IMD Weather Forecast: ಏಪ್ರಿಲ್ ತಿಂಗಳಲ್ಲೇ ಈಗಾಗಲೇ ಜನರು ಬಿಸಿಲಿನ ಬೇಗೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಹೀಗಾಗಿ ಮುಂಬರುವ ಮೇ ತಿಂಗಳಿನಲ್ಲಿ ಬಿಸಿಲಿನ ಝಳದಿಂದ ಮುಕ್ತಿ ಸಿಗುವ ನಿರೀಕ್ಷೆಯಲ್ಲಿ ಜನರಿದ್ದಾರೆ. ವಾಯುವ್ಯ ಮತ್ತು ಮಧ್ಯ ಭಾರತದಲ್ಲಿ 1990 ರಿಂದ ಈ ವರ್ಷದ ಏಪ್ರಿಲ್‌ನಲ್ಲಿ ಗರಿಷ್ಠ ಸರಾಸರಿ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಶನಿವಾರ ತಿಳಿಸಿದೆ. ಅಷ್ಟೇ ಅಲ್ಲ ಮೇ ತಿಂಗಳಿನಲ್ಲಿಯೂ ಕೂಡ ಈ ಪ್ರದೇಶದಲ್ಲಿ ಶಾಖದಿಂದ ಜನರಿಗೆ ಬಿಸಿಲಿನ ತಾಪದಿಂದ ಮುಕ್ತಿ ಸಿಗುವುದಿಲ್ಲ ಎಂದು ಇಲಾಖೆ ಹೇಳಿದೆ.

COMMERCIAL BREAK
SCROLL TO CONTINUE READING

ಮೇ ತಿಂಗಳ ತಾಪಮಾನ ಮತ್ತು ಮಳೆಗೆ ಸಂಬಂಧಿಸಿದ ಮುನ್ಸೂಚನೆಯನ್ನು ಬಿಡುಗಡೆ ಮಾಡಿರುವ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಹಾನಿರ್ದೇಶಕ ಮೃತ್ಯುಂಜಯ್ ಮಹಾಪಾತ್ರ ಅವರು ದಕ್ಷಿಣ ಪರ್ಯಾಯ ಭಾರತದ ಕೆಲ ಪ್ರದೇಶಗಳನ್ನು ಹೊರತುಪಡಿಸಿ, ದೇಶದ ಹೆಚ್ಚಿನ ಭಾಗಗಳು ಮೇ ತಿಂಗಳಿನಲ್ಲಿಯೂ ಕೂಡ ಬಿಸಿಲಿನ ತಾಪ ಎದುರಿಸಲಿವೆ ಎಂದು ಹೇಳಿದ್ದಾರೆ. ಈ ವರ್ಷ ಏಪ್ರಿಲ್‌ನಲ್ಲಿ ವಾಯುವ್ಯ ಮತ್ತು ಮಧ್ಯ ಭಾರತದಲ್ಲಿ ಕಳೆದ 122 ವರ್ಷಗಳಲ್ಲಿ ಅತ್ಯಂತ ಗರಿಷ್ಠ ತಾಪಮಾನ ದಾಖಲಾಗಿದ್ದು, ಸರಾಸರಿ ತಾಪಮಾನ ಕ್ರಮವಾಗಿ 35.9 ಡಿಗ್ರಿ ಸೆಲ್ಸಿಯಸ್ ಮತ್ತು 37.78 ಡಿಗ್ರಿ ಸೆಲ್ಸಿಯಸ್ ತಲುಪಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಈ ಹಿಂದೆ, ಏಪ್ರಿಲ್ 2010 ರಲ್ಲಿ ವಾಯುವ್ಯ ಭಾರತದಲ್ಲಿ ಸರಾಸರಿ ಗರಿಷ್ಠ ತಾಪಮಾನವು 35.4 °C ಆಗಿದ್ದರೆ, ಏಪ್ರಿಲ್ 1973 ರಲ್ಲಿ ಮಧ್ಯ ಭಾರತದಲ್ಲಿ ಸರಾಸರಿ ಗರಿಷ್ಠ ತಾಪಮಾನವು 37.75 °C ಆಗಿತ್ತು.

