ಲೋಕಸಭಾ ಚುನಾವಣೆ ವೇಳಾಪಟ್ಟಿ ಪ್ರಕಟ ಬೆನ್ನಲ್ಲೇ ನೀತಿ ಸಂಹಿತೆ ಜಾರಿ: ಯಾವ ಚಟುವಟಿಕೆಗೆ ನಿರ್ಬಂಧ..?
Lok Sabha Elections 2024: ನೀತಿ ಸಂಹಿತೆ ಜಾರಿಯಾದ ನಂತರ ಯಾವುದೇ ರಾಜಕೀಯ ಪಕ್ಷಕ್ಕೆ ಲಾಭವಾಗುವಂತೆ ಸರ್ಕಾರದ ಹಣ ಬಳಸುವಂತಿಲ್ಲ. ಸರ್ಕಾರದ ಘೋಷಣೆಗಳು, ಉದ್ಘಾಟನೆಗಳು, ಶಂಕುಸ್ಥಾಪನೆ ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ದೇವಸ್ಥಾನ, ಮಸೀದಿ, ಚರ್ಚ್, ಗುರುದ್ವಾರ ಅಥವಾ ಯಾವುದೇ ಧಾರ್ಮಿಕ ಸ್ಥಳವನ್ನು ಚುನಾವಣಾ ಪ್ರಚಾರಕ್ಕೆ ಬಳಸುವಂತಿಲ್ಲ.
ನವದೆಹಲಿ: ಲೋಕಸಭಾ ಚುನಾವಣೆ ವೇಳಾಪಟ್ಟಿ ಶನಿವಾರ ಪ್ರಕಟವಾಗಿದ್ದು, ಇದರ ಜೊತೆಗೆ ಕೆಲವು ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕವೂ ಪ್ರಕಟವಾಗಿದೆ. ವಿಧಾನಸಭಾ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಒಡಿಶಾ, ಸಿಕ್ಕಿಂ, ಅರುಣಾಚಲ ಪ್ರದೇಶ ಮತ್ತು ಆಂಧ್ರಪ್ರದೇಶ ಸೇರಿವೆ. ಚುನಾವಣಾ ದಿನಾಂಕ ಘೋಷಣೆಯ ಬಳಿಕ ಕರ್ನಾಟಕ ಸೇರಿದಂತೆ ದೇಶದಾದ್ಯಂತ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ. ನೀತಿ ಸಂಹಿತೆ ಜಾರಿಯಾಗಿದ್ದರಿಂದ ದೇಶದಲ್ಲಿ ಯಾವೆಲ್ಲಾ ಚಟುವಟಿಕೆಗಳಿಗೆ ನಿರ್ಬಂಧವಿರುತ್ತದೆ ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ನೀತಿ ಸಂಹಿತೆಯ ನಿಯಮಗಳು: ನೀತಿ ಸಂಹಿತೆ ಜಾರಿಯಾದ ನಂತರ ಯಾವುದೇ ರಾಜಕೀಯ ಪಕ್ಷಕ್ಕೆ ಲಾಭವಾಗುವಂತೆ ಸರ್ಕಾರದ ಹಣ ಬಳಸುವಂತಿಲ್ಲ. ಸರ್ಕಾರದ ಘೋಷಣೆಗಳು, ಉದ್ಘಾಟನೆಗಳು, ಶಂಕುಸ್ಥಾಪನೆ ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಆದರೆ ಈಗಾಗಲೇ ಪ್ರಾರಂಭವಾಗಿರುವ ಕೆಲಸಗಳನ್ನು ಮುಂದುವರಿಸಬಹುದು. ದೇವಸ್ಥಾನ, ಮಸೀದಿ, ಚರ್ಚ್, ಗುರುದ್ವಾರ ಅಥವಾ ಯಾವುದೇ ಧಾರ್ಮಿಕ ಸ್ಥಳವನ್ನು ಚುನಾವಣಾ ಪ್ರಚಾರಕ್ಕೆ ಬಳಸುವಂತಿಲ್ಲ.
ಇದನ್ನೂ ಓದಿ: Railway Career: ನಿರುದ್ಯೋಗಿಗಳಿಗೆ ಗುಡ್ ನ್ಯೂಸ್..! ರೈಲ್ವೆ ಕೋಚ್ ಫ್ಯಾಕ್ಟರಿಯಲ್ಲಿ ಉದ್ಯೋಗವಕಾಶ
7ನೇ ವೇತನ ಆಯೋಗದ ಶಿಫಾರಸ್ಸು ಈಡೇರಿಸುವ ಕರ್ತವ್ಯ ಸಿದ್ದರಾಮಯ್ಯ ಅವರದ್ದು:ಬಸವರಾಜ ಬೊಮ್ಮಾಯಿ
ಜನ ಸಾಮಾನ್ಯರಿಗೆ ನೀತಿ ಸಂಹಿತೆ: ನೀತಿ ಸಂಹಿತೆ ಕೇವಲ ರಾಜಕೀಯ ಪಕ್ಷಗಳಿಗೆ ಅಥವಾ ಅಭ್ಯರ್ಥಿಗಳಿಗೆ ಸೀಮಿತವಾಗಿಲ್ಲ. ಇದು ಸಾಮಾನ್ಯರಿಗೂ ಅನ್ವಯಿಸುತ್ತದೆ. ಯಾರಾದರೂ ತಮ್ಮ ನಾಯಕರ ಪ್ರಚಾರದಲ್ಲಿ ತೊಡಗಿದ್ದರೆ, ಅವರು ಈ ನಿಯಮಗಳನ್ನು ಅನುಸರಿಸಬೇಕಾಗುತ್ತದೆ. ನಿಯಮಗಳನ್ನು ನಿರ್ಲಕ್ಷಿಸಿ ತಮ್ಮಪರ ಕೆಲಸ ಮಾಡಲು ಯಾವುದೇ ರಾಜಕಾರಣಿ ನಿಮ್ಮನ್ನು ಕೇಳಿದರೆ, ನೀತಿ ಸಂಹಿತೆಯ ನಿಯಮಗಳು ಮತ್ತು ನಿಬಂಧನೆಗಳ ಬಗ್ಗೆ ಹೇಳುವ ಮೂಲಕ ನೀವು ನಿರಾಕರಿಸಬಹುದು. ಯಾರಾದರೂ ಪ್ರಚಾರ ಮಾಡಿ ಸಿಕ್ಕಿಬಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬಹುದು.
ನೀತಿ ಸಂಹಿತೆ ಉಲ್ಲಂಘಿಸಿದರೆ ಏನಾಗುತ್ತೆ?: ಯಾವುದೇ ರಾಜಕೀಯ ಪಕ್ಷ ಅಥವಾ ಅದರ ಅಭ್ಯರ್ಥಿ ನೀತಿ ಸಂಹಿತೆ ಉಲ್ಲಂಘಿಸಿದರೆ ಅಂಥವರನ್ನು ಪ್ರಚಾರದಿಂದ ನಿಷೇಧಿಸಬಹುದು. ಅಭ್ಯರ್ಥಿಯು ಚುನಾವಣೆಗೆ ಸ್ಪರ್ಧಿಸದಂತೆ ನಿರ್ಬಂಧಿಸಬಹುದು. ಅಗತ್ಯವಿದ್ದರೆ ಅಭ್ಯರ್ಥಿಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಸಹ ದಾಖಲಿಸಬಹುದು. ಮಾಡಿದ ತಪ್ಪಿಗೆ ಆತ ಜೈಲುಪಾಲಾಗುವ ಸಾಧ್ಯತೆಯೂ ಇರುತ್ತದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