Illicit Liquor: ತಮಿಳುನಾಡಿನಲ್ಲಿ ನಕಲಿ ಮಧ್ಯ ಸೇವಿಸಿ 34 ಸಾವು, 100 ಮಂದಿ ಆಸ್ಪತ್ರೆಗೆ ದಾಖಲು

ಕಲ್ಲಾಕುರಿಚಿಯಲ್ಲಿ ಕಲಬೆರಕೆ ಮದ್ಯ ಸೇವಿಸಿದ ಜನರ ಸಾವಿನ ಸುದ್ದಿ ಕೇಳಿ ನನಗೆ ಆಘಾತ ಮತ್ತು ದುಃಖವಾಯಿತು. ಈ ಪ್ರಕರಣದಲ್ಲಿ ಅಪರಾಧದಲ್ಲಿ ಭಾಗಿಯಾದವರನ್ನು ಬಂಧಿಸಲಾಗಿದೆ. ತಡೆಯುವಲ್ಲಿ ವಿಫಲರಾದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ.

Written by - Manjunath N | Last Updated : Jun 20, 2024, 12:33 PM IST
  • ಕಲ್ಲಾಕುರಿಚಿಯಲ್ಲಿ ಕಲಬೆರಕೆ ಮದ್ಯ ಸೇವಿಸಿದ ಜನರ ಸಾವಿನ ಸುದ್ದಿ ಕೇಳಿ ನನಗೆ ಆಘಾತ ಮತ್ತು ದುಃಖವಾಯಿತು
  • ಈ ಪ್ರಕರಣದಲ್ಲಿ ಅಪರಾಧದಲ್ಲಿ ಭಾಗಿಯಾದವರನ್ನು ಬಂಧಿಸಲಾಗಿದೆ
  • ತಡೆಯುವಲ್ಲಿ ವಿಫಲರಾದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ
Illicit Liquor: ತಮಿಳುನಾಡಿನಲ್ಲಿ ನಕಲಿ ಮಧ್ಯ ಸೇವಿಸಿ 34 ಸಾವು, 100 ಮಂದಿ ಆಸ್ಪತ್ರೆಗೆ ದಾಖಲು title=
ಸಾಂಧರ್ಭಿಕ ಚಿತ್ರ

ಚೆನ್ನೈ: ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ಅಕ್ರಮ ಮದ್ಯ ಸೇವಿಸಿ ಬುಧವಾರ ಕನಿಷ್ಠ 34 ಮಂದಿ ಸಾವನ್ನಪ್ಪಿದ್ದು, ಸುಮಾರು 100 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ. 

ಈಗ ಘಟನೆಗೆ ಸಂಬಂಧಿಸಿದಂತೆ ಈಗ ನಾಲ್ವರನ್ನು ಬಂಧಿಸಲಾಗಿದೆ.

ಈ ದುರಂತದ ಬಗ್ಗೆ ಪ್ರತಿಕ್ರಿಯಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ “ಕಲ್ಲಾಕುರಿಚಿಯಲ್ಲಿ ಕಲಬೆರಕೆ ಮದ್ಯ ಸೇವಿಸಿದ ಜನರ ಸಾವಿನ ಸುದ್ದಿ ಕೇಳಿ ನನಗೆ ಆಘಾತ ಮತ್ತು ದುಃಖವಾಯಿತು. ಈ ಪ್ರಕರಣದಲ್ಲಿ ಅಪರಾಧದಲ್ಲಿ ಭಾಗಿಯಾದವರನ್ನು ಬಂಧಿಸಲಾಗಿದೆ. ತಡೆಯುವಲ್ಲಿ ವಿಫಲರಾದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ. ಇಂತಹ ಅಪರಾಧಗಳಲ್ಲಿ ಭಾಗಿಯಾದವರ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದರೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು. ಸಮಾಜವನ್ನು ಹಾಳು ಮಾಡುವ ಇಂತಹ ಅಪರಾಧಗಳನ್ನು ನಿಗ್ರಹಿಸಲಾಗುವುದು" ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Good News: ಸರ್ಕಾರದಿಂದ ಪ್ರತಿ ತಿಂಗಳು ಸಿಗಲಿದೆ 300 ಯೂನಿಟ್ ಉಚಿತ ವಿದ್ಯುತ್!

