India Pakistan War Updates: ಭಾರತದ ವಿರೋಧದ ನಡುವೆಯೂ ಪಾಕಿಸ್ತಾನಕ್ಕೆ ಅಂತಾರಾಷ್ಟ್ರೀಯ ಹಣಕಾಸು ನಿಧಿ (IMF) ಶುಕ್ರವಾರ 19 ಸಾವಿರ ಕೋಟಿ ರೂಪಾಯಿ ಸಾಲವನ್ನು ಮಂಜೂರು ಮಾಡಿದೆ. ಐಎಂಎಫ್ ಕಾರ್ಯಕಾರಿ ಮಂಡಳಿಯು ತನ್ನ ವಿಸ್ತೃತ ನಿಧಿ ಸೌಲಭ್ಯ (EFF) ಅಡಿಯಲ್ಲಿ ಪಾಕಿಸ್ತಾನಕ್ಕೆ 1 ಬಿಲಿಯನ್ ಡಾಲರ್ಗಳ 2ನೇ ಸಾಲದ ಕಂತನ್ನು ವಿತರಿಸಲು ಅನುಮೋದನೆ ನೀಡಿದೆ.
ವಿರೋಧದ ನಡುವೆಯೂ ಪಾಕಿಸ್ತಾನಕ್ಕೆ IMF ಸಾಲ ಮಂಜೂರು ಮಾಡಿದ್ದಕ್ಕೆ ಭಾರತ ಬೇಸರ ವ್ಯಕ್ತಪಡಿಸಿದೆ. ಇದು ರಾಜ್ಯ ಪ್ರಾಯೋಜಿತ ಭಯೋತ್ಪಾದನೆಗೆ ಹಣಕಾಸಿನ ನೆರವು ಅಂತಾ ಕಳವಳ ವ್ಯಕ್ತಪಡಿಸಿದೆ. ಇದಲ್ಲದೇ ಪಾಕಿಸ್ತಾನಕ್ಕೆ ಸಾಲ ನೀಡುವ ಮತದಾನದಿಂದ ಭಾರತ ದೂರ ಉಳಿಯಿತು.
ಇದನ್ನೂ ಓದಿ: 210 ನಿಮಿಷದಲ್ಲಿ ಪಾಕ್ನ 500 ಡ್ರೋಣ್ ಹೊಡೆದುರುಳಿಸಿದ್ದು ಹೇಗೆ ಗೊತ್ತಾ? ಮೈ ರೋಮಾಂಚನಗೊಳಿಸೋ
ಪುನರಾವರ್ತಿತ ಆರ್ಥಿಕ ಬಿಕ್ಕಟ್ಟು ಮತ್ತು ಹಿಂದಿನ IMF ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ಕಳಪೆ ದಾಖಲೆಯಿಂದ ಗುರುತಿಸಲ್ಪಟ್ಟ EFF ಕಾರ್ಯಕ್ರಮದಡಿ ಪಾಕಿಸ್ತಾನದ ಪ್ರಗತಿಯನ್ನ ಪರಿಶೀಲಿಸಿದ ನಂತರ IMF ಈ ಸಾಲದ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.
India abstains from IMF vote on Pakistan Loan Programs, citing terrorism concerns
Read @ANI Story | https://t.co/9zMFEZkkRe#IMF #PakistanLoan #India pic.twitter.com/r7rsVqEZ71
— ANI Digital (@ani_digital) May 9, 2025
ಹಿಂದಿನ IMF ಸಾಲಗಳನ್ನ ಪರಿಣಾಮಕಾರಿಯಾಗಿ ಬಳಸುವಲ್ಲಿ ಪಾಕಿಸ್ತಾನದ ನಿರಂತರ ವೈಫಲ್ಯದ ಬಗ್ಗೆ ಭಾರತ ಎಚ್ಚರಿಕೆ ನೀಡಿತ್ತು. ಅಲ್ಲದೇ ಈ ನಿಧಿಯ ದುರ್ಬಳಕೆ ವಿಚಾರವಾಗಿ ಕಳವಳ ವ್ಯಕ್ತಪಡಿಸಿತ್ತು. ಈ ಹಣವನ್ನು ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಗೆ ದುರುಪಯೋಗಪಡಿಸಿಕೊಳ್ಳಬಹುದು. ಹೀಗಾಗಿ ಯೋಚಿಸಿ ನಿರ್ಧಾರ ತೆಗೆದುಕೊಳ್ಳಬೇಕು. ಪಾಕಿಸ್ತಾನಕ್ಕೆ ಯಾವುದೇ ರೀತಿ ಸಾಲವನ್ನು ಮಂಜೂರು ಮಾಡದಂತೆ ಭಾರತ IMFಗೆ ಒತ್ತಾಯಿಸಿತ್ತು.
ಇದನ್ನೂ ಓದಿ: ಪಾಕಿಸ್ತಾನದ ಬುಡಕ್ಕೇ ಬೆಂಕಿ ಇಡಲು ಭಾರತ ಸಜ್ಜು... ಇನ್ಮುಂದೆ ಐಎಂಎಫ್ ಕೂಡ ಸಾಲ ನೀಡದಂತೆ ಅಡ್ಡಗಾಲು
ಭಾರತದ ವಿರೋಧದ ನಡುವೆಯೂ ಪಾಕಿಸ್ತಾನಕ್ಕೆ IMF ಸಾಲ ಮಂಜೂರು ಮಾಡಿದೆ. ಹೀಗಾಗಿ IMF ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಭಾರತವು ತನ್ನ ಪ್ರತಿಭಟನೆಯನ್ನು ದಾಖಲಿಸಿತು. ಇದಲ್ಲದೇ ನಿರ್ಣಾಯಕ IMF ಸಭೆಯಲ್ಲಿ ಮತದಾನದಿಂದ ದೂರ ಉಳಿಯಿತು. ಕಳೆದ ಐದು ವರ್ಷಗಳಲ್ಲಿ ನಾಲ್ಕು IMG ಕಾರ್ಯಕ್ರಮಗಳ ಹೊರತಾಗಿಯೂ ಪಾಕಿಸ್ತಾನವು ಆರ್ಥಿಕ ಅಸ್ಥಿರತೆ ಎದುರಿಸುತ್ತಿದೆ ಎಂದು ಇದೇ ವೇಳೆ ಭಾರತ ತಿಳಿಸಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.