2024ರ ಲೋಕಸಭೆ ಚುನಾವಣೆಗೂ ಮುನ್ನ ಸಿಎಎ ಜಾರಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟ ಮಾತು

CAA Implementation Date: ಪೌರತ್ವ ತಿದ್ದುಪಡಿ ಕಾಯ್ದೆಯನ್ನು 2019 ರಲ್ಲಿ ಮಾಡಲಾಗಿದೆ. ಆದರೆ ದೇಶದಲ್ಲಿ ಇದುವರೆಗೆ ಜಾರಿಯಾಗಿಲ್ಲ. ಪೌರತ್ವ ತಿದ್ದುಪಡಿ ಮಸೂದೆ ಸಂಸತ್ತಿನಲ್ಲಿ ಅಂಗೀಕಾರವಾದ ನಂತರ ಅದರ ವಿರುದ್ಧ ಪ್ರತಿಭಟನೆಗಳು ಪ್ರಾರಂಭವಾಗಿದ್ದವು.

Written by - Bhavishya Shetty | Last Updated : Feb 10, 2024, 03:27 PM IST
    • 2024ರ ಲೋಕಸಭೆ ಚುನಾವಣೆಗೂ ಮುನ್ನ ಸಿಎಎ ಜಾರಿ
    • ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟವಾಗಿ ಹೇಳಿದ್ದಾರೆ
    • ಸಿಎಎಯಿಂದ ಯಾರೂ ತಮ್ಮ ಪೌರತ್ವವನ್ನು ಕಳೆದುಕೊಳ್ಳುವುದಿಲ್ಲ
2024ರ ಲೋಕಸಭೆ ಚುನಾವಣೆಗೂ ಮುನ್ನ ಸಿಎಎ ಜಾರಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟ ಮಾತು title=
Union Home Minister Amit Shah

CAA Implementation Date: 2024ರ ಲೋಕಸಭೆ ಚುನಾವಣೆಗೂ ಮುನ್ನ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಯಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟವಾಗಿ ಹೇಳಿದ್ದಾರೆ. “ಇದರ ಬಗ್ಗೆ ಮನಸ್ಸಿನಲ್ಲಿ ಯಾವುದೇ ಗೊಂದಲ ಇರಬಾರದು. ಸಿಎಎಯಿಂದ ಯಾರೂ ತಮ್ಮ ಪೌರತ್ವವನ್ನು ಕಳೆದುಕೊಳ್ಳುವುದಿಲ್ಲ ಎಂದು ನಾನು ಸ್ಪಷ್ಟವಾಗಿ ಹೇಳುತ್ತೇನೆ” ಎಂದು ಕಾರ್ಯಕ್ರಮವೊಂದರಲ್ಲಿ ಅಮಿತ್ ಶಾ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: RBI ಗವರ್ನರ್ ಸಂಬಳ ಎಷ್ಟು? ಅವರಿಗೆ ನೀಡಿರುವ ಸೌಲಭ್ಯಗಳಾವವು?  

ಸಿಎಎ ಜಾರಿಯಲ್ಲಿ ವಿಳಂಬ ಏಕೆ?

ಪೌರತ್ವ ತಿದ್ದುಪಡಿ ಕಾಯ್ದೆಯನ್ನು 2019 ರಲ್ಲಿ ಮಾಡಲಾಗಿದೆ. ಆದರೆ ದೇಶದಲ್ಲಿ ಇದುವರೆಗೆ ಜಾರಿಯಾಗಿಲ್ಲ. ಪೌರತ್ವ ತಿದ್ದುಪಡಿ ಮಸೂದೆ ಸಂಸತ್ತಿನಲ್ಲಿ ಅಂಗೀಕಾರವಾದ ನಂತರ ಅದರ ವಿರುದ್ಧ ಪ್ರತಿಭಟನೆಗಳು ಪ್ರಾರಂಭವಾಗಿದ್ದವು. ದೆಹಲಿಯ ಶಾಹೀನ್ ಭಾಗ್ ಎಂಬಲ್ಲ ತಿಂಗಳುಗಟ್ಟಲೆ ಪ್ರತಿಭಟನೆ ನಡೆಯಿತು. ಜೊತೆಗೆ ಸಿಎಎ ವಿರೋಧಿಸಿ ಈಶಾನ್ಯ ದೆಹಲಿಯಲ್ಲೂ ಗಲಭೆಗಳು ನಡೆದಿದ್ದವು.

