ಲೈಂಗಿಕ ಅತ್ಯಾಚಾರಕ್ಕೆ ಒಳಪಟ್ಟವರ ಹೆಸರು ಬಹಿರಂಗಪಡಿಸುವಂತಿಲ್ಲ- ಸುಪ್ರೀಂಕೋರ್ಟ್
ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳಕ್ಕೆ ಒಳಗಾದವರ ಹೆಸರು ಮತ್ತು ಮತ್ತು ಗುರುತುಗಳನ್ನು ಬಹಿರಂಗಪಡಿಸುವಂತಿಲ್ಲ ಎಂದು ಸುಪ್ರಿಂಕೋರ್ಟ್ ಆದೇಶಿಸಿದೆ.
ನವದೆಹಲಿ: ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳಕ್ಕೆ ಒಳಗಾದವರ ಹೆಸರು ಮತ್ತು ಮತ್ತು ಗುರುತುಗಳನ್ನು ಬಹಿರಂಗಪಡಿಸುವಂತಿಲ್ಲ ಎಂದು ಸುಪ್ರಿಂಕೋರ್ಟ್ ಆದೇಶಿಸಿದೆ.
ನ್ಯಾಯಮೂರ್ತಿ ಮದನ್ ಬಿ ಲೋಕೂರ್ ನೇತೃತ್ವದ ಪೀಠವು ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳಕ್ಕೆ ಬಲಿಪಶುವಾದವರ ಗುರುತುಗಳನ್ನು ಬಹಿರಂಗ ಪಡಿಸುವಂತಿಲ್ಲ ಎಂದು ನಿರ್ದೇಶನ ನೀಡಿದೆ.
ಇದೆ ಸಂದರ್ಭದಲ್ಲಿ ಸುಪ್ರಿಂಕೋರ್ಟ್ ಅಪ್ರಾಪ್ತರ ಮೇಲೆ ದಾಖಲಾಗಿರುವ ಎಫ್ಐಆರ್ ಗಳನ್ನು ಸಾರ್ವಜನಿಕವಾಗಿ ಪೊಲೀಸರು ಬಹಿರಂಗಪಡಿಸಬಾರದು ಎಂದು ತಿಳಿಸಿದೆ.
ಇದೇ ಸಂದರ್ಭದಲ್ಲಿ ಅತ್ಯಾಚಾರಕ್ಕೆ ಒಳಗಾದವರನ್ನು ಅಸ್ಪೃಶ್ಯರ ರೀತಿಯಲ್ಲಿ ಕಾಣುತ್ತಿರುವುದರ ಬಗ್ಗೆ ಸುಪ್ರೀಂ ಕೋರ್ಟ್ ವಿಷಾದ ವ್ಯಕ್ತಪಡಿಸಿದೆ.