ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಕ್ಷೇತ್ರಗಳ ಗಡಿ ನಿರ್ಧಾರದ ಬಗ್ಗೆ ದೆಹಲಿಯಲ್ಲಿ ಚುನಾವಣಾ ಆಯೋಗದ ಮಹತ್ವದ ಸಭೆ ನಡೆಯುತ್ತಿದೆ. ಸಭೆಯಲ್ಲಿ ಮುಖ್ಯ ಚುನಾವಣಾ ಆಯುಕ್ತರು ಸೇರಿದಂತೆ ಹಲವಾರು ಅಧಿಕಾರಿಗಳು ಉಪಸ್ಥಿತರಿದ್ದಾರೆ. ಡಿಲಿಮಿಟೇಶನ್ ಕುರಿತ ಸಭೆಯಲ್ಲಿ ಇಬ್ಬರು ಚುನಾವಣಾ ಆಯುಕ್ತರು ಹಾಜರಾಗಿದ್ದಾರೆ.


COMMERCIAL BREAK
SCROLL TO CONTINUE READING

ಆಗಸ್ಟ್ 5 ರಂದು ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಮಸೂದೆ 2019 ಅನ್ನು ರಾಜ್ಯಸಭೆಯಲ್ಲಿ ಅಂಗೀಕರಿಸಿತು. ನಂತರ ಮಸೂದೆಯನ್ನು ಮರುದಿನ ಆಗಸ್ಟ್ 6 ರಂದು ಲೋಕಸಭೆಯಲ್ಲಿ ಅಂಗೀಕರಿಸಲಾಯಿತು. 


ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಅನುಚ್ಛೇದ 370 ಮತ್ತು 35 ಎ ರದ್ದುಗೊಳಿಸಿ ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ 2019 ಮಸೂದೆಯನ್ನು ಮಂಡಿಸಿತು. ಈ ಮಸೂದೆಯ ಪ್ರಕಾರ, ಜಮ್ಮು ಮತ್ತು ಕಾಶ್ಮೀರವು ಈಗ ವಿಧಾನಸಭೆ ಹೊಂದಿರುವ ಕೇಂದ್ರಾಡಳಿತ ಪ್ರದೇಶದ ಸ್ಥಾನಮಾನವನ್ನು ಹೊಂದಿರುತ್ತದೆ.  ಲಡಾಖ್ ವಿಧಾನಸಭೆ ಇಲ್ಲದ ಕೇಂದ್ರಾಡಳಿತ ಪ್ರದೇಶವಾಗಿದೆ.


ಜಮ್ಮು ಮತ್ತು ಕಾಶ್ಮೀರ ಪ್ರಸ್ತುತ ರಾಷ್ಟ್ರಪತಿಗಳ ಆಡಳಿತದಲ್ಲಿದೆ. 2018 ರ ಜೂನ್‌ನಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ನಡುವಿನ ಮೈತ್ರಿ ಪತನದ ನಂತರ ನವೆಂಬರ್ 2018 ರಂದು ಜಮ್ಮು-ಕಾಶ್ಮೀರ ರಾಜ್ಯ ವಿಧಾನಸಭೆಯನ್ನು ವಿಸರ್ಜಿಸಲಾಯಿತು. ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ ಈ ವರ್ಷದ ಕೊನೆಯಲ್ಲಿ ನಡೆಯಲಿದೆ ಎಂದು ಚುನಾವಣಾ ಆಯೋಗ ಜೂನ್‌ನಲ್ಲಿ ತಿಳಿಸಿತ್ತು.


ಇದೀಗ ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಅನುಚ್ಛೇದ 370 ಮತ್ತು 35 ಎ ರದ್ದುಗೊಳಿಸಿದೆ. ಈ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದ ಗಡಿ ನಿರ್ಧಾರದ ಬಗ್ಗೆ  ಚುನಾವಣಾ ಆಯೋಗದ ಇಂದಿನ ಸಭೆ ಮಹತ್ವದಾಗಿದೆ.