ಪೌರತ್ವ ತಿದ್ದುಪಡಿ ಕಾಯ್ದೆ ಎಂದರೇನು?

ಸರಳ ಭಾಷೆಯಲ್ಲಿ ಅರ್ಥಮಾಡಿಕೊಳ್ಳುವುದಾದರೆ, ಪೌರತ್ವ ತಿದ್ದುಪಡಿ ಕಾಯಿದೆಯು ಅನುಷ್ಠಾನಗೊಂಡ ನಂತರ ಭಾರತದ ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ವಾಸಿಸುವ ಅಲ್ಪಸಂಖ್ಯಾತ ಸಮುದಾಯಗಳು ಸುಲಭವಾಗಿ ಭಾರತೀಯ ಪೌರತ್ವವನ್ನು ಪಡೆಯುತ್ತವೆ. ಈ ಅಲ್ಪಸಂಖ್ಯಾತರಲ್ಲಿ ಹಿಂದೂಗಳು, ಸಿಖ್ಖರು, ಕ್ರಿಶ್ಚಿಯನ್ನರು, ಬೌದ್ಧರು, ಜೈನರು ಮತ್ತು ಪಾರ್ಸಿಗಳು ಸೇರಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿ ಈ ಜನರಿಗೆ ಭಾರತೀಯ ಪೌರತ್ವ ಪಡೆಯುವ ಪ್ರಕ್ರಿಯೆಯನ್ನು ಸುಲಭಗೊಳಿಸಲಾಗಿದೆ.

ಇದನ್ನೂ ಓದಿ: ಟೆಸ್ಟ್’ನಲ್ಲಿ ಚೊಚ್ಚಲ ಅವಕಾಶ ಪಡೆದ ಆಕಾಶ್ ದೀಪ್ ಯಾರು ಗೊತ್ತಾ?

ದೇಶದಲ್ಲಿ ಸಿಎಎ ಜಾರಿಯಿಂದ ಯಾರೂ ತಮ್ಮ ಪೌರತ್ವವನ್ನು ಕಳೆದುಕೊಳ್ಳುವುದಿಲ್ಲ ಎಂದು ಕೇಂದ್ರ ಸರ್ಕಾರ ಈಗಾಗಲೇ ಹಲವು ಬಾರಿ ಸ್ಪಷ್ಟಪಡಿಸಿದೆ. ಸಿಎಎಯಲ್ಲಿ ಅಂತಹ ಯಾವುದೇ ಅವಕಾಶವಿಲ್ಲ. ಸಿಎಎ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ಅಲ್ಪಸಂಖ್ಯಾತರಿಗೆ ಭಾರತದಲ್ಲಿ ಪೌರತ್ವವನ್ನು ನೀಡುತ್ತದೆ. ಕಳೆದ ಹಲವು ದಶಕಗಳಿಂದ ಈ ಮೂರು ದೇಶಗಳಲ್ಲಿ ಅಲ್ಪಸಂಖ್ಯಾತರು ಹೇಗೆ ಶೋಷಣೆಗೆ ಒಳಗಾಗುತ್ತಿದ್ದಾರೆ ಎಂಬುದು ಎಲ್ಲರಿಗೂ ತಿಳಿದ ಸಂಗತಿ. ಹೀಗಾಗಿ ಅವರ ರಕ್ಷಣೆಗೆ ಸಿಎಎ ಸಹಕಾರ ನೀಡಲಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News