ಭಾರತೀಯ ಸಂವಿಧಾನ ದಿನದ ಮಹತ್ವ

       

Last Updated : Nov 27, 2017, 10:06 AM IST
ಭಾರತೀಯ ಸಂವಿಧಾನ ದಿನದ ಮಹತ್ವ title=

ಭಾರತ ಸಂವಿಧಾನವು ಜಗತ್ತಿನಲ್ಲಿನ ಅತಿ ದೊಡ್ಡ ಸಂವಿಧಾನ ಎಂದು ಹೇಳಲಾಗುತ್ತದೆ. ಇದು ಸದ್ಯ 448 ವಿಧಿಗಳು  12 ಪರಿಚ್ಛೇದಗಳು 101 ತಿದ್ದುಪಡಿಗಳನ್ನು ಹೊಂದಿದೆ. ಇಂತಹ ಬೃಹತ್ ಸಂವಿಧಾನವು ಜನೆವರಿ 26 1950 ರಂದು ಇದನ್ನು ಜಾರಿಗೆ ತರಲಾಯಿತು. ಆ ದಿನವನ್ನು ಗಣರಾಜ್ಯ ದಿನ ಎಂದು ಗೊಷಿಸಲಾಯಿತು.

ಆದರೆ ಇದಕ್ಕೂ ಮುಂಚೆ ನವಂಬರ್ 26 ರಂದು ಸಂಸತ್ತಿನ ಶಾಸನ ಸಭೆಯಲ್ಲಿ ಅಂಬೇಡ್ಕರರು ಸಂವಿಧಾನವನ್ನು ಮಂಡಿಸಿ ಮಾತನಾಡಿದ ದಿನವನ್ನೇ ಈಗ ಸಂವಿಧಾನದ ದಿನ ಎಂದು ಆಚರಿಸಲಾಗುತ್ತಿದೆ. ಅಂಬೇಡ್ಕರರವರು ಅಂದು ನವಂಬರ್ 26ರಂದು  ಶಾಸನ ಸಭೆಯಲ್ಲಿ ಮಾತನಾಡುತ್ತಾ "ಜನವರಿ 26, 1950ರಂದು ನಾವು ವೈರುಧ್ಯಗಳ ಬದುಕಿಗೆ ಕಾಲಿಡಲಿದ್ದೇವೆ.‌ ರಾಜಕೀಯದಲ್ಲಿ, ನಮಗೆ ಸಮಾನತೆಯಿರುತ್ತದೆ ಆದರೆ ಸಾಮಾಜಿಕ ಹಾಗೂ ಆರ್ಥಿಕ ಸಂರಚನೆಗಳಲ್ಲಿ ಅಸಮಾನತೆಯಿರುತ್ತದೆ; ಒಬ್ಬ ಮನುಷ್ಯ ಒಂದು ಮೌಲ್ಯ ಎಂಬ ತತ್ವವನ್ನು ನಿರಾಕರಿಸುತ್ತಲೇ ಹೋಗುತ್ತಿರುತ್ತೇವೆ. ಈ ವೈರುಧ್ಯಗಳ ಬದುಕನ್ನು ಎಷ್ಟು ದಿನ ಹೀಗೇ ಮುಂದುವರೆಸಿಕೊಂಡು ಹೋಗುತ್ತೇವೆ? ನಮ್ಮ ಸಾಮಾಜಿಕ ಮತ್ತು ಆರ್ಥಿಕ ಬದುಕಿನಲ್ಲಿ ಸಮಾನತೆಯ ನಿರಾಕರಣೆಯನ್ನು ಎಷ್ಟು ದಿನ ಹೀಗೇ ಮುಂದುವರೆಸುತ್ತೇವೆ? ಬಹಳ ಕಾಲ ಹೀಗೇ ಇದು ಮುಂದುವರೆಯಿತೆಂದರೆ ನಾವು ನಮ್ಮ ರಾಜಕೀಯ ಪ್ರಜಾಪ್ರಭುತ್ವವನ್ನೇ ತೊಂದರೆಗೆ ಸಿಲುಕಿಸುತ್ತಿದ್ದೇವೆ ಎಂದೇ ಅರ್ಥ. ನಾವು ಆದಷ್ಟು ಬೇಗನೇ ಈ ವೈರುಧ್ಯವನ್ನು ನಿವಾರಿಸಿಕೊಳ್ಳಬೇಕು. ಇಲ್ಲವಾದರೆ ಅಸಮಾನತೆಯಿಂದ ನರಳುತ್ತಿರುವವರು ಈ ಸಂವಿಧಾನ ರಚನಾ ಸಭೆಯು ಇಷ್ಟು ಶ್ರಮವಹಿಸಿ ಕಟ್ಟಿರುವ ಪ್ರಜಾಪ್ರಭುತ್ವದ ಸೌಧವನ್ನೇ ಪುಡಿಗಟ್ಟಿಬಿಡುತ್ತಾರಷ್ಟೆ" ಎನ್ನುವ ಎಚ್ಚರಿಕೆಯನ್ನು ಅಂಬೇಡ್ಕರ್ ರವರು ಶಾಸನ ಸಭೆಯ ಮುಂದೆ ಇಡುತ್ತಾರೆ. 

