ಉತ್ತರಪ್ರದೇಶದ ಕೆಲವೆಡೆ ಇಂದು ಗುಡುಗು ಸಹಿತ ಮಳೆ ಸಾಧ್ಯತೆ!
ಪೂರ್ವ ಉತ್ತರಪ್ರದೇಶದಲ್ಲಿ ಈಗಾಗಲೇ ಮಳೆ ಸಂಬಂಧಿತ ಘಟನೆಗಳಿಂದಾಗಿ ಹದಿನೈದು ಜನರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಈ ಪ್ರದೇಶದಲ್ಲಿ ಅತಿಯಾದ ಮಳೆಯಿಂದಾಗಿ 294 ಮನೆಗಳಿಗೆ ಹಾನಿಯಾಗಿದೆ.
ಲಕ್ನೋ: ಉತ್ತರ ಪ್ರದೇಶದ ಹಲವು ಭಾಗಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಲಕ್ನೋ ಹವಾಮಾನ ಕೇಂದ್ರ ಮಂಗಳವಾರ ಮುನ್ಸೂಚನೆ ನೀಡಿದೆ.
"ಮುಂದಿನ 3 ಗಂಟೆಗಳಲ್ಲಿ ಆಗ್ರಾ, ಫಿರೋಜಾಬಾದ್, ಇಥವಾ, ಜೌರೈಯಾ, ಜಲಾನ್, ಕನ್ನೌಜ್, ಕಾನ್ಪುರ್ ದೇಹತ್, ಕಾನ್ಪುರ ನಗರ, ಉನ್ನಾವೊ, ಬಿಜ್ನೋರ್ ಜಿಲ್ಲೆಗಳ ಹಲವೆಡೆ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ" ಎಂದು ಹವಾಮಾನ ಇಲಾಖೆ ಬುಲೆಟಿನ್ ತಿಳಿಸಿದೆ.
ಪೂರ್ವ ಉತ್ತರಪ್ರದೇಶದಲ್ಲಿ ಈಗಾಗಲೇ ಮಳೆ ಸಂಬಂಧಿತ ಘಟನೆಗಳಿಂದಾಗಿ ಹದಿನೈದು ಜನರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಈ ಪ್ರದೇಶದಲ್ಲಿ ಅತಿಯಾದ ಮಳೆಯಿಂದಾಗಿ 294 ಮನೆಗಳಿಗೆ ಹಾನಿಯಾಗಿದೆ.
ಹಲವೆಡೆ ಮಳೆ ನೀರು ನಿಲುಗಡೆ ಸಮಸ್ಯೆಯನ್ನು ನಿಯಂತ್ರಿಸಲು ಸರ್ಕಾರವು ಹವಾನ ಇಲಾಖೆ ಮತ್ತು ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದೆ. ಮಳೆ ಪರಿಹಾರ ಕಾರ್ಯಗಳಿಗೆ ಎಲ್ಲಾ ಸಿದ್ಧತೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.