ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ (Ram Mandir) ನಿರ್ಮಾಣಕ್ಕಾಗಿ ಸ್ಥಾಪಿಸಲಾಗಿರುವ 'ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್' ಗೆ ದೇಣಿಗೆ ನೀಡುವವರಿಗೆ ಆದಾಯ ತೆರಿಗೆ ವಿನಾಯಿತಿ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಈ ಸಂಬಂಧ ಕೇಂದ್ರ ಹಣಕಾಸು ಸಚಿವಾಲಯ ಶುಕ್ರವಾರ ತಡರಾತ್ರಿ ಅಧಿಸೂಚನೆ ಹೊರಡಿಸಿದ್ದು ರಾಮ ಮಂದಿರ ಟ್ರಸ್ಟ್‌ಗೆ ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80 ಜಿ ಅಡಿಯಲ್ಲಿ ದೇಣಿಗೆ ನೀಡಿದವರಿಗೆ ಕೇಂದ್ರೀಯ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ಪರಿಹಾರ ನೀಡಿದೆ. ಕೇಂದ್ರ ಹಣಕಾಸು ಸಚಿವಾಲಯವು 'ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್' ಅನ್ನು ಐತಿಹಾಸಿಕ ಪ್ರಾಮುಖ್ಯತೆ ಮತ್ತು ಸಾರ್ವಜನಿಕ ಪೂಜಾ ಸ್ಥಳವೆಂದು ಹೆಸರಿಸಿದೆ. ಈ ಟ್ರಸ್ಟ್‌ಗೆ ದೇಣಿಗೆ ನೀಡುವ ದಾನಿಗಳು 2020-21ನೇ ಸಾಲಿನಿಂದ ತೆರಿಗೆ ವಿನಾಯಿತಿ ಪಡೆಯುತ್ತಾರೆ.
ಆದಾಯ ತೆರಿಗೆ (Income Tax) ಕಾಯ್ದೆಯ ಸೆಕ್ಷನ್ 80 ಜಿ ಅಡಿಯಲ್ಲಿ ಸರ್ಕಾರದ ಪರಿಹಾರ ನಿಧಿಗಳು, ದೇಣಿಗೆ ಸೇರಿದಂತೆ ಯಾವುದೇ ಸಾಮಾಜಿಕ, ರಾಜಕೀಯ ಮತ್ತು ಸಾರ್ವಜನಿಕ ಕಲ್ಯಾಣ ಸಂಸ್ಥೆಗಳು ತೆರಿಗೆ ವಿನಾಯಿತಿ ಪಡೆಯಲು ಅರ್ಹವಾಗಿವೆ. ಆದರೆ ತೆರಿಗೆಯಲ್ಲಿನ ಈ ವಿನಾಯಿತಿ ಪ್ರತಿ ದೇಣಿಗೆಗೆ ಒಂದೇ ಆಗಿರುವುದಿಲ್ಲ ಆದರೆ ಕೆಲವು ನಿಯಮಗಳು ಮತ್ತು ಷರತ್ತುಗಳ ಪ್ರಕಾರ ವಿನಾಯಿತಿ ಲಭ್ಯವಾಗಲಿದೆ.
ಕಳೆದ ವರ್ಷ ನವೆಂಬರ್ 9 ರಂದು ಸುಪ್ರೀಂ ಕೋರ್ಟ್ ವಿವಾದಿತ ಭೂಮಿಯನ್ನು ಹಿಂದೂ ಕಡೆಯವರಿಗೆ ಹಸ್ತಾಂತರಿಸಿ ಬಾಬರಿ ಮಸೀದ-ರಾಮ ಜನ್ಮಭೂಮಿ ವಿವಾದದಲ್ಲಿ ಐತಿಹಾಸಿಕ ತೀರ್ಪು ನೀಡಿದೆ. ಆದರೆ ಮಸೀದಿ ನಿರ್ಮಾಣಕ್ಕಾಗಿ ಅಯೋಧ್ಯೆಯ ಪ್ರಮುಖ ಸ್ಥಳದಲ್ಲಿ 5 ಎಕರೆ ಜಮೀನನ್ನು ನೀಡುವಂತೆ ಸರ್ಕಾರ ನಿರ್ದೇಶನ ನೀಡಿತ್ತು. 3 ತಿಂಗಳೊಳಗೆ ದೇವಾಲಯ ನಿರ್ಮಾಣಕ್ಕಾಗಿ ಟ್ರಸ್ಟ್ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶಿಸಿತ್ತು. ತೀರ್ಪಿಗೆ ಅನುಗುಣವಾಗಿ ಕೇಂದ್ರ ಸರ್ಕಾರ ಫೆಬ್ರವರಿ 8 ರಂದು 'ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್' ಅನ್ನು ರಚಿಸಿತು.