ದೆಹಲಿ : ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕರೋನಾ ಸೋಂಕಿತರ (Coronavirus) ಸಂಖ್ಯೆ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ದೆಹಲಿಯಲ್ಲಿ ಭಾನುವಾರ 10 ಸಾವಿರಕ್ಕೂ ಹೆಚ್ಚು ಹೊಸ ಕರೋನಾ ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಕರೋನಾ ಪ್ರಕರಣಗಳ ಬಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Aravind Kejriwal)ಕಳವಳ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಗಂಭೀರ ಸ್ಥಿತಿಯಿದ್ದು, ಕರೋನಾ ವೈರಸ್ ಹೊಸ ಅಲೆಯು ಹೆಚ್ಚು ಅಪಾಯಕಾರಿಯಾಗಿದೆ ಎಂದವರು ಹೇಳಿದ್ದಾರೆ.
ಕರೋನಾ ವೈರಸ್ (Coronavirus) ವಿರುದ್ಧ ಹೋರಾಡಲು ಲಾಕ್‌ಡೌನ್ ಒಂದೇ ಪರಿಹಾರವಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Aravind Kejriwal)ಅಭಿಪ್ರಾಯಪಟ್ಟಿದ್ದಾರೆ. ಇದೇ ವೇಳೆ ಅಗತ್ಯವಿದ್ದಾಗ ಮಾತ್ರ ಮನೆಯಿಂದ ಹೊರ ಬರುವಂತೆ ಅವರು ಜನತೆಯಲ್ಲಿ ಮನವಿ ಮಾಡಿದ್ದಾರೆ. ಪರಿಸ್ಥಿತಿಯ ಮೇಲೆ ನಿಗಾ ಇಡಲಾಗಿದ್ದು, ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. ರಾಜ್ಯದಲ್ಲಿ ಲಾಕ್‌ಡೌನ್ (Lockdown) ಹಾಕಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. ಆದರೆ ಸರ್ಕಾರ ಕೆಲವು ನಿರ್ಬಂಧಗಳನ್ನು ಜಾರಿಗೆ ತರಲು ಆದೇಶಿಸಿದೆ. ಬಸ್ಸುಗಳು, ಮೆಟ್ರೋ 50% ಸಾಮರ್ಥ್ಯದೊಂದಿಗೆ ಚಲಿಸಲಿದೆ. ಬಾರ್ ಮತ್ತು ರೆಸ್ಟೋರೆಂಟ್‌ಗಳು ಸಹ 50% ಸಾಮರ್ಥ್ಯದೊಂದಿಗೆ ನಡೆಯಲಿದೆ ಎಂದವರು ತಿಳಿಸಿದ್ದಾರೆ.
Check the availability of beds on our app before going to hospitals. Occupy beds only if there is an emergency. I am not in favour of lockdown but shortage of beds and failure in hospital management will leave us with no option: Delhi CM Arvind Kejriwal pic.twitter.com/XhiHloeq6W
— ANI (@ANI) April 11, 2021
ಇದನ್ನೂ ಓದಿ : ವರ ಕೊವಿಡ್ ಪಾಸಿಟಿವ್ : ಆದರೂ ಗೈಡ್ ಲೈನ್ ಪಾಲನೆಯೊಂದಿಗೇ ನೆರವೇರಿತು ವಿವಾಹ
ರಾಷ್ಟ್ರ ರಾಜಧಾನಿಯಲ್ಲಿ ಭಾನುವಾರ COVID-19ನ 10,732 ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಹೇಳಿದರು. ದೆಹಲಿಯಲ್ಲಿ 65% ಕರೋನಾ ರೋಗಿಗಳು 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಾರೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ವ್ಯಾಕ್ಸಿನೇಷನ್ ನಿಂದ (Vaccination) ಮಾತ್ರ ಕರೋನಾವನ್ನು ನಿಯಂತ್ರಿಸಬಹುದು. ಈ ಹಿನ್ನೆಲೆಯಲ್ಲಿ ಕರೋನಾ ಲಸಿಕೆ ಪಡೆದುಕೊಳ್ಳುವ ವಿಚಾರದಲ್ಲಿ ಇರುವ ನಿರ್ಬಂಧಗಳನ್ನು ತೆಗೆದು ಹಾಕುವಂತೆ ಅವರು ಕೇಂದ್ರ ಸರ್ಕಾರಕ್ಕೆ (Central government) ಮನವಿ ಮಾಡಿದ್ದಾರೆ.
ಇದೇ ವೇಳೆ, ಲಸಿಕೆ ಹಾಕಿಸಿದ ನಂತರವೂ ಕರೋನಾ ಸೋಂಕಿಗೆ ಒಳಗಾಗುವ ಬಗ್ಗೆ ಮಾತನಾಡಿ ಕೇಜ್ರಿವಾಲ್, ಲಸಿಕೆ ಹಾಕಿಸಿಕೊಂಡ ನಂತರ ಸೋಂಕು ಕಾಣಿಸಿಕೊಂಡರೆ ಅದು ಮಾರಕವಾಗಿ ಪರಿಣಮಿಸುವುದಿಲ್ಲ ಎಂದು ತಜ್ಞರು ಹೇಳಿದ್ದಾರೆ. ಹಾಗಾಗಿ ಯಾವುದೇ ಆತಂಕಕ್ಕೆ ಒಳಗಾಗದೆ ಲಸಿಕೆ (Vaccine)ಹಾಕಿಸಿಕೊಳ್ಳುವಂತೆ ಜನತೆಯಲ್ಲಿ ಮನವಿ ಮಾಡಿದ್ದಾರೆ. ಲಸಿಕೆ ಹಾಕಿಸಿಕೊಂಡ ನಂತರವೂ ಮಾಸ್ಕ ಬಳಸುವಂತೆಯೂ ಜನರಲ್ಲಿ ವಿನಂತಿಸಿದ್ದಾರೆ.
ಇದನ್ನೂ ಓದಿ : Lockdown: 15 ದಿನ ಲಾಕ್‌ಡೌನ್? ಸಿಎಂ ಇಂದು ಅಂತಿಮ ನಿರ್ಧಾರ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.