ಆದ್ದರಿಂದ ಸರ್ಕಾರವು ಈ ದಿನವನ್ನು ಸ್ಮರಣಿಯ ಗೊಳಿಸುವ ಸಲುವಾಗಿ  ಭಾರತ ಸರ್ಕಾರವು 2015 ರಲ್ಲಿ  ಅಂಬೇಡ್ಕರರ 125ನೇ ಜನ್ಮೊತ್ಸವದ ಆಚರಣೆಯ ಸಂಧರ್ಭದಲ್ಲಿ  ನವಂಬರ್ 19 ರಂದು ತನ್ನ ಗೆಜೆಟ್ನಲ್ಲಿ ನವಂಬರ್ 26 ನ್ನು ಸಂವಿಧಾನ ದಿವಸ್ ಎಂದು ಪ್ರಕಟಣೆಯನ್ನು ಹೊರಡಿಸಿತು.ಅಂದಿನಿಂದ ಇದನ್ನು ಸಂವಿಧಾನದ ಮಹತ್ವ ಮತ್ತು ಅಂಬೇಡ್ಕರರ ವಿಚಾರಧಾರೆಗಳನ್ನು ಜನರಲ್ಲಿ ಬಿತ್ತುವ ನಿಟ್ಟಿನಲ್ಲಿ ಈ ದಿನವನ್ನು ಸರ್ಕಾರ ಅಧಿಕೃತವಾಗಿ ಆಚರಿಸುತ್ತಾ ಬರುತ್ತಿದೆ.ಇದಕ್ಕೂ ಮೊದಲು ಈ ದಿನವನ್ನು ಕಾನೂನು ದಿನ ಎಂದು ಸಹ ಆಚರಿಸಲಾಗುತಿತ್ತು.

ಪ್ರಧಾನಿ ಮೋದಿಯವರು 2015 ರ ಅಂಬೇಡ್ಕರ್ ರವರ ವರ್ಷಪೂರ್ತಿ ಆಚರಣೆಗೆ ಚಾಲನೆಯನ್ನು  ಮುಂಬೈನ ಇಂದು ಮಿಲ್ಸ್ ಕಂಪೌಂಡ್ ನಲ್ಲಿ ಅವರ ಸ್ಮಾರಕ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿಸುವದರ ಮೂಲಕ  ಚಾಲನೆ ನೀಡಿದರು . ಈ ದಿನದಂದು ಸರ್ಕಾರವು ಪ್ರತಿ ಶಾಲಾ ಕಾಲೇಜುಗಳಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ವಿಧ್ಯಾರ್ಥಿಗಳಿಗೆ ಓದಿಸಲಾಗುತ್ತದೆ. 

Trending News