ನವದೆಹಲಿ: ಕ್ರೂಸ್ ಶಿಪ್ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಭಾಗಿಯಾಗಿರುವ ಚಲನಚಿತ್ರ ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರ ಪುತ್ರ ಆರ್ಯನ್  ಖಾನ್ ಬಂಧನದ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರದ ಸಚಿವ ಛಗನ್ ಭುಜಬಲ್ ಶನಿವಾರ ಬಿಜೆಪಿಯನ್ನು ಲೇವಡಿ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ-UP Elections 2022: ಪ್ರಿಯಾಂಕಾ ಗಾಂಧಿಯಾ 'ಏಳು ಪ್ರತಿಜ್ಞೆಗಳು' ಯಾವುವು ಗೊತ್ತಾ?


ಒಂದು ವೇಳೆ ಶಾರುಖ್ ಖಾನ್ ಬಿಜೆಪಿಗೆ ಸೇರಿದರೆ "ಡ್ರಗ್ಸ್ ಶುಗರ್ ಪೌಡರ್ ಆಗುತ್ತದೆ ಎಂದು ಅವರು ವ್ಯಂಗ್ಯವಾಡಿದ್ದಾರೆ.ಗುಜರಾತ್‌ನ ಮುಂದ್ರಾ ಬಂದರಿನಲ್ಲಿ ಭಾರೀ ಪ್ರಮಾಣದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ, ಆದರೆ ಈ ಪ್ರಕರಣವನ್ನು ತನಿಖೆ ಮಾಡುವ ಬದಲು, ಕೇಂದ್ರೀಯ ಸಂಸ್ಥೆಯಾದ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಶಾರುಖ್ ಖಾನ್ ಅವರನ್ನು ಬೇಟೆಯಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.


ಇದನ್ನೂ ಓದಿ-RBI Guidelines: ತಪ್ಪಾದ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಆಗಿದೆಯೇ? ಚಿಂತೆಬಿಡಿ, ಈ ರೀತಿ ಮರಳಿ ಪಡೆಯಿರಿ


ಸಮತಾ ಪರಿಷತ್-ಎನ್‌ಸಿಪಿ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಭುಜಬಲ್, ಮಹಾರಾಷ್ಟ್ರ ಸರ್ಕಾರವು ಒಬಿಸಿ ಕೋಟಾದಲ್ಲಿ ಸುಗ್ರೀವಾಜ್ಞೆಯನ್ನು ಜಾರಿಗೊಳಿಸಿದೆ, ಆದರೆ ಬಿಜೆಪಿ ಕಾರ್ಯಕಾರಿಯೊಬ್ಬರು ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಾರೆ ಎಂದು ಹೇಳಿದರು.


ಇತರ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡುವುದನ್ನು ಬಿಜೆಪಿ ವಿರೋಧಿಸುತ್ತಿದೆಯೇ? ಎಂದು ಅವರು ಪ್ರಶ್ನಿಸಿದರು.


ಇದನ್ನೂ ಓದಿ-ಫೈಜಾಬಾದ್ ರೈಲ್ವೆ ಜಂಕ್ಷನ್ ಅನ್ನು ಅಯೋಧ್ಯೆ ಕ್ಯಾಂಟ್ ಎಂದು ಮರುನಾಮಕರಣ ಮಾಡಿದ ಸಿಎಂ ಯೋಗಿ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