ನಾನು ರಾಹುಲ್ ಗಾಂಧಿಯೇ ಪ್ರಧಾನಿ ಅಭ್ಯರ್ಥಿಯಾಗಬೇಕು ಎಂದು ಬಯಸುತ್ತೇನೆ - ಖರ್ಗೆ
ಪಿ.ಚಿದಂಬರ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಆದರೆ ನಾನು ರಾಹುಲ್ ಗಾಂಧಿಯವರೇ ಪ್ರಧಾನಿ ಅಭ್ಯರ್ಥಿಯಾಗಬೇಕೆಂದು ಬಯಸುತ್ತೇನೆ ಎಂದು ಲೋಕಸಭೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಬೆಂಗಳೂರು: ಪಿ.ಚಿದಂಬರ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಆದರೆ ನಾನು ರಾಹುಲ್ ಗಾಂಧಿಯವರೇ ಪ್ರಧಾನಿ ಅಭ್ಯರ್ಥಿಯಾಗಬೇಕೆಂದು ಬಯಸುತ್ತೇನೆ ಎಂದು ಲೋಕಸಭೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ" ಚಿದಂಬರ್ ಅವರ ಹೇಳಿಕೆ ವೈಯಕ್ತಿಕವಾದದ್ದು ಆದರೆ ನಾನು ರಾಹುಲ್ ಗಾಂಧಿಯವರೇ ಪ್ರಧಾನಿ ಆಗಬೇಕೆಂದು ಬಯಸುತ್ತೇನೆ" ಎಂದು ತಿಳಿಸಿದರು.
ಇತ್ತೀಚಿಗೆ ಹಿರಿಯ ಪಿ.ಚಿದಂಬರಂ ಖಾಸಗಿ ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನವೊಂದರಲ್ಲಿ ಕಾಂಗ್ರೆಸ್ ಅಧಿಕೃತವಾಗಿ ರಾಹುಲ್ ಗಾಂಧಿಯವರನ್ನು ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿಲ್ಲ ಎಂದು ತಿಳಿಸಿದ್ದರು.ಈ ಹೇಳಿಕೆ ಹಿನ್ನಲೆಯಲ್ಲಿ ಈಗ ಪಕ್ಷದ ಒಳಗಡೆ ಹಲವು ಕಾಂಗ್ರೆಸ್ ನಾಯಕರು ಚಿದಂಬರ್ ಅವರ ಹೇಳಿಕೆಯನ್ನು ವಿರೋಧಿಸಿದ್ದಾರೆ.
ಈ ವಿಚಾರವಾಗಿ ಹಿರಿಯ ನಾಯಕ ಖರ್ಗೆಯವರನ್ನು ಕೇಳಿದಾಗ ತಾವು ರಾಹುಲ್ ಗಾಂಧಿಯವರೇ ಪಕ್ಷದ ಪ್ರಧಾನಿ ಅಭ್ಯರ್ಥಿಯಾಗಬೇಕೆಂದು ಬಯಸುತ್ತೇವೆ ಒಂದು ವೇಳೆ ಏನಾದರೂ ಬದಲಾವಣೆ ಆದರೆ ಅದು ಚುನಾವಣೆ ಬಳಿಕವೇ ಹೊರತು ಈಗಲ್ಲ ಎಂದು ತಿಳಿಸಿದರು.