ಬೆಂಗಳೂರು: ಬೊಮ್ಮಾಯಿ ಅವರು ಅನ್ನಭಾಗ್ಯ ಸಿದ್ದರಾಮಯ್ಯ ಅವರ ಕಾರ್ಯಕ್ರಮ ಅಲ್ಲ ಮೋದಿ ಕಾರ್ಯಕ್ರಮ ಎನ್ನುತ್ತಿದ್ದಾರೆ. ಇದು ಮೋದಿ ಅವರ ಕಾರ್ಯಕ್ರಮವಾದರೆ ಗುಜರಾತ್, ಉತ್ತರ ಪ್ರದೇಶ ದಲ್ಲಿ ಉಚಿತ ಅಕ್ಕಿ ನೀಡುತ್ತಿಲ್ಲ ಯಾಕೆ? ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.


COMMERCIAL BREAK
SCROLL TO CONTINUE READING

ಮನಮೋಹನ್ ಸಿಂಗ್ ಅವರ ನೇತೃತ್ವದ ಯುಪಿಎ ಸರ್ಕಾರ ದೇಶದ ಬಡವರಿಗೆ ಆಹಾರ ಭದ್ರತಾ ಕಾಯ್ದೆ ಜಾರಿಗೆ ತಂದು 3 ರೂ. ಬೆಲೆಯಲ್ಲಿ ಅಕ್ಕಿ ನೀಡಲು ನಿರ್ಧರಿಸಿತು. ನಂತರ 2013ರ ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬಂದರೆ ಅನ್ನಭಾಗ್ಯ ಯೋಜನೆ ಘೋಷಣೆ ಮಾಡಿದೆವು. ನಾವು ಅಧಿಕಾರಕ್ಕೆ ಬಂದ 24 ಗಂಟೆ ಒಳಗಾಗಿ ಈ ಯೋಜನೆ ಜಾರಿ ಮಾಡಿದೆವು. ಆರಂಭದಲ್ಲಿ ಪ್ರತಿ ಕೆ.ಜಿಗೆ 1 ರೂ. ನಂತೆ 5 ಕೆ.ಜಿ ಅಕ್ಕಿಯಂತೆ ಒಟ್ಟು 30 ಕೆ.ಜಿ ಅಕ್ಕಿ ನೀಡಲಾಗುತ್ತಿತ್ತು. ನಂತರ ಪ್ರತಿ ಕುಟುಂಬದ ಪ್ರತಿ ಸದಸ್ಯರಿಗೆ 7 ಕೆ.ಜಿ ಅಕ್ಕಿಯನ್ನು ಉಚಿತವಾಗಿ ನೀಡಲು ನಿರ್ಧರಿಸಿದೆವು.


ಇದನ್ನೂ ಓದಿ : BICFF : "ಅಪ್ಪು ಮಕ್ಕಳ ಚಲನಚಿತ್ರೋತ್ಸವ" ಕ್ಕೆ ಅಶ್ವಿನಿ ಪುನೀತ್ ರಾಜಕುಮಾರ್ ಚಾಲನೆ


