ಇವರು ರಾಷ್ಟ್ರಪತಿಯಾದರೆ ದೇಶದಲ್ಲಿ ಭಯೋತ್ಪಾದನೆ ಹೆಚ್ಚುತ್ತದೆ : ಬಿಜೆಪಿ ಸಂಸದ
ಶರದ್ ಪವಾರ್ ಅವರು ಭಯೋತ್ಪಾದಕರೊಂದಿಗೆ ಸಂಪರ್ಕ ಹೊಂದಿದ್ದರು. ಇವರು ಏನಾದ್ರು ಅಧ್ಯಕ್ಷರಾದರೆ ದೇಶದಲ್ಲಿ ಭಯೋತ್ಪಾದನೆ ಹೆಚ್ಚಾಗುತ್ತದೆ ಎಂದು ಬಿಜೆಪಿ ರಾಷ್ಟ್ರಿಯ ಉಪಾಧ್ಯಕ್ಷ ಸಂಸದ ದಿಲೀಪ್ ಘೋಷ್ ಹೇಳಿದ್ದಾರೆ.
ನವದೆಹಲಿ : ಶರದ್ ಪವಾರ್ ಅವರು ಭಯೋತ್ಪಾದಕರೊಂದಿಗೆ ಸಂಪರ್ಕ ಹೊಂದಿದ್ದರು. ಇವರು ಏನಾದ್ರು ರಾಷ್ಟ್ರಪತಿಯಾದರೆ ದೇಶದಲ್ಲಿ ಭಯೋತ್ಪಾದನೆ ಹೆಚ್ಚಾಗುತ್ತದೆ ಎಂದು ಬಿಜೆಪಿ ರಾಷ್ಟ್ರಿಯ ಉಪಾಧ್ಯಕ್ಷ ಸಂಸದ ದಿಲೀಪ್ ಘೋಷ್ ಹೇಳಿದ್ದಾರೆ.
ಇಂದು ಬೆಳಗಿನ ವಾಕಿಂಗ್ ವೇಳೆ ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ವಿಪಕ್ಷಗಳು ರಾಷ್ಟ್ರಪತಿ ಅಭ್ಯರ್ಥಿಯಾಗಲು ಶರದ್ ಪವಾರ್ ಅವರಿಗೆ ಒತ್ತಾಯಿಸುತ್ತಿದ್ದಾರೆ, ಆದ್ರೆ ಅದಕ್ಕೆ ಅವರು ಒಪ್ಪುತ್ತಿಲ್ಲ. ಪಶ್ಚಿಮ ಬಂಗಾಳ ಸಿಎಂ ಮಮತಾ ಬಾನೆರ್ಜಿ ಅವರು ಯೋಚಿಸಿದಂತೆ, ವಿಪಕ್ಷಗಳು ಎಲ್ಲಾ ನಾಯಕರು ಒಮ್ಮೆ ಹೇಳಿದರೆ ಅವರು ಒಪ್ಪುತ್ತಾರೆ. ಆದರೆ ಯಾರೂ ಶರದ್ ಪವಾರ್ ಹೆಸರನ್ನು ಹೇಳುತ್ತಿಲ್ಲ. ಈ ಕುರಿತು 18 ಪಕ್ಷಗಳು ಸಿಎಂ ಮಮತಾ ಬಾನೆರ್ಜಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದವು. ಪವಾರ್ ಅವರು ಅಖಿಲ ಭಾರತ ನಾಯಕನಾಗಬೇಕೆಂಬ ಆಸೆ ಬಹುಕಾಲದ ಕನಸು ಕನಸಾಗಿದೆ ಎಂದು ಹೇಳಿದರು.
ಇದನ್ನೂ ಓದಿ : 'ಅಗ್ನಿಪಥ್' ಯೋಜನೆ ವಿರೋಧಿಸಿ ಸೇನಾ ಆಕಾಂಕ್ಷಿಗಳಿಂದ ಭಾರೀ ಪ್ರತಿಭಟನೆ!
ಸಿಬಿಐ ಮೇಲೆ ಜನರು ನಂಬಿಕೆ ಕಳೆದುಕೊಳ್ಳುತ್ತಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ದಿಲೀಪ್ ಘೋಷ್, ಸಿಬಿಐ ತನಿಖೆಗೆ ಕೋರ್ಟ್ ಆದೇಶ ನೀಡಿದೆ. ಇದು ಸಿಬಿಐ ತನಿಖೆಯ ಮೇಲೆ ಜನರಿಗಿರುವ ನಂಬಿಕೆಯನ್ನು ಬಲಪಡಿಸುತ್ತದೆ ಎಂದರು.
ಇನ್ನೂ ಮುಂದುವರೆದು ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ಪ್ರತಿನಿತ್ಯ ಒಂದರ ಹಿಂದೆ ಒಂದರಂತೆ ತೊಂದರೆ ಗಳು ಹುಟ್ಟಿಕೊಳ್ಳುತ್ತಿವೆ. ಅಲ್ಲದೆ, ಎಸ್‌ಎಸ್‌ಸಿ, ಟಿಇಟಿ ಧರಣಿ ನಡೆಯುತ್ತಿದೆ. ನಾವು ಪ್ರತಿಭಟನೆ ನಡೆಸುತ್ತಿದ್ದೇವೆ. ಇದರಿಂದ ತಪ್ಪಿಸಿಕೊಳ್ಳಲು ದೀದಿ ದೆಹಲಿಗೆ ಹೋಗಿದ್ದಾರೆ ಎಂದರು.
ಇದನ್ನೂ ಓದಿ : ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿದ ಉದ್ಯೋಗಿ: ಆಟೋ ಡ್ರೈವರ್ ಕೇಳಿದ ಪ್ರಶ್ನೆಗೆ ತಬ್ಬಿಬ್ಬು!
ಬಂಗಾಳದ 42 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ವೀಕ್ಷಕರ ನೇಮಕದ ಬಗ್ಗೆ ಮಾತನಾಡಿದ ದಿಲೀಪ್ ಘೋಷ್, 2024ರ ಲೋಕಸಭೆ ಚುನಾವಣೆಗೆ ಪಕ್ಷ ಸಿದ್ಧತೆ ಆರಂಭಿಸಿದೆ. ನಾವು ಉತ್ತಮ ಫಲಿತಾಂಶಗಳನ್ನು ಪಡೆಯಲು ತಯಾರಿಯಲ್ಲಿದ್ದೇವೆ. ಇದಕ್ಕಾಗಿಯೇ ಅನುಭವಿ ನಾಯಕರು, ಮಂತ್ರಿಗಳು ಕೆಲಸ ಮಾಡುತ್ತಿದ್ದಾರೆ ಎಂದರು.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.