ವಾಘಾ: ಕರ್ತಾರ್‌ಪುರ ಕಾರಿಡಾರ್‌ ಯೋಜನೆಗೆ ಇರುವ ಅಡೆತಡೆಗಳು, ತಾಂತ್ರಿಕ
 ಸಮಸ್ಯೆಗಳನ್ನು ಬಗೆಹರಿಸಲು ಭಾರತ ಮತ್ತು ಪಾಕಿಸ್ತಾನದ ಅಧಿಕಾರಿಗಳು ಭಾನುವಾರ ಬೆಳಿಗ್ಗೆ 10 ಗಂಟೆಗೆ ವಾಘಾದಲ್ಲಿ ಸಭೆ ನಡೆಸಲಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.


COMMERCIAL BREAK
SCROLL TO CONTINUE READING

ಕರ್ತಾರ್‌ಪುರ ಕಾರಿಡಾರ್‌ ವಿಷಯಕ್ಕೆ ಸಂಬಂಧಿಸಿದಂತೆ ತಾಂತ್ರಿಕ ತಜ್ಞರ ಸಭೆಯನ್ನು ವಾಘಾದಲ್ಲಿ ಏಪ್ರಿಲ್ 2 ರಂದು ನಡೆಸಲು ಮಾರ್ಚ್ 14ರಂದು ನಡೆದಿದ್ದ ಸಭೆಯಲ್ಲಿ ನಿರ್ಧರಿಸಲಾಗಿತ್ತು. ಇದಕ್ಕೆ ಉಭಯ ದೇಶಗಳ ಅಧಿಕಾರಿಗಳೂ ಸಮ್ಮತಿ ಸೂಚಿಸಿದ್ದರು. ಆದರೆ, ಕಾರಿಡಾರ್‌ಗೆ ಸಂಬಂಧಿಸಿದ ಸಮಿತಿಯಲ್ಲಿ ಪಾಕಿಸ್ತಾನವು 'ಪ್ರತ್ಯೇಕವಾದಿಗಳನ್ನು ಆಯ್ಕೆ ಮಾಡಿರುವುದಕ್ಕೆ' ಭಾರತವು ದೆಹಲಿಯಲ್ಲಿರುವ ಪಾಕಿಸ್ತಾನ ಹೈ ಕಮಿಷನರ್ ಕರೆಸಿ ಆಕ್ಷೇಪಣೆ ಸಲ್ಲಿಸಿದ ಹಿನ್ನೆಲೆಯಲ್ಲಿ ಸಭೆ ಮುಂದೂಡಲಾಗಿತ್ತು.


ಕರ್ತಾರ್‌ಪುರ ಕಾರಿಡಾರ್‌ನ ವಿಧಾನಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಭಾರತ-ಪಾಕಿಸ್ತಾನ ಅಧಿಕಾರಿಗಳ ಎರಡನೇ ಸುತ್ತಿನ ಸಭೆಯ ದಿನಾಂಕ ನಿಗದಿಯಾಗುತ್ತಿದ್ದಂತೆ ಪಾಕಿಸ್ತಾನ ಸಿಖ್ ಗುರುದ್ವಾರ ಪ್ರಬಂದಕ್ ಸಮಿತಿಯಿಂದ ಗೋಪಾಲ್ ಸಿಂಗ್ ಚಾವ್ಲಾ ಅವರನ್ನು ತೆಗೆದುಹಾಕಲಾಗಿದೆ. 


ಸಭೆಯ ಬಳಿಕ ಭಾರತ ಮತ್ತು ಪಾಕಿಸ್ತಾನದ ಅಧಿಕಾರಿಗಳು ಪ್ರತ್ಯೇಕ ಪತ್ರಿಕಾಗೋಷ್ಠಿ ನಡೆಸುವ ನಡೆಸಲಿದ್ದಾರೆ. ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಭೆ ಮುಕ್ತಾಯವಾಗುವ ನಿರೀಕ್ಷೆಯಿದೆ. ಭಾರತೀಯ ನಿಯೋಗದ ನೇತೃತ್ವವನ್ನು ಎಂಹೆಚ್‌ಎಯ ಜಂಟಿ ಕಾರ್ಯದರ್ಶಿ (ಆಂತರಿಕ ಭದ್ರತೆ) ಎಸ್‌.ಸಿ.ಎಲ್. ದಾಸ್ ಮತ್ತು ವಿದೇಶಾಂಗ ಸಚಿವಾಲಯದ ಜಂಟಿ ಕಾರ್ಯದರ್ಶಿ (ಪಿಎಐ - ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಇರಾನ್) ದೀಪಕ್ ಮಿತ್ತಲ್ ವಹಿಸಲಿದ್ದಾರೆ.