ವಾಯುವ್ಯ ಭಾರತದ ಬಹುತೇಕ ಭಾಗಗಳು - ಜಮ್ಮು ಮತ್ತು ಕಾಶ್ಮೀರ, ಹಿಮಾಚಲ, ಗುಜರಾತ್, ರಾಜಸ್ಥಾನ, ಪಂಜಾಬ್ ಮತ್ತು ಹರಿಯಾಣ - ಮೇ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನವನ್ನು ಎದುರಿಸಲಿದೆ ಎಂದು ಮಹಾಪಾತ್ರ ಹೇಳಿದ್ದಾರೆ.ಏಪ್ರಿಲ್‌ನಲ್ಲಿ ದೇಶದಾದ್ಯಂತ ಸರಾಸರಿ ತಾಪಮಾನವು 35.05 ಡಿಗ್ರಿ ಸೆಲ್ಸಿಯಸ್‌ನಲ್ಲಿ ದಾಖಲಾಗಿದೆ ಎಂದು ಅವರು ಹೇಳಿದ್ದಾರೆ, ಇದು 122 ವರ್ಷಗಳಲ್ಲಿಯೇ ನಾಲ್ಕನೇ ಅತಿ ಹೆಚ್ಚು ತಾಪಮಾನವಾಗಿದೆ. ಈ ವರ್ಷ ಮೇ ತಿಂಗಳಿನಲ್ಲಿ ದೇಶದಲ್ಲಿ ಸರಾಸರಿ ಮಳೆಯ ಪ್ರಮಾಣ ಸಾಮಾನ್ಯಕ್ಕಿಂತ ಹೆಚ್ಚಿರುವ ಸಾಧ್ಯತೆ ಇದೆ ಎಂದೂ ಕೂಡ ಅವರು ಮಾಹಿತಿ ನೀಡಿದ್ದಾರೆ.

ಇದಲ್ಲದೆ, ಮೇ ತಿಂಗಳಲ್ಲಿ ವಾಯುವ್ಯ ಮತ್ತು ಈಶಾನ್ಯ ಭಾರತ ಮತ್ತು ಆಗ್ನೇಯ ಪೆನಿನ್ಸುಲಾದ ಭಾಗಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ. ಪಶ್ಚಿಮ ರಾಜಸ್ಥಾನದ ಕೆಲವು ಭಾಗಗಳಲ್ಲಿ ತಾಪಮಾನವು 50 ಡಿಗ್ರಿ ಗಡಿ ದಾಟುವ ಸಾಧ್ಯತೆಯನ್ನು ಮಹಾಪಾತ್ರ ತಳ್ಳಿಹಾಕಿಲ್ಲ.


ಇದನ್ನೂ ಓದಿ-Petrol- Diesel Price Today: ಇಂದಿನ ಪೆಟ್ರೋಲ್-ಡೀಸೆಲ್ ದರ ಎಷ್ಟಿದೆ ತಿಳಿದುಕೊಳ್ಳಿ

ಈ ಬಾರಿ, ಬೇಸಿಗೆಯಲ್ಲಿ ತಾಪಮಾನವು 50 ಡಿಗ್ರಿ ಸೆಲ್ಸಿಯಸ್‌ಗೆ ತಲುಪಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, "ನಾವು ಅಂತಹ ಮುನ್ಸೂಚನೆಯನ್ನು ನೀಡಲು ಸಾಧ್ಯವಿಲ್ಲ. ಆದರೂ ಕೂಡ ಮೇ ಅತ್ಯಂತ ಬಿಸಿ ತಿಂಗಳಾಗಿರಲಿರುವ ಕಾರಣ ಹವಾಮಾನಕ್ಕೆ ಅನುಗುಣವಾಗಿ ಇದು ಸಾಧ್ಯ" ಎಂದು ಅವರು ಹೇಳಿದ್ದಾರೆ. 


ಇದನ್ನೂ ಓದಿ-ಮಧ್ಯಪ್ರದೇಶದ ವಿಧಾನಸಭೆಯ ವಿಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಮಲ್ ನಾಥ್

ಶನಿವಾರ, ಉತ್ತರ ಪ್ರದೇಶದ ಬಾಂದಾದಲ್ಲಿ 47.4 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ, ಇದು ದೇಶದಲ್ಲೇ ಅತಿ ಹೆಚ್ಚು ಎಂದು ಅವರು ಹೇಳಿದ್ದಾರೆ. "ನಿರಂತರ ದುರ್ಬಲ ಮಳೆಯ ಚಟುವಟಿಕೆ" ಯಿಂದ ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ ಹೆಚ್ಚಿನ ತಾಪಮಾನ ದಾಖಲಾಗಿದೆ ಎಂದು ಐಎಂಡಿ ಮಹಾನಿರ್ದೇಶಕರು ಹೇಳಿದ್ದಾರೆ. ವಾಯುವ್ಯ ಭಾರತದಲ್ಲಿ ಮಾರ್ಚ್‌ನಲ್ಲಿ ಶೇ.89ರಷ್ಟು ಮಳೆಯಾಗಿದ್ದರೆ, ಏಪ್ರಿಲ್‌ನಲ್ಲಿ ಶೇ.83ರಷ್ಟು ಕುಸಿತವಾಗಿದೆ ಎಂದು ಅವರು ಹೇಳಿದ್ದಾರೆ.


ಇದನ್ನೂ ನೋಡಿ-


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.