ನವ ದೆಹಲಿ: ಕಮಲ್ ಹಾಸನ್ ಪ್ರತ್ಯೇಕ ರಾಜಕೀಯ ಪಕ್ಷವನ್ನು ಸ್ಥಾಪಿಸುವುದಾಗಿ ಸ್ಪಷ್ಟಪಡಿಸಿದ ಬೆನ್ನಲ್ಲೇ ಮತ್ತೊಂದು ಹೇಳಿಕೆ ನೀಡಿದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಸೇರಲು ನಿರ್ಧರಿಸಿದರೆ ಅವರೊಂದಿಗೆ ಕೆಲಸ ಮಾಡಲು ಸಿದ್ದರಿರುವುದಾಗಿ ಕಮಲ್ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

"ಒಂದು ವೇಳೆ ರಜನಿಕಾಂತ್ ರಾಜಕೀಯ ಪ್ರವೇಶ ಮಾಡಿದರೆ ಕಮಲ್ ಹಾಸನ್ ಕೈ ಜೋಡಿಸುವರೆ!" ಎಂಬ ಪ್ರಶ್ನೆಗಳು ಕೇಳಿ ಬರುತ್ತಿವೆ ಎಂಬ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕಮಲ್, ರಜನಿಕಾಂತ್ ರಾಜಕೀಯ ಸೇರಲು ನಿರ್ಧರಿಸಿದರೆ ಅವರೊಂದಿಗೆ ಕೆಲಸ ಮಾಡಲು ಸಿದ್ದ ಎಂದು ತಿಳಿಸಿದ್ದಾರೆ.


ಇತ್ತೀಚಿನ ಸಂದರ್ಶನದಲ್ಲಿ, ಕಮಲ್ ಹಾಸನ್ ಅವರು ರಾಜಕೀಯ ಪಕ್ಷವನ್ನು ಪ್ರಾರಂಭಿಸುವ ಕುರಿತು ಯೋಚಿಸುತ್ತಿದ್ದಾರೆಂದು ಪ್ರತಿಪಾದಿಸಿದರು. ಅದಕ್ಕೂ ಮೊದಲು ಅವರು ರಾಜಕೀಯ ಪ್ರವೇಶಿಸುವುದಿಲ್ಲ ಎಂದು ಹೇಳಿದ್ದರು.


ಕಮಲ್ ಹಾಸನ್ ತಮಿಳುನಾಡಿನಲ್ಲಿ ಸ್ಥಳೀಯ ಶಾಸನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಯೋಚಿಸಿದ್ದಾರೆಂದು ವರದಿಗಳಿಂದ ತಿಳಿದು ಬಂದಿದೆ.


ತಮಿಳುನಾಡಿನ ಪ್ರಸ್ತುತ ರಾಜಕೀಯ ಸನ್ನಿವೇಶದ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ ಮೆಗಾಸ್ಟಾರ್, "ಎಐಎಡಿಎಂಕೆ ನ ಪ್ರಧಾನ ಕಾರ್ಯದರ್ಶಿಯಾಗಿ ವಿ.ಕೆ. ಶಶಿಕಾಲಾರನ್ನು ವಜಾ ಮಾಡುವ ಮೂಲಕ" ಒಳ್ಳೆ ನಿರ್ಧಾರವನ್ನು ಕೈಗೊಂಡಿದೆ ಎಂದು ಹೇಳಿದರು.