ಮೇವು ಹಗರಣದ ನಾಲ್ಕನೇ ಪ್ರಕರಣದಲ್ಲೂ ಲಾಲು ದೋಷಿ, 7 ವರ್ಷ ಜೈಲು
ಮೇವು ಹಗರಣದ ನಾಲ್ಕನೇ ಪ್ರಕರಣದಲ್ಲಿ ವಿಶೇಷ ಸಿಬಿಐ ನ್ಯಾಯಾಲಯ ಲಾಲೂ ಪ್ರಸಾದ್ ಯಾದವ್ ಅವರನ್ನು ಅಪರಾಧಿಯೆಂದು ತೀರ್ಪು ನೀಡಿದೆ.
ರಾಂಚಿ: ಮೇವು ಹಗರಣದ ನಾಲ್ಕನೇ ಪ್ರಕರಣದಲ್ಲೂ RJD ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರನ್ನು ದೋಷಿ ಎಂದು ರಾಂಚಿಯ ವಿಶೇಷ ಸಿಬಿಐ ನ್ಯಾಯಾಲಯವು ತೀರ್ಪು ನೀಡಿದ್ದು 7 ವರ್ಷ ಜೈಲು ಹಾಗೂ 30 ಲಕ್ಷ ದಂಡ ವಿಧಿಸಿದೆ.
ಮೇವು ಹಗರಣದ ನಾಲ್ಕನೇ ಪ್ರಕರಣದಲ್ಲಿ ಬಿಹಾರ ಮಾಜಿ ಮುಖ್ಯಮಂತ್ರಿ ಜಗನ್ನಾಥ ಮಿಶ್ರಾ ಅವರನ್ನು ಖುಲಾಸೆಗೊಳಿಸಿ, RJD ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ದೋಷಿ ಎಂದು ಸೋಮವಾರ(ಮಾರ್ಚ್ 19)ದಂದು ತೀರ್ಪು ನೀಡಿದ್ದ ವಿಶೇಷ ಸಿಬಿಐ ನ್ಯಾಯಾಲಯವು ಇಂದು ಶಿಕ್ಷೆ ಪ್ರಮಾಣ ಪ್ರಕಟಿಸಿದೆ.
1990ರಲ್ಲಿ ಲಾಲು ಪ್ರಸಾದ್ ಯಾದವ್ ಬಿಹಾರದ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಧುಮ್ಕಾ ಖಜಾನೆಯಿಂದ 3.13 ಕೋಟಿ ರೂ. ಹಣವನ್ನು ಅಕ್ರಮವಾಗಿ ವರ್ಗಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಲುಗೆ 7 ವರ್ಷ ಜೈಲು ಹಾಗೂ 30 ಲಕ್ಷ ದಂಡ ವಿಧಿಸಲಾಗಿದೆ.