ಹವಾಮಾನ ಮುನ್ಸೂಚನೆ: ದೇಶದಲ್ಲಿ ಈ ವರ್ಷ ಮಾನ್ಸೂನ್ ಉತ್ತಮವಾಗಿದೆ. ಕಳೆದ ಹಲವು ದಿನಗಳಿಂದ ಕೆಲವು ರಾಜ್ಯಗಳಲ್ಲಿ ವರುಣನ ಅಬ್ಬರ ಜೋರಾಗಿದ್ದು ಕೆಲವು ಭಾಗಗಳಲ್ಲಿ ಪ್ರವಾಹವನ್ನೂ ಸೃಷ್ಟಿಸಿದೆ. ಇದೀಗ, ಮುಂದಿನ ನಾಲ್ಕೈದು ದಿನಗಳ ಕಾಲ ಹಲವು ರಾಜ್ಯಗಳಲ್ಲಿ ಭಾರಿ ಮಳೆಯ ಬಗ್ಗೆ ಎಚ್ಚರಿಕೆ ಭಾರತದ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.


COMMERCIAL BREAK
SCROLL TO CONTINUE READING

ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಮುಂದಿನ ನಾಲ್ಕೈದು ದಿನಗಳ ಕಾಲ ಮಧ್ಯ, ಪಶ್ಚಿಮ, ಪೂರ್ವ ಮತ್ತು ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. 


ಮುಂದಿನ ಐದು ದಿನಗಳ ಕಾಲ ಸಿಕ್ಕಿಂ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ತ್ರಿಪುರಾ ಮತ್ತು ಅರುಣಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಇದಲ್ಲದೆ, ಮುಂದಿನ ಮೂರು ದಿನಗಳಲ್ಲಿ ಪಶ್ಚಿಮ ಬಂಗಾಳ, ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಬಹುದು ಎಂದು ಐಎಂಡಿ ಮುನ್ಸೂಚನೆ ನೀಡಿದೆ. 


ಇದನ್ನೂ ಓದಿ- ಆತ್ಮಹತ್ಯೆಗೆ ಶರಣಾದ ಎನ್‌ಟಿಆರ್ ಪುತ್ರಿ ಉಮಾ ಮಹೇಶ್ವರಿ


ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಇಂದು (ಆಗಸ್ಟ್ 2), ರಾಷ್ಟ್ರ ರಾಜಧಾನಿ ದೆಹಲಿ ಹೊರತುಪಡಿಸಿ, ಉತ್ತರ ಪ್ರದೇಶದ ಅನೇಕ ಜಿಲ್ಲೆಗಳಲ್ಲಿ ಲಘು ಮಳೆ ಆಗುವ ಸಾಧ್ಯತೆ ಇದೆ. ಇದಲ್ಲದೆ, ಪಂಜಾಬ್, ಹರಿಯಾಣ, ಜಮ್ಮು ಮತ್ತು ಕಾಶ್ಮೀರ ಮತ್ತು ಚಂಡೀಗಢದಲ್ಲಿ ಮಳೆಯಾಗುವ ಸಾಧ್ಯತೆ ಬಗ್ಗೆ ಐಎಂಡಿ ಭವಿಷ್ಯ ನುಡಿದಿದೆ.


ಕೇರಳದ ಏಳು ಜಿಲ್ಲೆಗಳಲ್ಲಿ ರೆಡ್ ಅಲರ್ಟ್:
ಕೇರಳದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಏಳು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಹವಾಮಾನ ಇಲಾಖೆ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ ಮತ್ತು ಇಡುಕ್ಕಿ ಜಿಲ್ಲೆಗಳಿಗೆ 'ರೆಡ್ ಅಲರ್ಟ್' ಘೋಷಿಸಿದೆ. ಇದರೊಂದಿಗೆ ನಾಲ್ಕು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಕೂಡ ನೀಡಲಾಗಿದೆ.  ಆಗಸ್ಟ್ 4 ಕ್ಕೆ ಹವಾಮಾನ ಇಲಾಖೆಯು ಒಂಬತ್ತು ಜಿಲ್ಲೆಗಳಿಗೆ 'ರೆಡ್ ಅಲರ್ಟ್' ಮತ್ತು ಮೂರು ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಘೋಷಿಸಿದೆ. 


ಇದನ್ನೂ ಓದಿ- MP: ಜಬಲ್ಪುರದ ಖಾಸಗಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ, ಮೃತಪಟ್ಟವರ ಸಂಖ್ಯೆ 10 ಕ್ಕೆ ಏರಿಕೆ


ರೆಡ್ ಅಲರ್ಟ್‌ ಪ್ರದೇಶಗಳಲ್ಲಿ 24 ಗಂಟೆಗಳಲ್ಲಿ ಭಾರೀ ಮಳೆಯಿಂದ ಅತಿ ಹೆಚ್ಚು ಅಂದರೆ 20 ಸೆಂ.ಮೀ.ಗೂ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್‌ ನೀಡಿರುವ ಪ್ರದೇಶಗಳಲ್ಲಿ  6 ಸೆಂ.ಮೀ.ನಿಂದ 20 ಸೆಂ.ಮೀ.ವರೆಗೆ ಅತಿ ಹೆಚ್ಚು ಮತ್ತು ಹಳದಿ ಅಲರ್ಟ್‌ ನೀಡಿರುವ ಪ್ರದೇಶಗಳಲ್ಲಿ  6 ರಿಂದ 11 ಸೆಂ.ಮೀ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.


ಈ ಕುರಿತಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದ್ದು, ನದಿ, ಜಲಾಶಯ, ಹೊಳೆ ಮುಂತಾದೆಡೆ ಸ್ನಾನ ಮಾಡುವುದು, ಬಟ್ಟೆ ಒಗೆಯುವುದು ಅಥವಾ ಪ್ರಾಣಿಗಳಿಗೆ ಸ್ನಾನ ಮಾಡಿಸುವುದನ್ನು ತಪ್ಪಿಸುವಂತೆಯೂ ಹಾಗೂ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಲಹೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.