Nitish Meets Kejriwal: ಒಂದೇ ತಿಂಗಳಿನಲ್ಲಿ 2ನೇ ಬಾರಿಗೆ ದೆಹಲಿ ಸಿಎಂ ಕೆಜ್ರಿವಾಲ್ ಅವರನ್ನು ಭೇಟಿಯಾದ ನಿತೀಶ್
Nitish Kumar Meets Aravind Kejriwal: ಕರ್ನಾಟಕದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ ಒಂದು ದಿನದ ನಂತರ ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಿಹಾರ ಸಿಎಂ ನಿತಿಶ್ ಕುಮಾರ್ ಭೇಟಿ ನಡೆಸಿ ಮಾತುಕತೆ ನಡೆಸಿದ್ದಾರೆ.
Bihar CM Meets Delhi CM Twice: ಕೇಂದ್ರದ ಬಿಜೆಪಿ ನೇತೃತ್ವದ ಸರಕಾರದ ವಿರುದ್ಧ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಯತ್ನದ ಭಾಗವಾಗಿ ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿಯು ನಾಯಕ ನಿತೀಶ್ ಕುಮಾರ್ ಅವರು ಭಾನುವಾರ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ದೆಹಲಿ ಮುಖ್ಯಮಂತ್ರಿಯನ್ನು ಭೇಟಿಯಾಗಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರ ಸಿವಿಲ್ ಲೈನ್ಸ್ ನಿವಾಸದಲ್ಲಿ ನಿತಿಶ್ ಅವರನ್ನು ಭೇಟಿಯಾಗಿದ್ದಾರೆ. ಕಳೆದ ಒಂದು ತಿಂಗಳಲ್ಲಿ ನಿತೀಶ್ ಮತ್ತು ಕೇಜ್ರಿವಾಲ್ ನಡುವೆ ನಡೆದ ಎರನಡೆ ಭೇಟಿ ಇದಾಗಿದೆ.
ಬೆಂಗಳೂರಿನಲ್ಲಿ ನಡೆದ ಕರ್ನಾಟಕದ ನೂತನ ಕಾಂಗ್ರೆಸ್ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರಮಾಣ ವಚನ ಸಮಾರಂಭದಲ್ಲಿ ಬಿಹಾರ ಮುಖ್ಯಮಂತ್ರಿ ಭಾಗವಹಿಸಿದ ಒಂದು ದಿನದ ನಂತರ ಈ ಸಭೆ ನಡೆದಿದೆ. ಸುಪ್ರೀಂ ಕೋರ್ಟ್‌ನ ತೀರ್ಪು ಸರಿಯಾಗಿದೆ, ಆದರೆ ಕೇಂದ್ರ ಸರ್ಕಾರವು ಮಾಡಲು ಪ್ರಯತ್ನಿಸುತ್ತಿರುವುದು ವಿಚಿತ್ರವಾಗಿದೆ ಎಂದು ನಿತೀಶ್ ಕುಮಾರ್ ಈ ಸಂದರ್ಭದಲ್ಲಿ ಕೇಜ್ರಿವಾಲ್ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಹೀಗಾಗಿ ಎಲ್ಲರೂ ಒಂದಾಗಬೇಕಿದೆ. ನಾವು ಕೇಜ್ರಿವಾಲ್ ಜೊತೆಗಿದ್ದೇವೆ ಎಂಬ ಸಂದೇಶವನ್ನು ನೀಡಿದ್ದಾರೆ. ಇದಕ್ಕಾಗಿ ಗರಿಷ್ಠ ಸಂಖ್ಯೆಯಲ್ಲಿ ವಿರೋಧ ಪಕ್ಷಗಳು ಒಟ್ಟಾಗಿ ಪ್ರಚಾರ ನಡೆಸಬೇಕಾಗುತ್ತದೆ. ನಾವು ಸಂಪೂರ್ಣವಾಗಿ ಕೇಜ್ರಿವಾಲ್ ಜೊತೆಗಿದ್ದೇವೆ ಎಂದು ಅವರು ಹೇಳಿದ್ದಾರೆ.
