ಇಂದಿನಿಂದ ಮುಂದಿನ ನಾಲ್ಕು ದಿನ ಈ ಭಾಗಗಳಲ್ಲಿ ಭಾರೀ ಮಳೆ ಬಗ್ಗೆ ಐಎಂಡಿ ಎಚ್ಚರಿಕೆ
Weather Forecast: ನವೆಂಬರ್ 25ರಿಂದ ನವೆಂಬರ್ 28ರವರೆಗೆ ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
Rain Alert: ಉತ್ತರ ಭಾರತದ ಬಹುತೇಕ ರಾಜ್ಯಗಳಲ್ಲಿ ದಟ್ಟ ಮಂಜಿನಿಂದಾಗಿ ಜನ ತತ್ತರಿಸಿದ್ದಾರೆ. ಇನ್ನೂ ಕೆಲವು ದಿನಗಳವರೆಗೆ ಹಿಮಾಚಲ ಪ್ರದೇಶ, ಉತ್ತರಾಖಂಡ, ದೆಹಲಿ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಶೀತ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ ಸಂದರ್ಭದಲ್ಲಿ ನವೆಂಬರ್ 25ರಿಂದ ನವೆಂಬರ್ 28ರವರೆಗೆ ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.
ಐಎಂಡಿ ಪ್ರಕಾರ, ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ತೀವ್ರ ಸ್ವರೂಪ ಪಡೆಯುವ ಸಾಧ್ಯತೆ ಇದ್ದು ಇದರಿಂದಾಗಿ ತಮಿಳುನಾಡು, ಶ್ರೀಲಂಕಾ ಭಾಗಗಳಲ್ಲಿ ನವೆಂಬರ್ 25ರಿಂದ ನವೆಂಬರ್ 27ರವರೆಗೆ ಭಾರೀ ಮಳೆಯಾಗಲಿದೆ. ಗಾಳಿಯ ತೀವ್ರತೆ ಗಂಟೆಗೆ 55 ಕಿ.ಮೀ. ವೇಗದಲ್ಲಿರುವುದರಿಂದ ಮೀನುಗಾರರನ್ನು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ನಾಲ್ಕು ದಿನ ಈ ಭಾಗಗಳಲ್ಲಿ ಭಾರೀ ಮಳೆ:
ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ, ತಮಿಳುನಾಡಿನ ಪುದುಚೇರಿ, ಕಾರೈಕಾಲ್ ನ ಪ್ರತ್ಯೇಕ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಇದನ್ನೂ ಓದಿ- ದೇವರಾಣೆಗೂ ನಿಮ್ಮಿಂದ ಆಗಲ್ಲ..! ಆದ್ರೂ.. ಈ ಮೂವರಲ್ಲಿ ಯುವತಿಯನ್ನು ಕೊಂದ ʼಕೊಲೆಗಾರʼ ಯಾರು..? ಹೇಳಿ ನೋಡೋಣ..
ನವೆಂಬರ್ 26, 27ರಂದು ಈ ಭಾಗಗಗಳಲ್ಲಿ ಮಳೆ ಸಾಧ್ಯತೆ:
ಚಂಡಮಾರುತ ತೀವ್ರ ಸ್ವರೂಪ ಪಡೆಯುವ ಹಿನ್ನಲೆಯಲ್ಲಿ ನವೆಂಬರ್ 26 ಮತ್ತು 27ರಂದು ಕೇರಳ, ಆಂಧ್ರ ಪ್ರದೇಶದ ಕರಾವಳಿ ಭಾಗ ಮತ್ತು ಕರ್ನಾಟಕದ ಕೆಲವು ಭಾಗಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