ಬಿಹಾರದ ಸೀತಾಮರ್ಹಿಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ.ಪ್ರವಾಹ ನೆರೆ ಸಂತ್ರಸ್ತರಿಗೆ ಪರಿಹಾರ ಸಾಮಗ್ರಿಗಳನ್ನು ಹೊತ್ತೊಯ್ಯುತ್ತಿದ್ದ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ.ಇಲ್ಲಿಯವರೆಗೆ ಬಂದಿರುವ ಮಾಹಿತಿ ಪ್ರಕಾರ, ಮುಜಾಫರ್‌ಪುರದ ಬಳಿ ಹೆಲಿಕಾಪ್ಟರ್ ಪ್ರವಾಹದ ನೀರಿನಲ್ಲಿ ಬಿದ್ದಿದೆ. ಅಪಘಾತದಲ್ಲಿ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ಇದುವರೆಗೆ ವರದಿಯಾಗಿಲ್ಲ. 


COMMERCIAL BREAK
SCROLL TO CONTINUE READING

ಪ್ರವಾಹ ಪೀಡಿತ ಪ್ರದೇಶದಲ್ಲಿ ಹೆಲಿಕಾಪ್ಟರ್ ತುರ್ತು ಲ್ಯಾಂಡಿಂಗ್ :
ಮಾಧ್ಯಮ ವರದಿಗಳ ಪ್ರಕಾರ, ಬಿಹಾರದ ಸೀತಾಮರ್ಹಿ ಸೆಕ್ಟರ್‌ನಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಯ ಸಂದರ್ಭದಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ಭಾರತೀಯ ವಾಯುಪಡೆಯ ಲಘು ಹೆಲಿಕಾಪ್ಟರ್ ಪ್ರವಾಹ ಪೀಡಿತ ಪ್ರದೇಶದಲ್ಲಿ ಲ್ಯಾಂಡ್ ಮಾಡಬೇಕಾಯಿತು. ಹೆಲಿಕಾಪ್ಟರ್‌ನಲ್ಲಿ ಇಬ್ಬರು ಪೈಲಟ್‌ಗಳು ಸೇರಿದಂತೆ ನಾಲ್ವರು ಸುರಕ್ಷಿತವಾಗಿದ್ದಾರೆ.


ಇದನ್ನೂ ಓದಿ : Shocking news: ಹೆತ್ತ ತಾಯಿಯನ್ನೇ ಮರಕ್ಕೆ ಕಟ್ಟಿಹಾಕಿ ಜೀವಂತ ಸುಟ್ಟುಹಾಕಿದ ಪಾಪಿ ಮಕ್ಕಳು!


ಪ್ರವಾಹ ಪೀಡಿತ ಪ್ರದೇಶಕ್ಕೆ ಪರಿಹಾರ ಸಾಮಗ್ರಿಗಳನ್ನು ತಲುಪಿಸಿದ ನಂತರ ಹೆಲಿಕಾಪ್ಟರ್ ದರ್ಭಾಂಗಾದಿಂದ ಹಿಂತಿರುಗುತ್ತಿದ್ದ ವೇಳೆ, ಔರೈ ಬ್ಲಾಕ್‌ನ ಪ್ರವಾಹ ಪ್ರದೇಶದಲ್ಲಿ  ತುರ್ತು ಭೂಸ್ಪರ್ಶ ಮಾಡಿದೆ ಎಂದು ಮುಜಾಫರ್‌ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಾಕೇಶ್ ಕುಮಾರ್ ತಿಳಿಸಿದ್ದಾರೆ.


ಹೆಲಿಕಾಪ್ಟರ್‌ನಲ್ಲಿದ್ದ ನಾಲ್ವರು ಸುರಕ್ಷಿತವಾಗಿದ್ದಾರೆ ಎಂದು ಮುಜಾಫರ್‌ಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ಸುಬ್ರತಾ ಕುಮಾರ್ ಸೇನ್ ತಿಳಿಸಿದ್ದಾರೆ.ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆಗಾಗಿ ಶ್ರೀಕೃಷ್ಣ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಅವರನ್ನು ಕರೆದೊಯ್ಯಲಾಗಿದೆ.


ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಇನ್ನೂ ಗಂಭೀರ :
ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಇನ್ನೂ ಗಂಭೀರವಾಗಿಯೇ ಇದೆ.ಕೋಸಿ, ಗಂಡಕ್ ಮತ್ತು ಗಂಗಾ ನದಿಗಳ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಎಂ ನಿತೀಶ್ ಕುಮಾರ್ ಮಂಗಳವಾರ ವೈಮಾನಿಕ ಸಮೀಕ್ಷೆ ನಡೆಸಿದರು. ಸಂತ್ರಸ್ತ ಪ್ರದೇಶಗಳಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.


ಇದನ್ನೂ ಓದಿ : Fake ₹500 notes: ₹500 ಮುಖಬೆಲೆಯ ನಕಲಿ ನೋಟಿನಲ್ಲಿ ಗಾಂಧೀಜಿ ಬದಲು ನಟ ಅನುಪಮ್ ಖೇರ್ ಫೋಟೊ!


ನೇಪಾಳದಲ್ಲಿ ಭಾರೀ ಮಳೆಯಿಂದಾಗಿ ಬಿಹಾರದಲ್ಲಿ ಪ್ರವಾಹ :
ನೆರೆಯ ರಾಷ್ಟ್ರ ನೇಪಾಳದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ, ಸೆಪ್ಟೆಂಬರ್ 29 ರಂದು ಬೆಳಿಗ್ಗೆ 5 ಗಂಟೆಗೆ ವೀರಪುರದ ಕೋಸಿ ಬ್ಯಾರೇಜ್‌ನಿಂದ 6,61,295 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ.ಅದೇ ರೀತಿ ಗಂಡಕ್ ನದಿಗೆ ನಿರ್ಮಿಸಿರುವ ವಾಲ್ಮೀಕಿನಗರ ಬ್ಯಾರೇಜ್‌ನಿಂದ ಕಳೆದ ಶನಿವಾರ ಸಂಜೆ 7 ಗಂಟೆಯವರೆಗೆ 5.38 ಲಕ್ಷ ಕ್ಯೂಸೆಕ್ ನೀರು ಬಿಡಲಾಗಿತ್ತು.ಈ ಹಿಂದೆ 2003ರಲ್ಲಿ ಈ ಬ್ಯಾರೇಜ್‌ನಿಂದ ಗರಿಷ್ಠ 6.39 ಲಕ್ಷ ಕ್ಯೂಸೆಕ್ ನೀರು ಬಿಡಲಾಗಿತ್ತು.


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