ಕೇರಳ ಬಳಿಕ ಈ ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ!

ಉತ್ತರ ಒಡಿಶಾದ ಕರಾವಳಿ ಭಾಗದಲ್ಲಿ ಮತ್ತು ಪಶ್ಚಿಮ ಬಂಗಾಳದ ಗಂಗಾನದಿ ಭಾಗದಲ್ಲಿ ಚಂಡಮಾರುತದ ಪರಿಚಲನೆ ಮತ್ತು ಬಂಗಾಳಕೊಲ್ಲಿಯಿಂದ ಈಶಾನ್ಯ ಭಾರತದ ಕಡೆಗೆ ಬಲವಾದ ನೈಋತ್ಯ ಮಾರುತಗಳು ಬೀಸುತ್ತಿರುವ ಕಾರಣ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನೈಋತ್ಯ ಮಾನ್ಸೂನ್ ಸಂಪೂರ್ಣ ಈಶಾನ್ಯ ರಾಜ್ಯಗಳು ಮತ್ತು ಉಪ-ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನ ಕೆಲವು ಭಾಗಗಳನ್ನು ಆವರಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಶುಕ್ರವಾರ ತಿಳಿಸಿದೆ. 

Written by - Bhavishya Shetty | Last Updated : Jun 4, 2022, 10:23 AM IST
  • ಈ ರಾಜ್ಯಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿದ ಐಎಂಡಿ
  • ಇಂದು ದೆಹಲಿಯಲ್ಲಿ ಎಲ್ಲೋ ಅಲರ್ಟ್ ಘೋಷಣೆ
  • ದೆಹಲಿ ಮತ್ತು ಉತ್ತರ ಪ್ರದೇಶಕ್ಕೆ ಮುಂಗಾರು ಪ್ರವೇಶ ಯಾವಾಗ!
ಕೇರಳ ಬಳಿಕ ಈ ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ!  title=
Weather Update

IMD weather update: ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ನೈಋತ್ಯ ಮಾನ್ಸೂನ್ ಶುಕ್ರವಾರದಂದು ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಿದೆ. ಈ ಬಳಿಕ ಸುಮಾರು ಐದು ದಿನಗಳ ಕಾಲ ಈಶಾನ್ಯ ರಾಜ್ಯಗಳು ಸೇರಿದಂತೆ ಬಂಗಾಳದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಹವಾಮಾನ ಇಲಾಖೆಯ ಪ್ರಕಾರ, ಬಂಗಾಳದಲ್ಲಿ ಜೂನ್ 8 ರ ಬೆಳಿಗ್ಗೆ ತನಕ ಕೂಚ್ ಬೆಹಾರ್, ಜಲ್ಪೈಗುರಿ, ಅಲಿಪುರ್ದೂರ್, ಡಾರ್ಜಿಲಿಂಗ್ ಮತ್ತು ಕಾಲಿಂಪಾಂಗ್ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ. ಮುಂದಿನ ಐದು ದಿನಗಳ ಕಾಲ ಈಶಾನ್ಯ ರಾಜ್ಯಗಳ ಹವಾಮಾನದ ಮೇಲೆ ಪರಿಣಾಮ ಬೀರಲಿದ್ದು, ಬಂಗಾಳದ ಜಿಲ್ಲೆಗಳಲ್ಲಿ ಮಿಂಚು ಮತ್ತು ಲಘು ಮಳೆಯಾಗುವ ಸಾಧ್ಯತೆಯಿದೆ.

