ನವದೆಹಲಿ: ದೇಶದ ಅಭಿವೃದ್ಧಿಗೆ ಬಿಜೆಪಿ ಅಗತ್ಯವಾಗಿದ್ದು, ಅದರ ದೂರದೃಷ್ಟಿಯಿಂದ ಧನಾತ್ಮಕ ಬದಲಾವಣೆಗಳನ್ನು ತಂದಿದೆ ಎಂದು ಇತ್ತೀಚೆಗೆ ಪಕ್ಷಕ್ಕೆ ಸೇರ್ಪಡೆಗೊಂಡ ಮುಲಾಯಂ ಸಿಂಗ್ ಯಾದವ್ ಅವರ ಕಿರಿಯ ಸೊಸೆ ಅಪರ್ಣಾ ಯಾದವ್ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಮಹಿಳೆಯರ ಸುರಕ್ಷತೆಗಾಗಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ರಚನೆಯಾಗುವುದು ಅಗತ್ಯ ಎಂದು ಅವರು ಹೇಳಿದ್ದಾರೆ.403 ಸದಸ್ಯ ಬಲದ ರಾಜ್ಯ ವಿಧಾನಸಭೆಗೆ ಮುಂದಿನ ತಿಂಗಳು ನಡೆಯಲಿರುವ ಚುನಾವಣೆಗೆ ಮುನ್ನ ಯಾದವ್ ಅವರು ಕೇಸರಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.


ಇದನ್ನೂ ಓದಿ: ಮೂರನೇ ಕೊರೊನಾ ಅಲೆಯ ಗರಿಷ್ಠ ಮಟ್ಟ ಯಾವಾಗ ತಲುಪುತ್ತೆ? ತಜ್ಞರು ಹೇಳುವುದೇನು?


'ರಾಷ್ಟ್ರೀಯತೆಯಿಂದಾಗಿ ನಾನು ಬಿಜೆಪಿಗೆ ಸೇರ್ಪಡೆಗೊಂಡಿದ್ದೇನೆ, ಬಿಜೆಪಿ ಸರ್ಕಾರದಲ್ಲಿ ಮಹಿಳೆಯರಿಗೆ ಗೌರವ ಸಿಕ್ಕಿದೆ" ಎಂದು ಬಿಜೆಪಿ ಪ್ರಧಾನ ಕಚೇರಿಯಿಂದ ಭಾನುವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಅಪರ್ಣಾ ಯಾದವ್ ಹೇಳಿದ್ದಾರೆ.


ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಆಲೋಚನಾ ಪ್ರಕ್ರಿಯೆ ಮತ್ತು ಅವರ ದೂರದೃಷ್ಟಿ ಸಕಾರಾತ್ಮಕ ಬದಲಾವಣೆಗಳನ್ನು ತಂದಿದೆ ಎಂದು ಅವರು ಹೇಳಿದರು."ಬಿಜೆಪಿಯು ದೇಶವನ್ನು ಉಳಿಸಿದ ಪಕ್ಷವಾಗಿದೆ.ನವ ಭಾರತವನ್ನು ನಿರ್ಮಿಸಲು ನಾನು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚಲಿಸಲು ಬಯಸುತ್ತೇನೆ.ಯೋಗಿ ಜಿಯಿಂದ ನವ ಭಾರತದಲ್ಲಿ ಬಣ್ಣಗಳನ್ನು ತುಂಬಲು ನಾನು ಅವಕಾಶವನ್ನು ಪಡೆಯಲು ಬಯಸುತ್ತೇನೆ" ಎಂದು ಯಾದವ್ ಹೇಳಿದರು.


ಇದನ್ನೂ ಓದಿ: Watch: ಉಲ್ಟಾ ಬ್ಲೌಸ್ ಧರಿಸಿ ಸುದ್ದಿಯಾದ ಬಿಗ್ ಬಾಸ್ ಒಟಿಟಿ ಖ್ಯಾತಿಯ ಉರ್ಫಿ ಜಾವೇದ್..!


ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ದೇಶ ಮತ್ತು ರಾಜ್ಯ ಎರಡೂ ಅಭಿವೃದ್ಧಿಯಾಗುತ್ತದೆ, ಬಡವರ ಕಲ್ಯಾಣ ಇರುತ್ತದೆ, ಮಹಿಳೆಯರು ಸುರಕ್ಷಿತವಾಗಿರುತ್ತಾರೆ ಮತ್ತು ‘ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ’ ಮಂತ್ರ ಈಡೇರಲಿದೆ,’’ ಎಂದು ಅವರು ಹೇಳಿದರು.


ಭಾನುವಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದ ಸಂದರ್ಭದಲ್ಲಿ, ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್, ಅಪರ್ಣಾ ಯಾದವ್, ರಾಯ್ ಬರೇಲಿಯ ಮಾಜಿ ಕಾಂಗ್ರೆಸ್ ಶಾಸಕಿ ಅದಿತಿ ಸಿಂಗ್ ಮತ್ತು ಮತ್ತೊಬ್ಬ ಮಾಜಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಮೌರ್ಯ ಸ್ವಾತಂತ್ರ್ಯ ಹೋರಾಟಗಾರರಿಗೆ ನಮನ ಸಲ್ಲಿಸಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.