ನವದೆಹಲಿ: ಪಕ್ಷ ಇಚ್ಚಿಸಿದರೆ ಚುನಾವಣೆ ನಿಲ್ಲಲು ಸಿದ್ದ ಎಂದು ಪ್ರಿಯಾಂಕಾ ಗಾಂಧಿ ಹೇಳಿಕೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಅಮೇಥಿಯಲ್ಲಿ ಸುದ್ದಿಗಾರೊಂದಿಗೆ ಮಾತನಾಡುತ್ತಿದ್ದ ವೇಳೆ ಮಾಧ್ಯಮ ಪ್ರತಿನಿಧಿಗಳು ಈ ಬಾರಿ ಚುನಾವಣೆಗೆ ಸ್ಪರ್ಧಿಸುತ್ತೀರಾ? ಎನ್ನುವ ಪ್ರಶ್ನೆ ಉತ್ತರಿಸಿದ ಪ್ರಿಯಾಂಕಾ ಗಾಂಧಿ "ಯಾಕಾಗಬಾರದು? ಎಂದು ಅಲ್ಲಿ ನೆರೆದಿದ್ದ ಪತ್ರಕರ್ತರನ್ನು ಅಚ್ಚರಿಗೊಳಿಸಿ "ನೀವು ಕೂಡ ಸ್ಪರ್ಧಿಸಬಹುದು" ಎಂದರು.


"ನನ್ನ ಪಕ್ಷ ನನಗೆ ಚುನಾವಣೆ ಸ್ಪರ್ಧೆ ಮಾಡಲು ಹೇಳಿದರೆ ಖಂಡಿತಾ ಸ್ಪರ್ಧಿಸುವೆ" ಎಂದು ಕಾಂಗ್ರೆಸ್ ಪ್ರಿಯಾಂಕಾ ಗಾಂಧಿ ಹೇಳಿದರು.ಆ ಮೂಲಕ  ಇದೆ ಮೊದಲ ಬಾರಿಗೆ ಬಹಿರಂಗವಾಗಿ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿದ್ದಾರೆ.ಸಹೋದರ ರಾಹುಲ್ ಗಾಂಧಿ ಹಾಗೂ ತಾಯಿ ಸೋನಿಯಾ ಗಾಂಧಿ ಕ್ಷೇತ್ರದಲ್ಲಿ ಪ್ರಿಯಾಂಕಾ ಇಂದು ಮತ್ತು ನಾಳೆ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. 


ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಪ್ರಿಯಾಂಕಾ ಗಾಂಧಿಯವರಿಗೆ ಉತ್ತರ ಪ್ರದೇಶದಲ್ಲಿ ಪಕ್ಷವನ್ನು ಬಲಪಡಿಸುವ ಜವಾಬ್ದಾರಿಯನ್ನು ನೀಡಲಾಗಿದೆ.ಇತ್ತೀಚಿಗೆ ಅವರು ತಾಯಿ ಸೋನಿಯಾ ಗಾಂಧಿ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು.ಆದರೆ ಆ ಕ್ಷೇತ್ರಕ್ಕೆ ಸೋನಿಯಾ ಗಾಂಧಿ ಹೆಸರನ್ನು ಮತ್ತೆ ಘೋಷಣೆ ಮಾಡಿದ ನಂತರ ಈ ಎಲ್ಲ ಊಹಾಪೋಹಗಳಿಗೆ ತೆರೆ ಎಳೆಯಲಾಯಿತು. ಈಗ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ವಿರುದ್ಧವೂ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸುವ ಸಾಧ್ಯತೆ ಇವೆ ಎನ್ನುವ ಮಾತುಗಳು ಕೂಡ ಈಗ ಚಾಲ್ತಿಯಲ್ಲಿವೆ.