ಸುಪ್ರೀಂ ಕೋರ್ಟ್‌ನ ಆದೇಶವನ್ನು ತಿರಸ್ಕರಿಸಿ ಕೇಂದ್ರದಿಂದ ಸುಗ್ರೀವಾಜ್ಞೆ ತರುವ ವಿಷಯದಲ್ಲಿ ದೆಹಲಿಯ ಜನರೊಂದಿಗೆ ನಿಲ್ಲುವುದಾಗಿ ಹೇಳಿದ್ದಾರೆ ಎಂದಿದ್ದಾರೆ. ಕೇಂದ್ರವು ಈ ಸುಗ್ರೀವಾಜ್ಞೆಯನ್ನು ವಿಧೇಯಕ ರೂಪದಲ್ಲಿ ತಂದರೆ ಬಿಜೆಪಿಯೇತರ ಪಕ್ಷಗಳೆಲ್ಲ ಒಗ್ಗೂಡಿದರೆ ರಾಜ್ಯಸಭೆಯಲ್ಲಿ ಅದನ್ನು ಸೋಲಿಸಬಹುದು. ಹೀಗಾದರೆ 2024ರಲ್ಲಿ ಬಿಜೆಪಿ ಸರಕಾರವೇ ಹೊರಬೀಳಲಿದೆ ಎಂಬ ಸಂದೇಶ ರವಾನೆಯಾಗಲಿದೆ.
ಇದನ್ನೂ ಓದಿ-Mehbooba Mufti: ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ಮರುಸ್ಥಾಪನೆಯಾಗುವವರೆಗೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ
ಅರವಿಂದ್ ಕೇಜ್ರಿವಾಲ್ ಎದುರಿಸುತ್ತಿರುವ ಸಮಸ್ಯೆಗಳ ವಿರುದ್ಧ ನಾವು ಕೇಜ್ರಿವಾಲ್ ಅವರನ್ನು ಬೆಂಬಲಿಸಲು ಬಂದಿದ್ದೇವೆ ಎಂದು ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಹೇಳಿದ್ದಾರೆ. ದೆಹಲಿಯಲ್ಲಿ ಬಿಜೆಪಿ ಸರ್ಕಾರ ಇದ್ದಿದ್ದರೆ ಲೆಫ್ಟಿನೆಂಟ್ ಗವರ್ನರ್ ಗೆ ಇಂತಹ ಕೆಲಸ ಮಾಡುವ ಧೈರ್ಯ ಇತ್ತಾ? ದೆಹಲಿಯಲ್ಲಿ ಬಿಜೆಪಿ ಮತ್ತೆ ಬರುವುದಿಲ್ಲ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ-Parliament Building: 'ರಾಷ್ಟ್ರಪತಿಗಳೇ ಹೊಸ ಸಂಸತ್ತಿನ ಕಟ್ಟಡ ಉದ್ಘಾಟಿಸಬೇಕು'
2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಎಲ್ಲಾ ವಿರೋಧ ಪಕ್ಷಗಳನ್ನು ಒಟ್ಟುಗೂಡಿಸುವ ಪ್ರಯತ್ನದ ಭಾಗವಾಗಿ ಬಿಹಾರ ಮುಖ್ಯಮಂತ್ರಿ ಏಪ್ರಿಲ್ 12 ರಂದು ಕೇಜ್ರಿವಾಲ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದರು. ಈ ಸಂದರ್ಭದಲ್ಲಿ, ಕೇಜ್ರಿವಾಲ್ ನಿತೀಶ್ ಅವರ ಪ್ರಯತ್ನಗಳನ್ನು ಶ್ಲಾಘಿಸಿದರು ಮತ್ತು ಅದಕ್ಕೆ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದರು.
ಇದನ್ನೂ ನೋಡಿ-
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