ನೂತನ ಸಂಸತ್ ಭವನ ಉದ್ಘಾಟನೆ: ಸುಪ್ರೀಂಕೋರ್ಟ್ ನಿಂದ ಪಿಐಎಲ್ ಅರ್ಜಿ ವಿಚಾರಣೆ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ನೂತನ ಸಂಸತ್ ಭವನವನ್ನು ಉದ್ಘಾಟಿಸಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಸಲ್ಲಿಸಿದ ಗಂಟೆಗಳ ನಂತರ, ನ್ಯಾಯಾಲಯವು ಶುಕ್ರವಾರದಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಆಲಿಸಲು ನಿರ್ಧರಿಸಿದೆ.
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ನೂತನ ಸಂಸತ್ ಭವನವನ್ನು ಉದ್ಘಾಟಿಸಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಸಲ್ಲಿಸಿದ ನಂತರ, ನ್ಯಾಯಾಲಯವು ಶುಕ್ರವಾರದಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಆಲಿಸಲು ನಿರ್ಧರಿಸಿದೆ.
ನ್ಯಾಯಮೂರ್ತಿ ಜೆ.ಕೆ.ಮಹೇಶ್ವರಿ ಮತ್ತು ನ್ಯಾಯಮೂರ್ತಿ ಪಿ.ಎಸ್.ನರಸಿಂಹ ಅವರ ಪೀಠವು ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ನಡೆಸಲಿದೆ.
ಸರ್ವೋಚ್ಚ ನ್ಯಾಯಾಲಯದ ವಕೀಲ ಸಿಆರ್ ಜಯ ಸುಕಿನ್ ಅವರು ಸಲ್ಲಿಸಿದ ಅರ್ಜಿಯಲ್ಲಿ, ರಾಷ್ಟ್ರಪತಿಯನ್ನು ಉದ್ಘಾಟನೆಗೆ ಸೇರಿಸದೆ ಕೇಂದ್ರ ಸರ್ಕಾರವು ಭಾರತದ ಸಂವಿಧಾನವನ್ನು ಉಲ್ಲಂಘಿಸಿದೆ ಎಂದು ಹೇಳಿದೆ.ಸಂಸತ್ತು ಭಾರತದ ಸರ್ವೋಚ್ಚ ಶಾಸಕಾಂಗ ಸಂಸ್ಥೆಯಾಗಿದ್ದು, ಇದು ರಾಷ್ಟ್ರಪತಿ ಮತ್ತು ಎರಡು ಸದನಗಳನ್ನು ಒಳಗೊಂಡಿದೆ ಅರ್ಜಿಯಲ್ಲಿ ಹೇಳಲಾಗಿದೆ.
ಇದನ್ನೂ ಓದಿ- 1980ರ ದಶಕದ ಎಚ್‌ಜಿಯು-55/ಪಿ ಹೆಲ್ಮೆಟ್‌ಗೆ ಮುಕ್ತಿ: ಈಗಾಗಲೇ ಲಗ್ಗೆಯಿಟ್ಟಿವೆ 4+ ತಲೆಮಾರಿನ ಮಿಲಿಟರಿ ಪೈಲಟ್ ಹೆಲ್ಮೆಟ್‌ಗಳು
ಯಾವುದೇ ಸದನವನ್ನು ಕರೆಯುವ ಮತ್ತು ಮುಂದೂಡುವ ಅಧಿಕಾರದ ಜೊತೆಗೆ ಸಂಸತ್ತು ಅಥವಾ ಲೋಕಸಭೆಯನ್ನು ವಿಸರ್ಜಿಸುವ ಅಧಿಕಾರ ರಾಷ್ಟ್ರಪತಿಗಳಿಗೆ ಇದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.ಕೇಂದ್ರ ಸರ್ಕಾರ ರಾಷ್ಟ್ರಪತಿಯವರನ್ನು ಉದ್ಘಾಟನಾ ಸಮಾರಂಭಕ್ಕೆ ಆಹ್ವಾನಿಸದಿರುವುದು ಅನುಚಿತ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.ರಾಷ್ಟ್ರಪತಿಗಳು ಸಂಸತ್ತಿನ ಅವಿಭಾಜ್ಯ ಅಂಗ. ಶಿಲಾನ್ಯಾಸ ಸಮಾರಂಭದಿಂದ ರಾಷ್ಟ್ರಪತಿಯವರನ್ನು ದೂರವಿಟ್ಟಿದ್ದು ಏಕೆ? ಈಗ ಉದ್ಘಾಟನಾ ಸಮಾರಂಭಕ್ಕೆ ರಾಷ್ಟ್ರಪತಿಗಳನ್ನು ಆಹ್ವಾನಿಸದೆ ಇರುವ ನಿರ್ಧಾರ ಸೂಕ್ತವಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ- ಇಸ್ರೇಲ್, ಪೋಲೆಂಡ್‌ಗಳ ಸ್ಪರ್ಧೆಯನ್ನು ಮಣಿಸಲಿವೆ ನಿಖರ ಡ್ರೋನ್‌ಗಳು
ಕಾಂಗ್ರೆಸ್, ಟಿಎಂಸಿ, ಎಎಪಿ, ಎಐಎಂಐಎಂ ಮತ್ತು ಜೆಡಿಯು ಸೇರಿದಂತೆ 20 ವಿರೋಧ ಪಕ್ಷಗಳು ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ನೂತನ ಸಂಸತ್ ಭವನದ ಉದ್ಘಾಟನೆಯನ್ನು ಬಹಿಷ್ಕರಿಸುವುದಾಗಿ ಹೇಳಿದ ನಂತರ ಈ ಬೆಳವಣಿಗೆ ನಡೆದಿದೆ.ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅವರು ಮೇ 28 ರಂದು ಹೊಸ ಸಂಸತ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.