ಕಾಶ್ಮೀರ ಫೈಲ್ಸ್ ಮಾಡುವುದಾದರೆ ಲಖಿಂಪುರ್ ಫೈಲ್ಸ್ ಕೂಡ ನಿರ್ಮಾಣವಾಗಲಿ- ಅಖಿಲೇಶ್ ಯಾದವ್
ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ `ದಿ ಕಾಶ್ಮೀರ್ ಫೈಲ್ಸ್` ನಿರ್ಮಿಸಲು ಸಾಧ್ಯವಾದರೆ, ಲಖಿಂಪುರ ಫೈಲ್ಸ್ ಚಿತ್ರವನ್ನೂ ಕೂಡ ನಿರ್ಮಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.
ಲಖನೌ: ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ 'ದಿ ಕಾಶ್ಮೀರ್ ಫೈಲ್ಸ್' ನಿರ್ಮಿಸಲು ಸಾಧ್ಯವಾದರೆ, ಲಖಿಂಪುರ ಫೈಲ್ಸ್ ಚಿತ್ರವನ್ನೂ ಕೂಡ ನಿರ್ಮಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ- James Release: ಎಲ್ಲೆಲ್ಲೂ 'ಜೇಮ್ಸ್' ಅಬ್ಬರ
ಅಕ್ಟೋಬರ್ 3, 2021 ರಂದು ಲಖಿಂಪುರ ಖೇರಿಯಲ್ಲಿ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರ ಆಂದೋಲನದ ಸಂದರ್ಭದಲ್ಲಿ ಹಿಂಸಾಚಾರವು ಭುಗಿಲೆದ್ದಿತು,ಇದರಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರನ ಮಾಲೀಕತ್ವದ ಜೀಪ್ ನಾಲ್ವರು ರೈತರ ಸಾವಿಗೆ ಕಾರಣವಾಗಿತ್ತು.
ಬುಧವಾರದಂದು ಸೀತಾಪುರ ಜಿಲ್ಲೆಯಲ್ಲಿ ಪತ್ರಕರ್ತರು ಕಾಶ್ಮೀರ್ ಫೈಲ್ಸ್ ಸಿನಿಮಾದ ಬಗ್ಗೆ ಕೇಳಿದ್ದಕ್ಕೆ ಉತ್ತರಿಸಿದ ಅಖಿಲೇಶ್ ಯಾದವ್ (Akhilesh Yadav) ಕಾಶ್ಮೀರ ಫೈಲ್ಸ್ ಸಿನಿಮಾ ಮಾಡುವುದಾದರೆ,ಇನ್ನೊಂದೆಡೆಗೆ ರೈತರನ್ನು ಜೀಪಿನ ಚಕ್ರಕ್ಕೆ ಸಿಲುಕಿಸಿ ನಜ್ಜುಗುಜ್ಜಾಗಿಸಿದ ಲಖೀಂಪುರ ಫೈಲ್ಸ್’ಚಿತ್ರವನ್ನೂ ನಿರ್ಮಿಸಬೇಕು ಎಂದು ಅವರು ಹೇಳಿದರು.
ಇದನ್ನೂ ಓದಿ- ಸೇನಾ ಸಮವಸ್ತ್ರದಲ್ಲೇ ಜೇಮ್ಸ್ ಚಿತ್ರ ನೋಡಲು ಬಂದ ನಿವೃತ್ತ ಯೋಧ
ವಿವೇಕ್ ಅಗ್ನಿಹೋತ್ರಿ ಬರೆದು ನಿರ್ದೇಶಿಸಿದ 'ದಿ ಕಾಶ್ಮೀರ್ ಫೈಲ್ಸ್'1990 ರ ದಶಕದಲ್ಲಿ ಕಣಿವೆಯಿಂದ ಕಾಶ್ಮೀರಿ ಪಂಡಿತರ ವಲಸೆಯನ್ನು ಚಿತ್ರಿಸುತ್ತದೆ.'ದಿ ಕಾಶ್ಮೀರ್ ಫೈಲ್ಸ್' ಅನ್ನು ತೆರಿಗೆ ಮುಕ್ತಗೊಳಿಸಿದ ದೇಶದ ಮೊದಲ ರಾಜ್ಯಗಳಲ್ಲಿ ಉತ್ತರ ಪ್ರದೇಶವೂ ಸೇರಿದೆ.ಮಧ್ಯಪ್ರದೇಶ, ಗುಜರಾತ್, ಕರ್ನಾಟಕ, ಹರಿಯಾಣ, ಗೋವಾ, ತ್ರಿಪುರಾ ಮತ್ತು ಉತ್ತರಾಖಂಡ್ ರಾಜ್ಯಗಳು ಸಹ ಚಿತ್ರದ ಮೇಲಿನ ತೆರಿಗೆಯನ್ನು ಮನ್ನಾ ಮಾಡಿವೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.