COVID-19 ಏರಿಕೆ: ಉತ್ತರ ಪ್ರದೇಶದಲ್ಲಿ ಏಪ್ರಿಲ್ 30 ರವರೆಗೆ ಶಾಲೆಗಳು ಬಂದ್
ಏಪ್ರಿಲ್ 30 ರವರೆಗೆ 1 ರಿಂದ 12 ನೇ ತರಗತಿಗಳವರೆಗೆ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳು ಮತ್ತು ರಾಜ್ಯದ ಇತರ ಶಿಕ್ಷಣ ಸಂಸ್ಥೆಗಳನ್ನು ತೆರೆಯದಂತೆ ಉತ್ತರ ಪ್ರದೇಶ ಸರ್ಕಾರ ಭಾನುವಾರ (ಏಪ್ರಿಲ್ 11) ಆದೇಶ ಹೊರಡಿಸಿದೆ.
ಲಕ್ನೋ: ರಾಜ್ಯದಲ್ಲಿ ದಿನೇ ದಿನೇ ಕರೋನಾವೈರಸ್ ಉಲ್ಬಣಗೊಳ್ಳುತ್ತಿರುವ ಹಿನ್ನಲೆಯಲ್ಲಿ ಏಪ್ರಿಲ್ 30 ರವರೆಗೆ 1 ರಿಂದ 12 ನೇ ತರಗತಿಗಳವರೆಗೆ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳು ಮತ್ತು ರಾಜ್ಯದ ಇತರ ಶಿಕ್ಷಣ ಸಂಸ್ಥೆಗಳನ್ನು ತೆರೆಯದಂತೆ ಉತ್ತರ ಪ್ರದೇಶ ಸರ್ಕಾರ ಭಾನುವಾರ (ಏಪ್ರಿಲ್ 11) ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಒಂದೇ ದಿನದಲ್ಲಿ ಅತಿಹೆಚ್ಚು ಅಂದರೆ 15,353 ಹೊಸ ಕೋವಿಡ್-19 (COVID-19) ಪ್ರಕರಣಗಳು ವರದಿಯಾದ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಅದಾಗ್ಯೂ ರಾಜ್ಯ ಸರ್ಕಾರವು ವೇಳಾಪಟ್ಟಿಯ ಪ್ರಕಾರ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಹೇಳಿದ್ದು, ಎಲ್ಲಾ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗಳು ಆಯಾ ಸಂಸ್ಥೆಗಳ ನಿಯಮಗಳಿಗೆ ಅನುಸಾರವಾಗಿ ಕರ್ತವ್ಯಕ್ಕೆ ಹಾಜರಾಗಬಹುದು ಎಂದು ಹೇಳಲಾಗಿದೆ.
ಇದನ್ನೂ ಓದಿ - School Reopen : ಇನ್ನು ಎಲ್ಲಾ ವಿದ್ಯಾರ್ಥಿಗಳಿಗೂ ಸಿಗಲಿದೆ ಉಚಿತ ಕನ್ನಡಕ.!
ರಾಜ್ಯದಲ್ಲಿ ಭಾನುವಾರ 15,353 ಹೊಸ ಕೋವಿಡ್-19 ಸೋಂಕುಗಳು ವರದಿಯಾಗಿದ್ದು, ಉತ್ತರ ಪ್ರದೇಶದಲ್ಲಿ ಭಾನುವಾರದ ಹೊತ್ತಿಗೆ ಒಟ್ಟು ಕರೋನಾವೈರಸ್ (Coronavirus) ಸೋಂಕಿತರ ಸಂಖ್ಯೆ 6,92,092 ಕ್ಕೆ ಏರಿದೆ. ರಾಜ್ಯದಲ್ಲಿ ಸಕ್ರಿಯ COVID-19 ಪ್ರಕರಣಗಳು 71,241 ರಷ್ಟಿದ್ದರೆ, ಈವರೆಗೆ 6,11,622 ರೋಗಿಗಳು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಏತನ್ಮಧ್ಯೆ, ಕರೋನಾವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರವು ಎಲ್ಲಾ ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಕೂಡ ಜಾರಿಗೆ ತಂದಿದೆ.
ಇದನ್ನೂ ಓದಿ - UK School: ವಿಚಿತ್ರ ವಾರ್ನಿಂಗ್! 'ಮಕ್ಕಳ ತಾಯಂದಿರರು ಶಾಲೆಯಲ್ಲಿ ತುಂಡುಡುಗೆ ಧರಿಸುವಂತಿಲ್ಲ'
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಪತ್ತೆಯಾಗಿರುವ ಒಟ್ಟು 152,879 ಪ್ರಕರಣಗಳಲ್ಲಿ ಶೇ 81 ರಷ್ಟು ಕೊಡುಗೆ ನೀಡಿದ ಹತ್ತು ರಾಜ್ಯಗಳಲ್ಲಿ ಉತ್ತರ ಪ್ರದೇಶ ಕೂಡ ಒಂದಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.
ಉತ್ತರ ಪ್ರದೇಶ ಮಾತ್ರವಲ್ಲದೆ ಬಿಹಾರ, ಜಾರ್ಖಂಡ್, ಛತ್ತೀಸ್‌ಗಢ, ದೆಹಲಿ, ರಾಜಸ್ಥಾನ, ಹಿಮಾಚಲ ಪ್ರದೇಶ ಮತ್ತು ಇತರ ರಾಜ್ಯಗಳೂ ಕೂಡ ಕೊರೋನಾವೈರಸ್ ಹಿನ್ನಲೆಯಲ್ಲಿ ಎಪ್ರಿಲ್ ಅಂತ್ಯದವರೆಗೆ ಶಾಲೆಗಳನ್ನು ಮುಚ್ಚುವಂತೆ ಆದೇಶಿಸಿವೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.