ವಯನಾಡು: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಇಂದು ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಸಿಪಿಎಂ ವಿರುದ್ಧ ತಾವು ಮಾತನಾಡುವುದಿಲ್ಲ ಎಂದಿದ್ದಾರೆ.


COMMERCIAL BREAK
SCROLL TO CONTINUE READING

ಲೋಕಸಭಾ ಚುನಾವಣೆಗೆ ವಯನಾಡ್ ಕ್ಷೇತ್ರದಿಂದ ನಾಮಪತ್ರಸಲ್ಲಿಸಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ವಯನಾಡಿನಿಂದ ಸ್ಪರ್ಧಿಸುತ್ತಿರುವುದಕ್ಕೆ ಸಿಪಿಎಂ ನಾಯಕರು ನನ್ನ ಬಗ್ಗೆ ಸಿಟ್ಟಾಗಿದ್ದಾರೆ. ನನ್ನನ್ನು ಹಾಗೂ ನನ್ನ ನಡೆಯನ್ನು ಟೀಕಿಸುತ್ತಿದ್ದಾರೆ. ಆದರೆ ಇದಕ್ಕೆ ನಾನೇನೂ ಪ್ರತಿಕ್ರಿಯಿಸುವುದಿಲ್ಲ ಎಂದು ರಾಹುಲ್​ ಗಾಂಧಿ ಹೇಳಿದ್ದಾರೆ.


"ದಕ್ಷಿಣ ಮತ್ತು ಉತ್ತರ ಭಾರತಗಳೆಂಬುದು ಇಲ್ಲ. ಅವರೆಡೂ ಒಂದೇ. ಭಾರತದ ಅಖಂಡತೆಯ ಭವ್ಯತೆ ಸಾರಲು ತಾವು ಕೇರಳದಿಂದಲೂ ಸ್ಪರ್ಧಿಸಲು ನಿರ್ಧರಿಸಿದ್ದಾಗಿ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. 



ವಯನಾಡಿನಲ್ಲಿ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿಗೆ ಸಹೋದರಿ ಪ್ರಿಯಾಂಕಾ ಗಾಂಧಿ ಮತ್ತು ಹಿರಿಯ ಕಾಂಗ್ರೆಸ್ ಮುಖಂಡರಾದ ಕೆ.ಸಿ.ವೇಣುಗೋಪಾಲ್ ಮತ್ತು ಮುಕುಲ್ ವಾಸ್ನಿಕ್  ಕೂಡ ಸಾಥ್ ನೀಡಿದರು. ಇದಕ್ಕೂ ಮುನ್ನ ರಾಹುಲ್ ಗಾಂಧಿ ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಮತ್ತು ಕೇರಳ ವಿಧಾನಸಭಾ ವಿರೋಧ ಪಕ್ಷದ ಮುಖಂಡ ರಮೇಶ್ ಚೆನ್ನಿತಾಳರ ಜೊತೆಗೂಡಿ ರೋಡ್ ಶೋ ನಡೆಸಿದರು.