ನವದೆಹಲಿ: ದೇಶಾದ್ಯಂತ ವರುಣನ ಅಬ್ಬರ ಜೋರಾಗಿದೆ. ಜೋಧಪುರದಲ್ಲಿ ಮಂಗಳವಾರ ಸುರಿದ ಧಾರಾಕಾರ ಮಳೆ ಕಳೆದ 20 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದೆ. ಅಲ್ಲಿ ಧ್ವ ಪಟ್ಟಣದಲ್ಲಿ 24 ಗಂಟೆಗಳಲ್ಲಿ 194.4 ಮಿ.ಮೀ ಮಳೆಯಾಗಿದೆ. ಸತತ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಗ್ರಾಮದಿಂದ ಜೋಡುಪಾಲ ನಗರಕ್ಕೆ ನೀರು ನುಗ್ಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಮಧ್ಯೆ, ಬುಧವಾರದಿಂದ ಮುಂದಿನ ನಾಲ್ಕು ದಿನಗಳವರೆಗೆ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. 


COMMERCIAL BREAK
SCROLL TO CONTINUE READING

ಹರಿಯಾಣದಲ್ಲಿ ಭಾರೀ ಮಳೆ, ದೆಹಲಿಯಲ್ಲಿ ಲಘು ಮಳೆಯಾಗುವ ಸಾಧ್ಯತೆ:
ಬುಧವಾರದಂದು (ಜುಲೈ 27) ಹರಿಯಾಣದಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ. ಹವಾಮಾನ ಇಲಾಖೆಯ ಪ್ರಕಾರ, ಪಂಚಕುಲ, ಅಂಬಾಲ ಮತ್ತು ಯಮುನಾನಗರದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಇದೇ ವೇಳೆ ದೆಹಲಿ-ಎನ್‌ಸಿಆರ್‌ನಲ್ಲಿ ಇಂದು ಲಘು ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. 


ಇದನ್ನೂ ಓದಿ- Lok Sabha News : ಇಡೀ ಮುಂಗಾರು ಅಧಿವೇಶನದಿಂದ 4 ಕಾಂಗ್ರೆಸ್ ಲೋಕಸಭಾ ಎಂಪಿಗಳ ಅಮಾನತು!


ಮಧ್ಯಪ್ರದೇಶದ ಈ ನಗರಗಳಲ್ಲಿ ಭಾರೀ ಮಳೆ ಎಚ್ಚರಿಕೆ:
ಮಧ್ಯಪ್ರದೇಶದ ಭೋಪಾಲ್, ಶಾಹದೋಲ್, ಗ್ವಾಲಿಯರ್ ಮತ್ತು ಚಂಬಲ್ ವಿಭಾಗಗಳಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ಐಎಂಡಿ ಎಚ್ಚರಿಕೆ ನೀಡಿದೆ. ದಿಂಡೋರಿ, ಬಾಲಘಾಟ್, ಮಂಡ್ಲಾ, ಸಿಯೋನಿ, ವಿದಿಶಾ, ರೈಸೆನ್, ಭಿಂಡ್, ಮೊರೆನಾ, ಶಿವಪುರಿ ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗಬಹುದು ಎನ್ನಲಾಗಿದೆ. 


ಉತ್ತರಾಖಂಡದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್:
ಉತ್ತರಾಖಂಡದಲ್ಲಿ  ಇಂದಿನಿಂದ ಮುಂದಿನ 5 ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಿದೆ. ಹವಾಮಾನ ಇಲಾಖೆಯ ಪ್ರಕಾರ ಉತ್ತರಕಾಶಿ, ಬಾಗೇಶ್ವರ್, ನೈನಿತಾಲ್ ಡೆಹ್ರಾಡೂನ್, ಚಮೋಲಿ, ರುದ್ರಪ್ರಯಾಗ ಪಿಥೋರಗಢದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಬಹುದು. ಇದರೊಂದಿಗೆ ಈ ಪ್ರದೇಶಗಳಲ್ಲಿ ಭೂಕುಸಿತ ಮತ್ತು ರಸ್ತೆ ಜಾರುವ ಅಪಾಯವಿದೆ ಎಂದು ಮುನ್ಸೂಚನೆ ನೀಡಲಾಗಿದೆ.


ಇದನ್ನೂ ಓದಿ- President of India oath : ರಾಷ್ಟ್ರಪತಿಗಳು ಜು.25 ರಂದೆ ಏಕೆ 'ಪ್ರಮಾಣ ವಚನ' ಸ್ವೀಕರಿಸುತ್ತಾರೆ? ಇಲ್ಲಿದೆ ಇಂಟೆರೆಸ್ಟಿಂಗ್ ಮಾಹಿತಿ!


ತೆಲಂಗಾಣದ ಹಲವು ಜಿಲ್ಲೆಗಳಲ್ಲಿ ಮಳೆ ಎಚ್ಚರಿಕೆ:
ತೆಲಂಗಾಣದ ಕೆಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.


ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ:
ಇದಲ್ಲದೆ ಮುಂದಿನ 2-3 ದಿನಗಳ ಕಾಲ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.