ಇನ್ನೊಂದೆಡೆಗೆ ಪ್ರತಿಪಕ್ಷ ಎಐಎಡಿಎಂಕೆ ಪರ ವಕೀಲರು ಮದ್ರಾಸ್ ಹೈಕೋರ್ಟ್‌ಗೆ ಮದ್ಯ ದುರಂತದ ತುರ್ತು ಅರ್ಜಿಯನ್ನು ಆಲಿಸುವಂತೆ ಮನವಿ ಮಾಡಿದ್ದು, ಇದಕ್ಕೆ ಈಗ ನ್ಯಾಯಮೂರ್ತಿಗಳಾದ ಡಿ.ಕೃಷ್ಣಕುಮಾರ್ ಮತ್ತು ಕೆ.ಕುಮಾರೇಶ್ ಬಾಬು ಅವರನ್ನೊಳಗೊಂಡ ವಿಭಾಗೀಯ ಪೀಠ ಜೂನ್ 21ರಂದು ವಿಚಾರಣೆ ನಡೆಸಲು ಒಪ್ಪಿಗೆ ಸೂಚಿಸಿದೆ.

ಸ್ಟಾಲಿನ್ ಅವರು ಸಮಗ್ರ ತನಿಖೆಗಾಗಿ ಕ್ರೈಂ ಬ್ರಾಂಚ್-ಅಪರಾಧ ತನಿಖಾ ಇಲಾಖೆ (ಸಿಬಿ-ಸಿಐಡಿ) ತನಿಖೆಗೆ ಆದೇಶಿಸಿದ್ದಾರೆ. ತಮಿಳುನಾಡು ಸರ್ಕಾರವು ಕಲ್ಲಕುರಿಚಿ ಜಿಲ್ಲಾಧಿಕಾರಿ ಶ್ರವಣ್ ಕುಮಾರ್ ಜಾತಾವತ್ ಅವರನ್ನು ಬದಲಾಯಿಸಿದೆ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಸಮಯ್ ಸಿಂಗ್ ಮೀನಾ ಅವರನ್ನು ಅಮಾನತುಗೊಳಿಸಿದೆ ಎಂದು ಹೇಳಿಕೆಯೊಂದು ತಿಳಿಸಿದೆ. ಹೆಚ್ಚುವರಿಯಾಗಿ, ಕಲ್ಲಕುರಿಚಿ ನಿಷೇಧಾಜ್ಞೆ ವಿಭಾಗದವರು ಸೇರಿದಂತೆ ಇತರ ಒಂಬತ್ತು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಅದು ತಿಳಿಸಿದೆ.

ಇದನ್ನೂ ಓದಿ: ಶಾಲಾ ಮಕ್ಕಳಿಂದ 2 ಲಕ್ಷ ಗಿಡ ನೆಡುವ ಹಸಿರು ರಕ್ಷಕ ಅಭಿಯಾನ: ಡಿಸಿಎಂ ಡಿಕೆ ಶಿವಕುಮಾರ್

ಕಲ್ಲಾಕುರಿಚಿ ಜಿಲ್ಲಾ ನೂತನ ಜಿಲ್ಲಾಧಿಕಾರಿ ಎಂ.ಎಸ್.ಪ್ರಶಾಂತ್ ಅವರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.ಸಂತ್ರಸ್ತ ಕುಟುಂಬಗಳಿಗೆ ಸಹಾಯ ಮಾಡಲು ಸ್ಟಾಲಿನ್ ಅವರು ಹಿರಿಯ ಸಚಿವರಾದ ಇವಿ ವೇಲು ಮತ್ತು ಮಾ ಸುಬ್ರಮಣಿಯನ್ ಅವರನ್ನು ಕಲ್ಲಕುರಿಚಿಗೆ ಕಳುಹಿಸಿದ್ದಾರೆ.

ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಕೂಡ ಸಾವಿಗೆ ಸಂತಾಪ ಸೂಚಿಸಿದ್ದು, ಸಂತ್ರಸ್ತರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News