ನವೆಂಬರ್ 9ರವರೆಗೆ ಈ ಭಾಗಗಳಲ್ಲಿ ಕುಂಭದ್ರೋಣ ಮಳೆ! ಗುಡುಗು-ಬಲವಾದ ಗಾಳಿ ಅಬ್ಬರಕ್ಕೆ ಜಲಪ್ರಳಯದ ಭೀತಿ

Weather Forecast in Karnataka and India: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೆಳಿಗ್ಗೆಯಿಂದ ಮಂಜು ಕವಿದ ವಾತಾವರಣವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 16 ಡಿಗ್ರಿ ಸೆಲ್ಸಿಯಸ್ ಇರಲಿದೆ.

Written by - Bhavishya Shetty | Last Updated : Nov 4, 2023, 11:53 AM IST
    • ಹಲವಾರು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸೂಚನೆ ಇದೆ
    • ಕರ್ನಾಟಕದ ಕೆಲ ಜಿಲ್ಲೆಗಳಲ್ಲೂ ನವೆಂಬರ್ 9ರವರೆಗೆ ರಣಕೋಟಿ ಮಳೆ
    • ಎಚ್ಚರಿಕೆ ವಹಿಸುವಂತೆ ಕೆಲವೆಡೆ ಯೆಲ್ಲೋ ಅಲರ್ಟ್ ಘೋಷಣೆ
ನವೆಂಬರ್ 9ರವರೆಗೆ ಈ ಭಾಗಗಳಲ್ಲಿ ಕುಂಭದ್ರೋಣ ಮಳೆ! ಗುಡುಗು-ಬಲವಾದ ಗಾಳಿ ಅಬ್ಬರಕ್ಕೆ ಜಲಪ್ರಳಯದ ಭೀತಿ title=
Karnataka Rain

Weather Forecast in Karnataka and India: ಕೇರಳ, ತಮಿಳುನಾಡು, ಪುದುಚೇರಿ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸೂಚನೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರ್ನಾಟಕದ ಕೆಲ ಜಿಲ್ಲೆಗಳಲ್ಲೂ ನವೆಂಬರ್ 9ರವರೆಗೆ ರಣಕೋಟಿ ಮಳೆ ಇರಲಿದ್ದು, ಎಚ್ಚರಿಕೆ ವಹಿಸುವಂತೆ ಕೆಲವೆಡೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: ವಿಶ್ವಕಪ್’ನಿಂದಲೇ ಹಾರ್ದಿಕ್ ಪಾಂಡ್ಯ ರೂಲ್ಡೌಟ್: ಬದಲಿಯಾಗಿ 27 ಹರೆಯದ ಕನ್ನಡಿಗನಿಗೆ ಸ್ಥಾನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೆಳಿಗ್ಗೆಯಿಂದ ಮಂಜು ಕವಿದ ವಾತಾವರಣವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 16 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಕರ್ನಾಟಕದ ಹವಾಮಾನ ವರದಿ:

ಕಳೆದ ಕೆಲ ದಿನಗಳಿಂದ ಹವಾಮಾನದಲ್ಲಿ ಭಾರೀ ವೈಪರೀತ್ಯ ಕಂಡುವಂದಿದೆ. ಅಂದಹಾಗೆ ನವೆಂಬರ್ 9ರವರೆಗೆ ಮಂಡ್ಯ, ಮೈಸೂರು ಸೇರಿದಂತೆ ಕೆಲ ಭಾಗಗಳಲ್ಲಿ ಭರ್ಜರಿ ಮಳೆ ಬೀಳುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಭಾರೀ ಮಳೆಯಾಗುವ ಸಾಧ್ಯೆತೆಯಿದೆ. ಇನ್ನೊಂದೆಡೆ ಕಳೆದ ಎರಡು-ಮೂರು ದಿನದಿಂದ ಗುಡುಗು-ಸಿಡಿಲು ಗಾಳಿ ಸಹಿತ ಕರಾವಳಿಯಲ್ಲಿ ಮಳೆಯ ಆರ್ಭಟ ಜೋರಾಗಿದೆ. ಇನ್ನೂ ಕೂಡ 2 ದಿನಗಳ ಕಾಲಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ನೇಪಾಳದಲ್ಲಿ ವಿನಾಶ ಸೃಷ್ಟಿಸಿದ ಪ್ರಬಲ ಭೂಕಂಪ: 129 ಮಂದಿ ಸಾವು-ಸೇನೆಯಿಂದ ಕಾರ್ಯಾಚರಣೆ

ಇನ್ನು ನಾಳೆ ಅಂದರೆ ನವೆಂಬರ್ 5ರಂದು ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News