ಈ ರಾಜ್ಯಗಳಲ್ಲಿ ಮಳೆ ಮುನ್ಸೂಚನೆ: 
ಉತ್ತರ ಒಡಿಶಾದ ಕರಾವಳಿ ಭಾಗದಲ್ಲಿ ಮತ್ತು ಪಶ್ಚಿಮ ಬಂಗಾಳದ ಗಂಗಾನದಿ ಭಾಗದಲ್ಲಿ ಚಂಡಮಾರುತದ ಪರಿಚಲನೆ ಮತ್ತು ಬಂಗಾಳಕೊಲ್ಲಿಯಿಂದ ಈಶಾನ್ಯ ಭಾರತದ ಕಡೆಗೆ ಬಲವಾದ ನೈಋತ್ಯ ಮಾರುತಗಳು ಬೀಸುತ್ತಿರುವ ಕಾರಣ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನೈಋತ್ಯ ಮಾನ್ಸೂನ್ ಸಂಪೂರ್ಣ ಈಶಾನ್ಯ ರಾಜ್ಯಗಳು ಮತ್ತು ಉಪ-ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನ ಕೆಲವು ಭಾಗಗಳನ್ನು ಆವರಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಶುಕ್ರವಾರ ತಿಳಿಸಿದೆ. ಆದ್ದರಿಂದ ಅಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ಮೊದಲು, ಮುಂದಿನ ಐದು ದಿನಗಳಲ್ಲಿ ಕೇರಳ, ಕರಾವಳಿ ಕರ್ನಾಟಕ ಮತ್ತು ಲಕ್ಷದ್ವೀಪದಲ್ಲಿ ವ್ಯಾಪಕವಾದ ಹಗುರದಿಂದ ಸಾಧಾರಣ ಮಳೆ ಮತ್ತು ಗುಡುಗು ಸಹಿತ ಮಳೆ ಮತ್ತು ಆಂಧ್ರಪ್ರದೇಶ, ತೆಲಂಗಾಣ, ಉತ್ತರ ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಪ್ರತ್ಯೇಕ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಇದನ್ನು ಓದಿ: ಈ ರಾಶಿಯವರ ಮೇಲೆ ಬೀಳಲಿದೆ ಶನಿಯ ವಕ್ರ ದೃಷ್ಟಿ ! ಆದರೆ ನಾಲ್ಕು ರಾಶಿಯವರ ಮೇಲೆ ಭಾರೀ ಕೃಪಾ ಕಟಾಕ್ಷ

ಇಂದು ದೆಹಲಿಯಲ್ಲಿ ಎಲ್ಲೋ ಅಲರ್ಟ್: 
ಹವಾಮಾನ ಇಲಾಖೆಯು ರಾಷ್ಟ್ರ ರಾಜಧಾನಿಯ ವಿವಿಧ ಸ್ಥಳಗಳಲ್ಲಿ ಶನಿವಾರ 'ಎಲ್ಲೋ ಅಲರ್ಟ್' ಎಚ್ಚರಿಕೆಯನ್ನು ನೀಡಿದೆ. ಸಫ್ದರ್‌ಜಂಗ್ ವೀಕ್ಷಣಾಲಯದಲ್ಲಿ 44 ಡಿಗ್ರಿ ಸೆಲ್ಸಿಯಸ್‌ಗೆ ತಲುಪುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆಯು ಹವಾಮಾನ ಎಚ್ಚರಿಕೆಗಳಿಗಾಗಿ 4 ಬಣ್ಣದ ಕೋಡ್‌ಗಳನ್ನು ಬಳಸುತ್ತದೆ. ಅವುಗಳೆಂದರೆ ಹಸಿರು (ಯಾವುದೇ ಕ್ರಿಯೆಯ ಅಗತ್ಯವಿಲ್ಲ), ಹಳದಿ (ಕ್ರಮಗಳ ಬಗ್ಗೆ ಪರಿಶೀಲಿಸಿ), ಆರೆಂಜ್‌ (ಸಿದ್ಧತೆ ಮಾಡಿಕೊಳ್ಳಿ) ಮತ್ತು ಕೆಂಪು (ಅಪಾಯದ ಮುನ್ಸೂಚನೆಯಿದ್ದು ಕ್ರಮ ತೆಗೆದುಕೊಳ್ಳಿ).

ಇದನ್ನು ಓದಿ: ಚಿನ್ನ ಖರೀದಿ ಇನ್ನು ಕಷ್ಟ .! ದಿನೇ ದಿನೇ ಭಾರೀ ಹೆಚ್ಚಳವಾಗುತ್ತಿದೆ ಬಂಗಾರದ ಬೆಲೆ

ದೆಹಲಿ ಮತ್ತು ಉತ್ತರ ಪ್ರದೇಶಕ್ಕೆ ಮುಂಗಾರು ಪ್ರವೇಶ ಯಾವಾಗ:  
ಹವಾಮಾನ ಇಲಾಖೆಯ ಪ್ರಕಾರ, ಜೂನ್ 25 ರೊಳಗೆ ಮುಂಗಾರು ದೆಹಲಿ, ಉತ್ತರ ಪ್ರದೇಶ, ಹರಿಯಾಣ, ಪಂಜಾಬ್, ಹಿಮಾಚಲ ಪ್ರದೇಶ, ಗುಜರಾತ್ ಮತ್ತು ನೆರೆಯ ರಾಜ್ಯಗಳಿಗೆ ಪ್ರವೇಶಿಸಲಿದೆ. ಅದೇ ಸಮಯದಲ್ಲಿ, ಜೂನ್ 15 ರ ಸುಮಾರಿಗೆ ಛತ್ತೀಸ್‌ಗಢ, ಜಾರ್ಖಂಡ್, ಬಿಹಾರಕ್ಕೂ ಮುಂಗಾರು ಆಗಮಿಸುವ ನಿರೀಕ್ಷೆಯಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News