ್ಯಮದ ಬಗ್ಗೆಯೂ ಮಾತನಾಡಿದರು. ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದ್ದರೂ ಕೂಡ ಸಾಂಕ್ರಾಮಿಕವೂ ಇನ್ನೂ ಕೊನೆಗೊಂಡಿಲ್ಲ ಎಂದು ಹೇಳಿದರು.


ಭಾರತದಲ್ಲಿ ಸ್ಟಾರ್ಟ್‌ಅಪ್‌ಗಳ ಕುರಿತು ಮಾತನಾಡುತ್ತಾ ಪ್ರಧಾನಿ ಮೋದಿ, “ನಾವು ಭಾರತದ ಬೆಳವಣಿಗೆಯ ಕಥೆಯಲ್ಲಿ ಒಂದು ಮಹತ್ವದ ಘಟ್ಟದಲ್ಲಿದ್ದೇವೆ. ಯುವಕರು ಉದ್ಯೋಗಾಕಾಂಕ್ಷಿಗಳು ಮಾತ್ರವಲ್ಲದೆ ಉದ್ಯೋಗ ಸೃಷ್ಟಿಕರ್ತರೂ ಆಗಿದ್ದಾರೆ. ಭಾರತದಲ್ಲಿ 70ಕ್ಕೂ ಹೆಚ್ಚು ಯುನಿಕಾರ್ನ್‌ಗಳಿವೆ. ಈ ದೇಶದ ಯುವಕರು ಆಲೋಚನೆಗಳು ಮತ್ತು ನಾವೀನ್ಯತೆ, ಅಪಾಯಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯ ಮತ್ತು ಮಾಡಬಹುದಾದ ಮನೋಭಾವವನ್ನು ಹೊಂದಿದ್ದಾರೆ ಎಂದು ಅವರು ಹೇಳಿದರು.


ಇದನ್ನೂ ಓದಿ : "ರೈತರ ಬೇಡಿಕೆ ಈಡೇರುವರೆಗೆ ಚಳುವಳಿ ಮುಂದುವರೆಯಲಿದೆ"


ಪ್ರಕೃತಿಯ ಸಂರಕ್ಷಣೆಯ  ಪ್ರಾಮುಖ್ಯದ ಕುರಿತಾಗಿ ಮಾತನಾಡಿ "ನಾವು ಅದರ ಸಮತೋಲನವನ್ನು ಉಲ್ಲಂಘಿಸಿದಾಗ ಅಥವಾ ಅದರ ಶುದ್ಧತೆಯನ್ನು ನಾಶಪಡಿಸಿದಾಗ ಮಾತ್ರ ನಮಗೆ ಪ್ರಕೃತಿಯಿಂದ ಬೆದರಿಕೆ ಇದೆ.ಜನರು ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಬದುಕಲು ಮತ್ತು ನೈಸರ್ಗಿಕ ಸಂಪನ್ಮೂಲಗಳನ್ನು ರಕ್ಷಿಸುವ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು ಅತ್ಯಗತ್ಯ" ಎಂದು ಅವರು ಹೇಳಿದರು.


ಮುಂದಿನ ತಿಂಗಳು 1971ರ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಜಯಗಳಿಸಿದ 50ನೇ ವರ್ಷಾಚರಣೆಯನ್ನು ಆಚರಿಸುವ ಕುರಿತಾಗಿ ಪ್ರಸ್ತಾಪಿಸುತ್ತಾ ಸಶಸ್ತ್ರ ಪಡೆಗಳಿಗೆ ಗೌರವ ಸಲ್ಲಿಸಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.