ರಾಳೇಗಣ ಸಿದ್ಧಿ: ಕೇಂದ್ರ ಸರ್ಕಾರ್ ಕೊಟ್ಟ ಭರವಸೆಗಳನ್ನು ಈಡೇರಿಸದಿದ್ದರೆ ನನಗೆ ನೀಡಿರುವ ಪದ್ಮಭೂಷಣ ಪ್ರಶಸ್ತಿಯನ್ನು ರಾಷ್ಟ್ರಪತಿಗಳಿಗೆ ಹಿಂದಿರುಗಿಸುತ್ತೇನೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಭ್ರಷ್ಟಾಚಾರ ನಿಗ್ರಹ ಸಂಸ್ಥೆಗಳಾದ ಲೋಕಪಾಲ್ ಮತ್ತು ಲೋಕಾಯುಕ್ತ ಜಾರಿಗೆ ಒತ್ತಾಯಿಸಿ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದಲ್ಲಿ ಮಾತನಾಡಿದ ಅಣ್ಣಾ ಹಜಾರೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.


"ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನರ ನಂಬಿಕೆಯನ್ನು ಉಲ್ಲಂಘಿಸಿದೆ. ಇದುವರೆಗೂ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ. ನನ್ನ ಸಾಮಾಜಿಕ ಕಾಳಜಿ ಮತ್ತು ಹೋರಾಟವನ್ನು ಪರಿಗಣಿಸಿ ನನಗೆ ಪದ್ಮ ಭೂಷಣ ಪುರಸ್ಕಾರ ನೀಡಲಾಗಿತ್ತು. ಆದರೆ, ಸಮಾಜದ ಪರಿಸ್ಥಿತಿ ಇನ್ನೂ ಹಾಗೆಯೇ ಇದೆ. ಭ್ರಷ್ಟಾಚಾರ ನಿಗ್ರಹ ಸಂಸ್ಥೆಗಳಾದ ಲೋಕಪಾಲ್ ಮತ್ತು ಲೋಕಾಯುಕ್ತ ಇನ್ನೂ ಜಾರಿಯಾಗಿಲ್ಲ. ಹೀಗಿರುವಾಗ ಪ್ರಶಸ್ತಿಯನ್ನು ನಾನೇಕೆ ಇಟ್ಟುಕೊಳ್ಳಲಿ. ರಾಷ್ಟ್ರಪತಿಗಳಿಗೆ ಪಶಸ್ತಿ ಹಿಂದಿರುಗಿಸುತ್ತೇನೆ" ಎಂದಿದ್ದಾರೆ.