ಬೆಂಗಳೂರು: ಆಂಧ್ರಪ್ರದೇಶದ ದಕ್ಷಿಣ ಭಾಗ ಮತ್ತು ಒಡಿಶಾದಲ್ಲಿ ಚಂಡಮಾರುತದ ಪ್ರಭಾವ ಹೆಚ್ಚಾಗಿದ್ದು, ಕರ್ನಾಟಕ ಸೇರಿದಂತೆ ಅನೇಕ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆಯನ್ನೂ ಸಹ ನೀಡಲಾಗಿದೆ. 


COMMERCIAL BREAK
SCROLL TO CONTINUE READING

ಇದನ್ನು ಓದಿ; Car Price Rise: TATAದ ಈ ಅಗ್ಗದ 2 ಕಾರುಗಳು ಮತ್ತಷ್ಟು ದುಬಾರಿ..!


ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ, ಮಂಡ್ಯ, ಮೈಸೂರು, ಚಾಮರಾಜನಗರ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು, ಈ ಪ್ರದೇಶಗಳಲ್ಲಿ ಎಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. 


ಈ ಚಂಡಮಾರುತಕ್ಕೆ ʼಅಸಾನಿʼ ಎಂದು ಹೆಸರಿಡಲಾಗಿದೆ. ಅಸಾನಿ ಎಂದರೆ ಶ್ರೀಲಂಕಾದ ಸಿಂಹಳಿ ಭಾಷೆಯಲ್ಲಿ ಕ್ರೋಧ ಎಂದರ್ಥ. ಸದ್ಯ ಚಂಡಮಾರುತದ ಅಬ್ಬರ ಒಡಿಶಾ ಕಡೆಗೆ ಸಾಗುತ್ತಿದ್ದು, ಮೇ 9 ಮತ್ತು 10ರಂದು ಮಳೆಯಾಗುವ ಸಾಧ್ಯತೆಯಿದೆ. ಇನ್ನು ಗಂಟೆಗೆ 80 ರಿಂದ 90 ಕಿಲೋ ಮೀಟರ್‌ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಅಂದಾಜು ಮಾಡಲಾಗಿದೆ. ಮೇ 10 ರ ಬಳಿಕ ಗಾಳಿಯ ವೇಗ ಕಡಿಮೆಯಾಗಲಿದೆ ಎನ್ನಲಾಗಿದೆ. ಮೇ 9 ಮತ್ತು 10 ರಂದು ಆಂಧ್ರಪ್ರದೇಶ ಹಾಗೂ ಒಡಿಶಾದ 17 ಜಿಲ್ಲೆಗಳಲ್ಲಿ ಬಿಗಿಭದ್ರತೆ ಕೈಗೊಳ್ಳಲಾಗಿದೆ. 


ಇದನ್ನು ಓದಿ: Happy mother's day: ಅಮ್ಮ ಎಂದರೆ ಅಷ್ಟೇ ಸಾಕೇ?


ಕರ್ನಾಟಕದ ಹಲವೆಡೆ ಕಳೆದ ಒಂದು ವಾರದಿಂದ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ಇಂದೂ ಸಹ ಮಧ್ಯಾಹ್ನದ ಬಳಿಕ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಒಂದೆಡೆ ಉತ್ತರ ಭಾರತ ಬಿಸಿಲಿಗೆ ತತ್ತರಿಸುತ್ತಿದೆ. ಇನ್ನೊಂದೆಡೆ ದಕ್ಷಿಣ ಭಾರತದಲ್ಲಿ ಮಳೆ ಅಬ್ಬರ ಶುರುವಾಗಿದೆ. 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.