ನವದೆಹಲಿ: ಮೇಘಾಲಯ, ಅಸ್ಸಾಂನಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.


COMMERCIAL BREAK
SCROLL TO CONTINUE READING

ಉಪ-ಹಿಮಾಲಯನ್ ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ಕರಾವಳಿ ಕರ್ನಾಟಕದ ಕೆಲವು ಸ್ಥಳಗಳಲ್ಲಿ ದಿನವಿಡೀ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಮುನ್ಸೂಚನೆ ಸಂಸ್ಥೆ ತಿಳಿಸಿದೆ.


ಚತ್ತೀಸ್‌ಗಢ, ಮಧ್ಯ ಮಹಾರಾಷ್ಟ್ರ, ಮರಾಠವಾಡ, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಗಳ ಪ್ರತ್ಯೇಕ ಸ್ಥಳಗಳಲ್ಲಿ ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತನ್ನ ಬುಲೆಟಿನ್ ನಲ್ಲಿ ತಿಳಿಸಿದೆ.


ಗಂಟೆಗೆ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮುಂದಿನ 24 ಗಂಟೆಗಳಲ್ಲಿ ಉತ್ತರ ಮಹಾರಾಷ್ಟ್ರ ಕರಾವಳಿಯುದ್ದಕ್ಕೂ ಭಾರೀ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.