ಹೈದರಾಬಾದ್: ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು, 'ನಾನೆಂದಿಗೂ ಯೋಧನೇ ಹೊರತು, ಭಿಕ್ಷುಕನಲ್ಲ' ಎಂದಿದ್ದಾರೆ.


COMMERCIAL BREAK
SCROLL TO CONTINUE READING

ದೇಶದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳನ್ನು ಹೊರತುಪಡಿಸಿ, ಫೆಡರಲ್ ಫ್ರಂಟ್ ರೂಪಿಸುವ ಇರಾದೆ ಹೊಂದಿರುವ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತಾ, 'ಭಾರತ ಬದಲಾವಣೆ ಕಾಣಬೇಕು, ಅದು ಹೈದರಾಬಾದ್ ನಿಂದಲೇ ಆರಂಭವಾಗಬೇಕು' ಎಂದು ಹೇಳಿದ್ದಾರೆ.


ರಾಷ್ಟ್ರದಲ್ಲಿ ಅತ್ಯಂತ ಕಳಪೆ ರಾಜಕೀಯ ಪಕ್ಷಗಳು ಯಾವುವು ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೆಸಿಆರ್, "ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳೂ ಕೇಂದ್ರದಲ್ಲಿ ಅಧಿಕಾರಕ್ಕಾಗಿ ಹವಣಿಸುತ್ತಿವೆ. ಆದರೆ ಅವರೇನು ಮಾಡಬೇಕೋ ಅದನ್ನು ಮಾಡುತ್ತಿಲ್ಲ. ಹಾಗಾಗಿ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ನಡುವೆ ಯಾವುದೇ ಮೈತ್ರಿ ಇಲ್ಲದೆ ಸ್ವತಂತ್ರವಾಗಿ ಸ್ಪರ್ಧಿಸುತ್ತೇವೆ. ಈ ನನ್ನ ನಿಲುವು ಸ್ಪಷ್ಟವಾಗಿದೆ" ಎಂದು ಹೇಳಿದ್ದಾರೆ.