Rain Alert: ಈ ವರ್ಷ ದೇಶದ ಹಲವು ಭಾಗಗಳಲ್ಲಿ ಮಾನ್ಸೂನ್ ಅಬ್ಬರ ಜೋರಾಗಿದೆ. ಆದರೆ, ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ಪ್ರದೇಶಗಳಲ್ಲಿ ಬಿಸಿಲಿನ ಬೇಗೆಯಿಂದ ಮುಕ್ತಿಯೇ ಸಿಗುತ್ತಿಲ್ಲ. ಈ ಮಧ್ಯೆ, ಇಂದು ಸೆಪ್ಟೆಂಬರ್ 14 ಬುಧವಾರದಂದು ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಈ ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ:
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಬುಧವಾರದಂದು ಗುಜರಾತ್, ಮಧ್ಯಪ್ರದೇಶ, ಪಶ್ಚಿಮ ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಿದೆ. ಅಂದರೆ, ಇಂದು ಈ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.
ಇದನ್ನೂ ಓದಿ- Gyanvapi Case : ಜ್ಞಾನವಾಪಿ ಪ್ರಕರಣ ಹಿಂದೂಗಳ ಪರ ಕೋರ್ಟ್ ತೀರ್ಪು, ಮುಸ್ಲಿಂರ ಅರ್ಜಿ ವಜಾ
ದಕ್ಷಿಣ ಭಾರತದ ಹವಾಮಾನ ಮಾಹಿತಿ:
ಇದಲ್ಲದೇ ದಕ್ಷಿಣ ಭಾರತದ ಹಲವು ಪ್ರದೇಶಗಳಲ್ಲಿಯೂ ವರುಣನ ಅಬ್ಬರ ಮುಂದುವರೆಯಲಿದೆ ಎಂದು ಐಎಂಡಿ ಮಾಹಿತಿ ನೀಡಿದೆ. ಕರಾವಳಿ ಆಂಧ್ರಪ್ರದೇಶ, ಕರ್ನಾಟಕ ಮತ್ತು ತಮಿಳುನಾಡು ಕರಾವಳಿಯಲ್ಲಿ ಇಂದು ಧಾರಾಕಾರ ಮಳೆಯೊಂದಿಗೆ ಲಘು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಇಂದು ದೆಹಲಿ ಎನ್‌ಸಿಆರ್‌ನಲ್ಲಿ ಮಳೆ?
ಇದೇ ವೇಳೆ ಬಿಸಿಲಿನ ಬೇಗೆ ಎದುರಿಸುತ್ತಿರುವ ದೆಹಲಿ ಜನತೆಯ ಸ್ವಲ್ಪ ಮಟ್ಟಿಗೆ ಮಳೆರಾಯ ತಂಪೆರೆಯಲಿದ್ದಾನೆ. ಹವಾಮಾನ ಇಲಾಖೆಯು ದೆಹಲಿ ಎನ್‌ಸಿಆರ್‌ನಲ್ಲಿ ಇಂದು ಲಘು ಮಳೆಯಾಗುವ ಮುನ್ಸೂಚನೆ ನೀಡಿದೆ. ರಾಜಧಾನಿಯಲ್ಲಿ ಹಗಲಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಲಘು ಮಳೆ ಹಾಗೂ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ.
ಇದನ್ನೂ ಓದಿ- GST On Rent: ಬಾಡಿಗೆ ಮನೆಯ ಮೇಲೂ 18% ಜಿಎಸ್‌ಟಿ ಪಾವತಿಸಬೇಕೇ?
ಹವಾಮಾನ ಇಲಾಖೆ ಪ್ರಕಾರ, ಇಂದು ಮತ್ತು ನಾಳೆ ರಾಜಸ್ಥಾನದ ಕೆಲವು ಪ್ರದೇಶಗಳಲ್ಲಿ, ಉತ್ತರ ಪ್ರದೇಶದಲ್ಲಿ ಮುಂಬರುವ 2 ದಿನಗಳವರೆಗೆ, ಕೊಂಕಣ ಮತ್ತು ಗೋವಾ, ಹಿಮಾಚಲ ಪ್ರದೇಶ ಮತ್ತು ಪಂಜಾಬ್‌ನಲ್ಲಿ ಮುಂಬರುವ 3 ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ಉತ್ತರಾಖಂಡದಲ್ಲೂ ಲಘು ಮಳೆಯಾಗುವ ಮುನ್ಸೂಚನೆ ಇದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.