ನಂತರ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಇದನ್ನು ಮತ್ತೆ 5 ಕೆ.ಜಿಗೆ ಇಳಿಸಿದೆ. ನಾನು ಈ ತೀರ್ಮಾನ ಬೇಡ, ಎಂದು ಸದನದ ಒಳಗೆ ಹಾಗೂ ಹೊರಗೆ ಸರ್ಕಾರಕ್ಕೆ ಆಗ್ರಹ ಮಾಡಿದ್ದೆವು. ಕೋವಿಡ್ ಕಾಲದಲ್ಲಿ ನಮ್ಮ ಉಚಿತ ಅಕ್ಕಿ ಹಾಗೂ ನರೇಗಾ ಕಾರ್ಯಕ್ರಮಗಳು ಜನರ ಬದುಕಿಗೆ ಆಸರೆಯಾಗಿತ್ತು. ಆದರೆ ಈ ಸರ್ಕಾರದ ತೀರ್ಮಾನ ಜನರಿಗೆ ನೋವು ತಂದಿದೆ. ನಾವು ಪ್ರಜಾಧ್ವನಿಯಾತ್ರೆ ಸಂದರ್ಭದಲ್ಲಿ ಜನರು ನೀವು ಅಧಿಕಾರಕ್ಕೆ ಬಂದರೆ ಅಕ್ಕಿ ಪ್ರಮಾಣ ಹೆಚ್ಚಿಸಿ ಎಂದು ಕೇಳಿದರು. ನಂತರ ಪಕ್ಷದ ಎಲ್ಲ ನಾಯಕರು ಚರ್ಚೆ ಮಾಡಿ ತಲಾ 10 ಕೆ.ಜಿಯಂತೆ ಬಿಪಿಎಲ್ ಕಾರ್ಡುದಾರರಿಗೆ ನೀಡಲು ಪಕ್ಷ ತೀರ್ಮಾನಿಸಿದೆ. ಈ ಯೋಜನೆಯನ್ನು ಪಕ್ಷದ ಮೂರನೇ ಗ್ಯಾರಂಟಿ ಯೋಜನೆಯಾಗಿ ಘೋಷಿಸುತ್ತಿದ್ದೇವೆ.


ಬಿಜೆಪಿ ಸರ್ಕಾರದ ಸುಳ್ಳಿನಿಂದ ಬೇಸತ್ತಿರುವ ಜನ ಯಾರನ್ನು ನಂಬಬೇಕು ಎಂದು ತೋಚುತ್ತಿಲ್ಲ. ಹೀಗಾಗಿ ನಮ್ಮ ಯೋಜನೆಯನ್ನು ನಾವು ಜಾರಿ ಮಾಡುತ್ತೇವೆ ಎಂದು ಭರವಸೆ ನೀಡಲು ಗ್ಯಾರಂಟಿ ಕಾರ್ಡ್ ಅನ್ನು ಪ್ರತಿ ಮನೆಗೂ ನೀಡುತ್ತಿದ್ದೇವೆ.ಈಗ ಅಕ್ಕಿ ನೀಡಲು 4-5 ಸಾವಿರ ಕೋಟಿ ಖರ್ಚಾಗುತ್ತಿದ್ದು, ಈಗ 10 ಕೆ.ಜಿ ಹೆಚ್ಚಾಗುವುದರಿಂದ ಹೆಚ್ಚುವರಿಯಾಗಿ 3-4 ಸಾವಿರ ಕೋಟಿ ಹೆಚ್ಚು ವೆಚ್ಚ ತಗುಲಬಹುದು. ರಾಜ್ಯದಲ್ಲಿ ಯಾರೂ ಹಸಿವಿನಿಂದ ಬಳಲಬಾರದು, ಹಸಿವಿನಿಂದ ಮಲಗಬಾರದು ಎಂಬುದು ನಮ್ಮ ಉದ್ದೇಶ.


ಬೊಮ್ಮಾಯಿ ಅವರು ಇದು ಸಿದ್ದರಾಮಯ್ಯ ಅವರ ಕಾರ್ಯಕ್ರಮ ಅಲ್ಲ ಮೋದಿ ಕಾರ್ಯಕ್ರಮ ಎನ್ನುತ್ತಿದ್ದಾರೆ. ಇದು ಮೋದಿ ಅವರ ಕಾರ್ಯಕ್ರಮವಾದರೆ ಗುಜರಾತ್, ಉತ್ತರ ಪ್ರದೇಶ ದಲ್ಲಿ ಉಚಿತ ಅಕ್ಕಿ ನೀಡುತ್ತಿಲ್ಲ ಯಾಕೆ? ಇನ್ನು ದೇಶದಲ್ಲಿ ಆಹಾರ ಭದ್ರತಾ ಕಾಯ್ದೆ ಮೋದಿ ಅವರು ಜಾರಿಗೆ ತಂದರಾ? ಇವರು ಸುಳ್ಳನ್ನು ಹೇಳುವುದನ್ನು ಅಭ್ಯಾಸ ಮಾಡಿಕೊಂಡಿದ್ದು, ಇದಕ್ಕಾಗಿಯೇ ಆರ್ ಎಸ್ ಎಸ್ ನವರು ಇವರನ್ನು ಆಯ್ಕೆ ಮಾಡಿಕೊಂಡಿದ್ದಾರೆ.    


ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್:


ಯುಪಿಎ ಸರ್ಕಾರ ಜಾರಿಗೆ ತಂದ ಆಹಾರ ಭದ್ರತಾ ಕಾಯ್ದೆ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅನ್ನ ಭಾಗ್ಯ ಯೋಜನೆ ಜಾರಿಗೆ ತಂದಿದೆ. ನಮ್ಮ ಸರ್ಕಾರ ಕುಟುಂಬ ಸದಸ್ಯರಿಗೆ ತಲಾ 7 ಕೆ.ಜಿ ಅಕ್ಕಿ ನೀಡಲಾಗಿತ್ತು. ಕೋವಿಡ್ ನಂತಹ ಕಷ್ಟದ ಸಮಯದಲ್ಲಿ ನಮ್ಮ ಯೋಜನೆ ಜನರಿಗೆ ನೆರವಾಗಿತ್ತು. ಅವರ ಬದುಕಿಗೆ ದಾರಿ ಮಾಡಿಕೊಟ್ಟಿತತ್ತು. ಇಲ್ಲದಿದ್ದರೆ ರಾಜ್ಯದಲ್ಲಿ ದೊಡ್ಡ ಕೋಲಾಹಲವೇ ಸೃಷ್ಟಿಯಾಗುತ್ತಿತ್ತು.


ಇದನ್ನೂ ಓದಿ : Urfi Javed: ಯವ್ವಾ.!! ಇದೇನಿದು ಉರ್ಫಿ ಜಾವೇದ್ ಹೊಸ ಅವತಾರ.. ಬೆಚ್ಚಿಬಿದ್ರು ನೆಟ್ಟಿಜನ್ಸ್‌


ಇನ್ನು ಅಮಿತ್ ಶಾ ಅವರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದರೆ ಹೈಕಮಾಂಡ್ ಗೆ ಎಟಿಎಂ ಸಿಕ್ಕಂತಾಗುತ್ತದೆ ಎಂಬ ಬಗ್ಗೆ ಕೇಳಿದ್ದಾರೆ. ರಾಜ್ಯ ಸರ್ಕಾರದ 40% ಕಮಿಷನ್ ಲಂಚ ಯಾರಿಗೆ ಹೋಗುತ್ತದೆ ಎಂಬುದರ ಬಗ್ಗೆ ಅವರು ಉತ್ತರ ನೀಡಲಿ. ಇನ್ನು ನಮ್ಮ ಗ್ಯಾರಂಟಿ ಯೋಜನೆಗಳಿಗೆ ದುಡ್ಡು ಎಲ್ಲಿಂದ ಬರುತ್ತದೆ ಎಂದು ಕೇಳುತ್ತಿದ್ದಾರೆ. ಇವರು ಹೊಡೆಯುತ್ತಿರುವ 40% ಕಮಿಷನ್ ಲೂಟಿ ನಿಲ್ಲಿಸಿದರೆ ಈ ನಮ್ಮ ಯೋಜನೆಗಳಿಗೆ ಹಣ ಸಿಗುತ್ತದೆ. ನಮ್ಮ ಸರ್ಕಾರ ಇದ್ದಾಗ ನಾವು ಕೊಟ 165 ಭರವಸೆಗಳಲ್ಲಿ 158 ಭರವೆಸೆ ಈಡೇರಿಸಿದ್ದೆವು. ಬಿಜೆಪಿ ಸರ್ಕಾರ 600 ಭರವಸೆ ನೀಡಿ ವಲ 50 ಈಡೇರಿಸಿ 550 ಭರವೆಸೆ ಈಡೇರಿಸಿಲ್ಲ. ಇನ್ನು ಅವರು ಮಂಡಿಸಿರುವ ಬಜೆಟ್ ಗಳನ್ನು ಕೂಡ ಪರಿಣಾಮಕಾರಿಯಾಗಿ ಜಾರಿಗೆ ತರಲು ಅವರು ವಿಫಲರಾಗಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.