Corona Vaccination Free Booster Dose : 18 ವರ್ಷಕ್ಕಿಂತ ಮೇಲ್ಪಟ್ಟ ದೇಶದ ಜನತೆಗೆ ಉಚಿತ ಬೂಸ್ಟರ್ ಡೋಸ್ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟ ಈ ನಿರ್ಧಾರ ಕೈಗೊಂಡಿದೆ. ಇದರಿಂದಾಗಿ ಇಲ್ಲಿಯವರೆಗೆ ಬೂಸ್ಟರ್ ಡೋಸ್ ಲಸಿಕೆ ಪಡೆಯದ ಕೋಟ್ಯಂತರ ಭಾರತೀಯರು ಸಾಕಷ್ಟು ಪ್ರಯೋಜನ ಪಡೆಯಲಿದ್ದಾರೆ.
ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮತ್ತೊಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. ಇಂದು, ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ, 18 ವರ್ಷ ಮೇಲ್ಪಟ್ಟ ದೇಶದ ಎಲ್ಲಾ ಜನರಿಗೆ ಉಚಿತ ಬೂಸ್ಟರ್ ಡೋಸ್ ನೀಡಲು ನಿರ್ಧರಿಸಲಾಗಿದೆ.
ಇದನ್ನೂ ಓದಿ : Mukhtar Abbas Naqvi : 'ನಾನು ಮುಸ್ಲಿಂರಿಗಾಗಿ ಮಾತ್ರ ಕೆಲಸ ಮಾಡುತ್ತೇನೆ ಎಂದು ಪ್ರಮಾಣ ಮಾಡಿಲ್ಲ'
ಸರ್ಕಾರಿ ಆಸ್ಪತ್ರೆಯಲ್ಲಿ ಸಿಗಲಿದೆ ಲಸಿಕೆ
ಜುಲೈ 15 ರಿಂದ ಮುಂದಿನ 75 ದಿನಗಳವರೆಗೆ ಈ ಬೂಸ್ಟರ್ ಡೋಸ್ ಅನ್ನು ಉಚಿತವಾಗಿ ನೀಡಲಾಗುವುದು ಎಂದು ತಿಳಿಸಿದ್ದಾರೆ. ದೇಶದ ಪ್ರತಿಯೊಂದು ಸರ್ಕಾರಿ ಆಸ್ಪತ್ರೆಯಲ್ಲಿ ಈ ಬೂಸ್ಟರ್ ಡೋಸ್ ಉಚಿತವಾಗಿ ಸಿಗಲಿದೆ ಎಂದು ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